ಪ್ರೇಮ ವಿವಾಹ | ಮಗಳನ್ನೇ ಕೊಂದ ತಂದೆ: ಕೃತ್ಯ ಮುಚ್ಚಿಹಾಕಲು ಯತ್ನಿಸಿದ್ದ ಪೊಲೀಸ್ ಅಧಿಕಾರಿ ಅಮಾನತು

Date:

ಕುಟುಂಬದ ವಿರೋಧದ ನಡುವೆಯೂ ತನ್ನ ಪ್ರೇಮಿಯನ್ನು ವಿವಾಹವಾಗಿದ್ದ ಯುವತಿಯನ್ನು ಆಕೆಯ ತಂದೆ ಬರ್ಬರವಾಗಿ ಕೊಲೆಗೈದಿರುವ ಘಟನೆ ಆಂಧ್ರಪ್ರದೇಶದ ಪಲ್ನಾಡು ಜಿಲ್ಲೆಯ ಮಾಚೆರ್ಲಾ ಪಟ್ಟಣದಲ್ಲಿ ನಡೆದಿದೆ. ಪ್ರಕರಣವು ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣವನ್ನು ಆತ್ಮಹತ್ಯೆಯೆಂದು ಬಿಂಬಿಸಲು ಆರೋಪಿಗಳಿಗೆ ನೆರವು ನೀಡಿದ್ದ ಆರೋಪದಲ್ಲಿ ಪೊಲೀಸ್‌ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

- Advertisement -

ಮೃತ ಯುವತಿಯನ್ನು ಮಾಚೆರ್ಲಾ ಪಟ್ಟಣದ ಚೌಡೇಶ್ವರಿ (22) ಎಂದು ಹೆಸರಿಸಲಾಗಿದೆ. ಚೌಡೇಶ್ವರಿ ಮತ್ತು ನಾಗರಾಜು ಎಂಬಾತ ಪರಸ್ಪರ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಪರಿಣಾಮ, ಮನೆ ತೊರೆದಿದ್ದ ಚೌಡೇಶ್ವರಿ ಮಾರ್ಚ್ 4ರಂದು ನಾಗರಾಜು ಜೊತೆ ವಿವಾಹವಾಗಿದ್ದರು. ಮಗಳು ನಾಪತ್ತೆಯಾಗಿದ್ದಾಳೆ ಎಂದು ಆಕೆಯ ಪೋಷಕರು ಪೊಲೀಸ್ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ದೂರು ದಾಖಲಿಸಿಕೊಂಡಿದ್ದ ಮಾಚೆರ್ಲಾ ಸರ್ಕಲ್ ಇನ್ಸ್‌ಪೆಕ್ಟರ್ (CI) ವೆಂಕಟ ರಮಣ ಅವರು ಮಾರ್ಚ್ 15ರಂದು ದಂಪತಿಯನ್ನು ಪತ್ತೆಹಚ್ಚಿದ್ದರು. ಪೊಲೀಸ್‌ ಠಾಣೆಯಲ್ಲಿ, ಚೌಡೇಶ್ವರಿ ತಾನು ವಯಸ್ಕಳಾಗಿದ್ದು, ತನ್ನ ಗಂಡನ ಜೊತೆಗೇ ಇರುವುದಾಗಿ ಹೇಳಿದ್ದರು. ಆದರೆ, ಇನ್ಸ್‌ಪೆಕ್ಟರ್ ವೆಂಕಣ ರಮಣ ಆಕೆಗೆ ಬೆದರಿಕೆ ಹಾಕಿ ಬಲವಂತವಾಗಿ ಪೋಷಕರ ಮನೆಗೆ ಕಳುಹಿಸಿಕೊಟ್ಟಿದ್ದರು ಎಂದು ಆರೋಪಿಸಲಾಗಿದೆ.

