ಲವ್, ಸೆಕ್ಸ್‌ ಧೋಖಾ: ಕಡ್ಡಾಯವಲ್ಲದಿದ್ದರೂ ಆರೋಪಿಗಳ ಬಂಧನವೇಕೆ? ಹೈಕೋರ್ಟ್‌

Date:

ಮದುವೆಯಾಗುವುದಾಗಿ ನಂಬಿಸಿ, ಲೈಂಗಿಕ ಸಂಬಂಧ ಬೆಳೆಸಿ, ನಂತರ ವಂಚಿಸಿದ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಲ್ಲ. ಆದರೂ, ಅಂತಹ ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸುತ್ತಿರುವುದೇಕೆ ಎಂದು ಕರ್ನಾಟಕ ಹೂಕೋರ್ಟ್‌ ಪ್ರಶ್ನಿಸಿದೆ. ಇಂತಹ ಬಂಧನಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.

- Advertisement -

ಚಿಕ್ಕಮಗಳೂರು ಜಿಲ್ಲೆಉ ಮೂಡಿಗೆರೆ ತಾಲೂಕಿನ ಹೊಕ್ಕಳ್ಳಿ ಗ್ರಾಮದ ನಿವಾಸಿ ಎಚ್‌.ಜಿ. ಗಂಗ (29) ಎಂಬಾತ ತನ್ನ ವಿರುದ್ಧ ಬಣಕಲ್ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಅತ್ಯಾಚಾರ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿಯ ಪ್ರಕರಣವನ್ನು ರದ್ದುಕೋರಿ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠವು ಪೊಲೀಸರ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ. ಆರೋಪಿಯು ಜೈಲಿನಿಂದ ಹೊರಬರಬೇಕು ಎಂದು ಮೌಖಿಕವಾಗಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ನ್ಯಾಯಾಲಯದಲ್ಲಿ ಆರೋಪಿ ಪರ ವಾದ ಮಂಡಿಸಿದಿ ವಕೀಲರು, “ಪ್ರಕರಣದಲ್ಲಿ ಅರ್ಜಿದಾರರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೂ, ಅರ್ಜಿದಾರರನ್ನು ಪೊಲೀಸರು ಬಂಧಿಸಿದ್ದಾರೆ. ವಿಚಾರಣಾ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ದೂರು ದಾಖಲಿಸುವಲ್ಲಿ ದೂರುದಾರೆ 1 ವರ್ಷ 3 ತಿಂಗಳು ವಿಳಂಬ ಮಾಡಿದ್ದಾರೆ” ಎಂದು ವಾದಿಸಿದ್ದಾರೆ.

ಅವರ ವಾದವನ್ನು ಆಲಿಸಿದ ಪೀಠವು, ‘ಆರೋಪಿಯನ್ನು ಬಂಧಿಸಿರುವುದೇಕೆ’ ಎಂದು ಪ್ರಶ್ನಿಸಿದೆ. ಕೋರ್ಟ್‌ ಪ್ರಶ್ನೆಗೆ ಉತ್ತರಿಸಿದ ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್‌. ಜಗದೀಶ್‌, ‘ಅರ್ಜಿದಾರ ಆರೋಪಿ ತಲೆಮರೆಸಿಕೊಂಡಿದ್ದರು. ಈಗ ಅವರನ್ನು ಬಂಧಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಅವರ ಉತ್ತರಕ್ಕೆ ಪ್ರತಿಕ್ರಿಯಿಸಿದ ಪೀಠವು, “ಮದುವೆಯಾಗುವುದಾಗಿ ಭರವಸೆ ನೀಡಿ, ಲೈಂಗಿಕ ಸಂಬಂಧ ಬೆಳಸಿ ವಂಚಿಸಿದ ಪ್ರಕರಣ ಇದಾಗಿದೆ. ಈ ರೀತಿಯ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಬೇಕು ಎಂಬುದು ಕಡ್ಡಾಯವಿಲ್ಲ. ಆದರೂ, ಪೊಲೀಸರು ಏಕೆ ಬಂಧಿಸುತ್ತಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ. ಅಪರಾಧ ಸಾಬೀತಾದ ಬಳಿಕ, ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ಆದರೆ, ಮೊದಲೇ ಅವರನ್ನು ಬಂಧಿಸಬಾರದು ಎಂದು ನ್ಯಾಯಾಲಯ ಹೇಳುತ್ತಲೇ ಇದೆ. ಆದರೂ, ಪೊಲೀಸರು ಬಂಧಿಸುವುದನ್ನು ಮುಂದುವರೆಸಿದ್ದಾರೆ. ಇಂಥಹ ಪ್ರಕರಣ ಎದುರಿಸುತ್ತಿರುವ ಹಲವಾರು ಆರೋಪಿಗಳು ಜೈಲಿನಲ್ಲಿದ್ದಾರೆ” ಎಂದು ಹೇಳಿದೆ.

ಈ ಲೇಖನ ಓದಿದ್ದೀರಾ?: ಕೇಂದ್ರದ ಜಾತಿವಾರು ಸಮೀಕ್ಷೆಯಲ್ಲಿ ಅಲೆಮಾರಿಗಳ ಪ್ರಶ್ನೆ

ಇನ್ನು, ಆರೋಪಿ ಅರ್ಜಿದಾರನ ಪರ ವಕೀಲರ ಕುರಿತು ಮಾತನಾಡಿದ ಪೀಠವು, “ದೂರುದಾರೆಯನ್ನು ಅರ್ಜಿದಾರರು ಮದುವೆ ಆಗುತ್ತಾರೆಯೇ? ಮದುವೆಯಾಗಿ ನಿಮ್ಮ ಭರವಸೆ ಉಳಿಸಿಕೊಳ್ಳಿ. ಆರೋಪಿ ಜೈಲಿಗೆ ಹೋಗಿದ್ದಾನಾಲ್ಲವೇ? ಜೈಲಿಗೆ ಹೋಗಿರುವುದರಿಂದ ಮದುವೆ ಆಗುವುದಿಲ್ಲ ಎನ್ನುತ್ತೀರಾ” ಎಂದು ಪ್ರಶ್ನಿಸಿದೆ.

ಇನ್ನು, ಆರೋಪಿಯನ್ನು ಬಂಧಿಸಲಾಗಿದ್ದು, ಆರೋಪಿಯ ನರೀಕ್ಷಣಾ ಜಾಮೀನು ಅರ್ಜಿಯು ಊರ್ಜಿತವಾಗುವುದಿಲ್ಲ ಎಂಬುದನ್ನು ಗಮನಿಸಿದ ಪೀಠವು, ಹೊಸದಾಗಿ ಅರ್ಜಿ ಸಲ್ಲಿಸುವಂತೆ ಸೂಚಿಸಿದೆ. ಅರ್ಜಿದಾರ ಆರೋಪಿ ಜೈಲಿನಿಂದ ಹೊರಬರಬೇಕು ಎಂದು ಮೌಖಿಕವಾಗಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...