ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಚರ್ಚೆ: ಸಚಿವ ಕಿರಣ್ ರಿಜಿಜು

Date:

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆ ಮತ್ತು ಮತದಾನವು ಮಾರ್ಚ್ 9 ರಂದು ನಡೆಯಲಿದೆ. ವಿರಾಮದ ಬಳಿಕ ಸಂಸತ್ತಿನ ಅಧಿವೇಶನ ಪುನರಾರಂಭಗೊಂಡ ದಿನವೇ (ಮಾರ್ಚ್‌ 9) ಇದನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ ತಿಳಿಸಿದ್ದಾರೆ.

- Advertisement -

ಮಾರ್ಚ್ 9 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನದ ಎರಡನೇ ಹಂತವು ಅತ್ಯಂತ ‘ಕುತೂಹಲಕಾರಿ’ ಆಗಿರಲಿದೆ. ಏಕೆಂದರೆ ಹಲವಾರು ಪ್ರಮುಖ ಕಾನೂನುಗಳು ಮತ್ತು ನಿರ್ಣಾಯಕ ಮಸೂದೆಗಳನ್ನು ಚರ್ಚೆ ಮತ್ತು ಅಂಗೀಕಾರಕ್ಕಾಗಿ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿರೋಧ ಪಕ್ಷಗಳು ಅಧಿವೇಶನದ ಮೊದಲ ಹಂತದಲ್ಲಿ ಮಾಡಿದಂತೆ ಪ್ರತಿಭಟನೆಯನ್ನು ಮುಂದುವರಿಸಿದರೆ, ಅದು ಅಂತಿಮವಾಗಿ ಅವರಿಗೆ ನಷ್ಟ ಎಂದು ಅವರು ಎಚ್ಚರಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

ಮಾರ್ಚ್ 9 ರಂದು ಲೋಕಸಭೆಯಲ್ಲಿ ಸ್ಪೀಕರ್ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯದ ಬಗ್ಗೆ ನಾವು ಚರ್ಚೆ ನಡೆಸಲಿದ್ದೇವೆ. ನಿಯಮದ ಪ್ರಕಾರ ಅಧಿವೇಶನ ಪುನರಾರಂಭಗೊಂಡ ಮೊದಲ ದಿನವೇ ಇದನ್ನು ಕೈಗೆತ್ತಿಕೊಳ್ಳಬೇಕು. ಚರ್ಚೆಯ ನಂತರ ಮತದಾನ ನಡೆಯಲಿದೆ ಎಂದು ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಜನವರಿ 28 ರಂದು ರಾಷ್ಟ್ರಪತಿಗಳ ಭಾಷಣದೊಂದಿಗೆ ಆರಂಭವಾಗಿದ್ದ ಬಜೆಟ್ ಅಧಿವೇಶನಕ್ಕೆ ಫೆಬ್ರವರಿ 12 ರಿಂದ ವಿರಾಮ ನೀಡಲಾಗಿದೆ. ಅಧಿವೇಶನವು ಮಾರ್ಚ್ 9 ರಂದು ಪುನರಾರಂಭಗೊಂಡು ಏಪ್ರಿಲ್ 2 ರಂದು ಮುಕ್ತಾಯಗೊಳ್ಳಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...