ಪೋಷಕರ ಮನೆಗೆ ಬಂದ ಮೂರೇ ದಿನಗಳಲ್ಲಿ (ಮಾರ್ಚ್ 18) ಚೌಡೇಶ್ವರಿ ಶವವಾಗಿ ಪತ್ತೆಯಾಗಿದ್ದರು. ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕುಟುಂಬಸ್ಥರು ಕಥೆ ಕಟ್ಟಿದ್ದರು. ಆದರೆ, ಏಪ್ರಿಲ್ 4 ರಂದು ಹೊರಬಂದ ಮರಣೋತ್ತರ ಪರೀಕ್ಷಾ ವರದಿಯು ಇದು ಆತ್ಮಹತ್ಯೆಯಲ್ಲ, ವ್ಯವಸ್ಥಿತ ಕೊಲೆ ಎಂಬುದನ್ನು ಖಚಿತಪಡಿಸಿದೆ. ಯುವತಿ ನಿದ್ರಿಸುತ್ತಿದ್ದಾಗ ಆಕೆಯ ಮುಖಕ್ಕೆ ದಿಂಬು ಒತ್ತಿ ಉಸಿರುಗಟ್ಟಿಸಿ ಕೊಲ್ಲಲಾಗಿದೆ ಎಂದು ಮರಣ್ಣೋತ್ತರ ವರದಿ ವಿವರಿಸಿದೆ ಎಂದು ತಿಳಿದುಬಂದಿದೆ.

ಈ ಲೇಖನ ಓದಿದ್ದೀರಾ?: ಬಂಗಾಳ ಚುನಾವಣೆ | ಪಶ್ಚಿಮ ರಾಜ್ಯದಲ್ಲಿ ಕಾಂಗ್ರೆಸ್‌ನ 50 ವರ್ಷಗಳ ವನವಾಸ!

ಈ ಹತ್ಯೆಯ ಹಿಂದೆ ಯುವತಿಯ ತಂದೆ ಚಂದ್ರ ಶ್ರೀನು ಮತ್ತು ಮತ್ತೊಬ್ಬ ಸಂಬಂಧಿಯ ಕೈವಾಡವಿರುವುದು ತನಿಖೆಯಲ್ಲಿ ತಿಳಿದುಬಂದಿದೆ. ಮಗಳು ತನ್ನ ಮಾತು ಕೇಳದೆ ಮದುವೆಯಾದಳೆಂಬ ಆಕ್ರೋಶದಿಂದ ಈ ಕೃತ್ಯ ಎಸಗಿರುವುದಾಗಿ ಚಂದ್ರ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಮತ್ತು ಆರೋಪಿಗಳನ್ನು ರಕ್ಷಿಸಲು ಸರ್ಕಲ್ ಇನ್ಸ್‌ಪೆಕ್ಟರ್ ವೆಂಕಟ ರಮಣ ಅವರು ಲಂಚ ಪಡೆದಿದ್ದರು ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಹಣದ ವ್ಯವಹಾರದ ಬಗ್ಗೆ ಬ್ಯಾಂಕ್ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದು, ಸದ್ಯ ಅಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ | ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

ಮನ್ನಾರ್ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ...

ಬೀದರ್‌ | ವಿದ್ಯಾರ್ಥಿಗಳು ಸಮಯ ಪ್ರಜ್ಞೆ, ಶಿಸ್ತು ಮೈಗೂಡಿಸಿಕೊಳ್ಳಿ : ಜಯಕುಮಾರ ಶಿಂಧೆ

ಸಮಯ ಪ್ರಜ್ಞೆ ಹಾಗೂ ಶಿಸ್ತು ಮೈಗೂಡಿಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು ಎಂದು...

ಮುದ್ದೇಬಿಹಾಳದಲ್ಲಿ ತೀವ್ರ ಬರ; ಕಾಲುವೆಗಳಿಗೆ ನೀರು ಹರಿಸಲು ಶಾಸಕ ನಾಡಗೌಡ ಮನವಿ

ಬರದ ಬಿಸಿಲಿಗೆ ಮುದ್ದೇಬಿಹಾಳ ಮತ್ತು ತಾಳಿಕೋಟೆ ತಾಲೂಕುಗಳ ಗ್ರಾಮೀಣ ಬದುಕು ತತ್ತರಿಸುತ್ತಿರುವ...

ಈ ದಿನ ಸಂಪಾದಕೀಯ | ಪ್ರಧಾನಿಗೂ ಸಿಗದ ʼಬಾರಾಖೂನ್ ಮಾಫಿʼ ಗ್ಯಾನೇಶ್ ಕುಮಾರ್‌ಗೆ ಯಾಕೆ? ಕೊಡಿಸಿದವರು ಯಾರು?

ಚುನಾವಣೆಯ ಕಾವಲುಗಾರನಿಗೆ ಕಾನೂನಿನ ಕವಚ ಕುಂಡಲಗಳನ್ನು ನೀಡಿ, ಕಾನೂನಿನ ಕೈಗಳು ಮುಟ್ಟದಂತೆ,...