ಉತ್ತರ ಪ್ರದೇಶ | ರಾಹುಲ್ ಗಾಂಧಿ ಸೇರಿದಂತೆ ಘಟಾನುಘಟಿಗಳ ಅಖಾಡದಲ್ಲಿ ಸೋಮವಾರ ಮತದಾನ

Date:

ಲೋಕಸಭಾ ಚುನಾವಣೆಯು ದೇಶದಲ್ಲಿ ಒಟ್ಟು ಏಳು ಹಂತಗಳಲ್ಲಿ ನಡೆಯುತ್ತಿದೆ. ಈ ಪೈಕಿ ಈಗಾಗಲೇ ನಾಲ್ಕು ಹಂತಗಳು ಈಗಾಗಲೇ ಮುಗಿದಿದೆ. ಐದನೇ ಹಂತವು ಮೇ 20ಕ್ಕೆ(ಸೋಮವಾರ) ನಡೆಯಲಿದೆ.

- Advertisement -

ಏಳು ಹಂತದ ಲೋಕಸಭೆ ಚುನಾವಣೆಯ ಐದನೇ ಸುತ್ತಿನಲ್ಲಿ ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ ಪ್ರಮುಖ 14 ಲೋಕಸಭಾ ಕ್ಷೇತ್ರಗಳಳ್ಲಿ ಸೋಮವಾರ ಮತದಾನ ನಡೆಯಲಿದೆ. 543 ಸದಸ್ಯರ ಲೋಕಸಭೆಯಲ್ಲಿ ಅತಿ ಹೆಚ್ಚು ಪ್ರಾತಿನಿಧ್ಯವನ್ನು ಹೊಂದಿರುವ ರಾಜ್ಯ ಉತ್ತರ ಪ್ರದೇಶವಾಗಿದೆ. ಪಶ್ಚಿಮ ಬಂಗಾಳದಲ್ಲಿ 42 ಸ್ಥಾನಗಳಿದ್ದರೆ, ಬಿಹಾರದಲ್ಲಿ 40 ಕ್ಷೇತ್ರಗಳಿವೆ. ಈ ಮೂರೂ ರಾಜ್ಯಗಳಲ್ಲಿ ಎಲ್ಲ ಏಳು ಹಂತಗಳಲ್ಲಿಯೂ ಕೂಡ ಮತದಾನ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಮೇ 20ಕ್ಕೆ(ಸೋಮವಾರ) ನಡೆಯಲಿರುವ ಮತದಾನ ಪ್ರಕ್ರಿಯೆಯಲ್ಲಿ ರಾಹುಲ್ ಗಾಂಧಿ ಸೇರಿದಂತೆ ಘಟಾನುಘಟಿಗಳು ಸ್ಪರ್ಧಿಸುತ್ತಿರುವ ಲೋಕಸಭಾ ಕ್ಷೇತ್ರ ಕೂಡ ಒಳಗೊಂಡಿದೆ. ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿ ರಾಯ್ ಬರೇಲಿಯಿಂದ ಕಾಂಗ್ರೆಸ್ ಮುಖಂಡ ಸ್ಪರ್ಧಿಸುತ್ತಿದ್ದಾರೆ.

ಉಳಿದಂತೆ ಮೋಹನ್‌ಲಾಲ್‌ಗಂಜ್, ಲಕ್ನೋ, ಅಮೇಥಿ, ಜಲೌನ್, ಝಾನ್ಸಿ, ಹಮೀರ್‌ಪುರ್, ಬಂದಾ, ಫತೇಪುರ್, ಬಾರಾಬಂಕಿ, ಕೌಶಂಬಿ, ಫೈಜಾಬಾದ್, ಕೈಸರ್‌ಗಂಜ್ ಮತ್ತು ಗೊಂಡಾ ಕ್ಷೇತ್ರಗಳಲ್ಲಿ ಸೋಮವಾರ ಮತದಾನ ನಡೆಯಲಿದೆ.

ಚುನಾವಣಾ ಆಯೋಗದ (ಇಸಿಐ) ಪ್ರಕಾರ , ಐದನೇ ಹಂತದಲ್ಲಿ 144 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಆಯೋಗವು ಒಟ್ಟು 466 ನಾಮಪತ್ರಗಳನ್ನು ಸ್ವೀಕರಿಸಿದ್ದು ಅದರಲ್ಲಿ 147 ಅನ್ನು ಪರಿಶೀಲಿಸಿ, ಅಂತಿಮವಾಗಿ 144 ಅಭ್ಯರ್ಥಿಗಳ ನಾಮಪತ್ರಗಳನ್ನು ಅಂಗೀಕರಿಸಿದೆ.

ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಮತ್ತು ರಾಜ್‌ನಾಥ್ ಸಿಂಗ್ ಐದನೇ ಹಂತದಲ್ಲಿ ಸ್ಪರ್ಧಿಸುತ್ತಿರುವ ಇತರೆ ಪ್ರಮುಖ ರಾಜಕೀಯ ನಾಯಕರು. ಸ್ಮೃತಿ ಇರಾನಿ ಅಮೇಥಿಯಿಂದ ಸ್ಪರ್ಧಿಸುತ್ತಿದ್ದು, ಇವರ ವಿರುದ್ಧ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಿಶೋರಿ ಲಾಲ್ ಶರ್ಮಾ ಕಣದಲ್ಲಿದ್ದಾರೆ. ರಾಜ್‌ನಾಥ್ ಸಿಂಗ್ ಲಕ್ನೋದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದು, ರವಿದಾಸ್ ಮೆಹ್ರೋತ್ರಾ ಎಸ್‌ಪಿಯಿಂದ ಟಿಕೆಟ್ ಪಡೆದುಕೊಂಡಿದ್ದು, ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದಾರೆ.

ಇದನ್ನು ಓದಿದ್ದೀರಾ? ನಾಕೌಟ್‌ ಪಂದ್ಯ | ಆರ್‌ಸಿಬಿ ಗೆಲುವಿಗೆ ಕಾರಣವಾದದ್ದು ಧೋನಿ ಬಾರಿಸಿದ 110 ಮೀಟರ್‌ನ ಸಿಕ್ಸ್!

ಉಳಿದಂತೆ ಕೈಸರ್‌ಗಂಜ್ ಕ್ಷೇತ್ರದಿಂದ ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಕೂಡ ಕಣದಲ್ಲಿದ್ದಾರೆ. ಬಿಜೆಪಿಯು ಬ್ರಿಜ್ ಭೂಷಣ್‌ಗೆ ಟಿಕೆಟ್ ನೀಡಲು ನಿರಾಕರಿಸಿದ್ದರೂ ಕೂಡ, ಅವರ ಮಗನಿಗೆ ಮಣೆ ಹಾಕಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...