ಲವ್, ಸೆಕ್ಸ್ ಧೋಖಾ; ಗರ್ಭಿಣಿ‌ ಪ್ರೇಯಸಿಯನ್ನು ಕೊಂದ ದುರುಳ!

Date:

ಯುವತಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ಸಂಬಂಧ ಬೆಳೆಸಿದ್ದ ದುರುಳನೊಬ್ಬ, ಗರ್ಭಿಣಿಯಾಗಿದ್ದ ಯುವತಿಯನ್ನು ಕೊಲೆಗೈದಿರುವ ಘಟನೆ ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಪ್ರಮುಖ ಆರೋಪಿ ರಾಜೇಶ್ ಎಂಬಾತ ಅದೇ ಗ್ರಾಮದ ಯುವತಿಯನ್ನು ಸುಮಾರು ಒಂದು ವರ್ಷದಿಂದ ಪ್ರೀತಿಸುತ್ತಿದ್ದ. ಮದುವೆಯಾಗುವುದಾಗಿ ನಂಬಿಸಿ ಆಕೆಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ್ದ. ಆಕೆ ಅಪ್ರಾಪ್ತ ವಯಸ್ಸಿನಲ್ಲೇ ಗರ್ಭಿಣಿಯಾಗಿದ್ದಳು. ಯುವತಿ 18 ವರ್ಷ ವಯಸ್ಸು ಪೂರೈಸಿದ ನಂತರ, ತನ್ನನ್ನು ಮದುವೆಯಾಗುವಂತೆ ರಾಜೇಶ್ ನನ್ನು ಕೇಳಿದ್ದಾಳೆ. ಅಲ್ಲದೇ ಮದುವೆಯಾಗದಿದ್ದಲ್ಲಿ ಪೊಲೀಸರಿಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾಳೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮದುವೆ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿದ್ದಿ, ರಾಜೇಶ್ ಮತ್ತು ಆತನ ಸ್ನೇಹಿತ ರಾಹುಲ್ ಸೇರಿ, ಕೊಲೆಗೆ ಸಂಚುಹೂಡಿದ್ದಾರೆ. ಮದುವೆಯಾಗುವುದಾಗಿ ಹೇಳಿ ಯುವತಿಯನ್ನು ಕರೆಸಿಕೊಂಡು, ಆಕೆಯ ಕುತ್ತಿಗೆಗೆ ವೇಲ್ ಬಿಗಿದು ಕೊಲೆ‌ ಮಾಡಿದ್ದಾರೆ. ಬಳಿಕ ಆಕೆಯ ಮೃತದೇಹವನ್ನು ಬಾವಿಗೆ ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿ ನಾಪತ್ತೆಯಾಗುತ್ತಿದ್ದಂತೆಯೇ ಆಕೆಯ ಕುಟುಂಬದವರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ತನಿಖೆ ವೇಳೆ ಆರೋಪಿ ರಾಜೇಶ್ ತಾನೆೇ ಕೊಲೆ ಮಾಡಿತ್ತು ಎಂದು ಸತ್ಯ ಒಪ್ಪಿಕೊಂಡಿದ್ದಾನೆ. ಬಳಿಕ ಅಗ್ನಿಶಾಮಕ ಸಿಬ್ಬಂದಿ ಕರೆಸಿ, ಹುಡುಕಾಟ ನಡೆಸಿದ್ದು, ಮೃತದೇಹವನ್ನು ಬಾವಿಯಿಂದ ಮೇಲಕ್ಕೆತ್ತಲಾಗಿದೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಕೊಲೆ ಪ್ರಕರಣ ದಾಖಲಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...