ಜನಸಂಖ್ಯೆಯ ಶೇ.88 ರಷ್ಟಿರುವ ಭಾರತೀಯರಿಗೆ ಪ್ರಮುಖ ವಲಯಗಳಲ್ಲಿ ಪ್ರಾತಿನಿಧ್ಯವಿಲ್ಲ: ರಾಹುಲ್ ಗಾಂಧಿ

Date:

ಭಾರತದ ಜನಸಂಖ್ಯೆಯ ಶೇ.88ರಷ್ಟಿರುವ ಒಬಿಸಿ, ದಲಿತ, ಬುಡಕಟ್ಟು ಹಾಗೂ ಅಲ್ಪಸಂಖ್ಯಾತರು ಪ್ರಮುಖ ವಲಯಗಳಾದ ಆಡಳಿತ,ನ್ಯಾಯಾಂಗ ಹಾಗೂ ಮಾಧ್ಯಮ ಕ್ಷೇತ್ರಗಳಲ್ಲಿ ಕಡಿಮೆ ಸಂಖ್ಯೆಯಲ್ಲಿ ಪ್ರತಿನಿಧಿಸುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದರು.

- Advertisement -

ಮಹಾರಾಷ್ಟ್ರದ ಪಾಲ್ಗರ್‌ ಜಿಲ್ಲೆಯ ವಾಡಾ ತಾಲೂಕಿನಲ್ಲಿ ಭಾರತ್‌ ಜೋಡೋ ನ್ಯಾಯ ಯಾತ್ರೆಯಲ್ಲಿ ಪಾಲ್ಗೊಂಡ ಮಾತನಾಡಿದ ಅವರು, ಜನಸಂಖ್ಯೆಯ ಶೇ.6 ರಷ್ಟು ಇರುವ ಮಂದಿ ಮಾತ್ರ ಅಧಿಕಾರ ಹಾಗೂ ದೇಶದ ಸಂಪತ್ತನ್ನು ನಿಯಂತ್ರಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಸರ್ಕಾರದಿಂದ ಉದ್ಘಾಟನೆಗೊಂಡ ವಿಮಾ ಯೋಜನೆಯ ಅನುಕೂಲಗಳನ್ನು ಖಾಸಗಿ ವಿಮಾ ಕಂಪನಿಗಳು ಪಡೆಯುತ್ತಿದ್ದಾರೆ ವಿನಾ ರೈತರು ಪಡೆಯುತ್ತಿಲ್ಲ. ಅತಿವೃಷ್ಟಿಯಿಂದ ಬೆಳೆಗಳು ಹಾಳಾದರೆ ಸರ್ಕಾರ ನೀಡುವ ವಿಮಾ ಹಣವನ್ನು ರೈತರು ಪಡೆಯುತ್ತಿಲ್ಲ. ಬದಲಿಗೆ ಕಂಪನಿಗಳಿಗೆ ಲಾಭವಾಗುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿ ಮತ್ತು ಆರ್ಥಿಕತೆಯ ನಿಜನೋಟ

“ನಮ್ಮ ಪಕ್ಷವು ಆಡಳಿತದಲ್ಲಿ ಹಾಗೂ ಇತರ ವಲಯಗಳಲ್ಲಿ ಅಸಮಾನತೆಯನ್ನು ತಡೆಯಲು ರಾಷ್ಟ್ರಮಟ್ಟದಲ್ಲಿ ಜಾತಿ ಗಣತಿ ನಡೆಸಲು ಒತ್ತು ನೀಡಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿ ಬಂದರೆ ಇಂತಹ ಕಾರ್ಯಕ್ರಮವನ್ನು ಕೈಗೊಳ್ಳಲಿದೆ” ಎಂದರು.

ಒಬಿಸಿ, ದಲಿತರು, ಬುಡಕಟ್ಟು ಹಾಗೂ ಅಲ್ಪಸಂಖ್ಯಾತರು ದೇಶದ ಜನಸಂಖ್ಯೆಯಲ್ಲಿ ಶೇ.88 ರಷ್ಟಿದ್ದಾರೆ. ಆದರೆ ಆಡಳಿತ, ಮಾಧ್ಯಮ ಮತ್ತು ನ್ಯಾಯಾಂಗ ಸೇರಿದ ಇತರ ವಲಯಗಳಲ್ಲಿ ಅವರ ಪ್ರಾತಿನಿಧ್ಯ ತೀರ ಕಡಿಮೆಯಿದೆ. ಒಬಿಸಿ ಸಮುದಾಯಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಏನು ಎಂದು ರಾಹುಲ್ ಗಾಂಧಿ ಇದೇ ಸಂದರ್ಭದಲ್ಲಿ ಪ್ರಶ್ನಿಸಿದರು.

“ಬಡವರನ್ನು ಜಿಎಸ್‌ಟಿ ಮೂಲಕ ಲೂಟಿ ಮಾಡಲಾಗುತ್ತದೆ. ಹಲವು ಯೋಜನೆಗಳಿಗಾಗಿ ಭೂಮಿಯನ್ನು ಭೂಮಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ. ಶ್ರೀಮಂತರ ಭೂಮಿಗಳು ಹಾಗೆಯೇ ಉಳಿಯುತ್ತಿದೆ ಎಂದರು.

ಜನವರಿ 14ರಂದು ಮಣಿಪುರದಿಂದ ಪ್ರಾರಂಭವಾಗಿರುವ ಭಾರತ್‌ ಜೋಡೋ ನ್ಯಾಯ ಯಾತ್ರೆ ಮಾರ್ಚ್‌ 17 ರಂದು ಮುಂಬೈನಲ್ಲಿ ಅಂತ್ಯಗೊಳ್ಳಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...