ಮತ್ತೆ ಬೆಲೆ ಏರಿಕೆ | ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 29 ರೂ. ಹೆಚ್ಚಳ

Date:

ಕಳೆದ ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಗೃಹಬಳಕೆಯ ಎಲ್‌ಪಿಜಿ ಬೆಲೆಯನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. ಭಾನುವಾರ, ಪ್ರತಿ ಸಿಲಿಂಡರ್‌ ಬೆಲೆಯನ್ನು 29 ರೂ. ಹೆಚ್ಚಿಸಿದೆ. ಹಣದುಬ್ಬರದ ಹೊಡೆತದಿಂದ ನಲುಗುತ್ತಿರುವ ಗ್ರಾಹಕರ ಮೇಲೆ ಮತ್ತೆ ಬರೆ ಎಳೆದಿದೆ.

- Advertisement -

ಈ ಹಿಂದೆ, ಮಾರ್ಚ್ 7 ರಂದು ಗೃಹಬಳಕೆ ಸಿಲಿಂಡರ್‌ಗಳ ಬೆಲೆಯನ್ನು 60 ರೂ. ಹೆಚ್ಚಿಸಲಾಗಿತ್ತು. ಈಗ 29 ರೂ. ಹೆಚ್ಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಬೆಲೆ ಏರಿಕೆಯಿಂದಾಗಿ, ದೆಹಲಿಯಲ್ಲಿ ಗೃಹ ಬಳಕೆ ಸಿಲಿಂಡರ್ ಬೆಲೆ 942 ರೂ.ಗೆ ಏರಿಕೆಯಾಗಿದೆ. ಅಂತೆಯೇ . ಮುಂಬೈನಲ್ಲಿ 941.40 ರೂ., ಕೋಲ್ಕತ್ತಾದಲ್ಲಿ 968 ರೂ., ಚೆನ್ನೈನಲ್ಲಿ 957.50 ರೂ., ಪಾಟ್ನಾದಲ್ಲಿ 1031.50 ರೂ., ಹೈದರಾಬಾದ್‌ನಲ್ಲಿ 996 ರೂ., ಲಕ್ನೋದಲ್ಲಿ 980 ರೂ., ಜೈಪುರದಲ್ಲಿ 945.50 ರೂ. ಹಾಗೂ ಬೆಂಗಳೂರಿನಲ್ಲಿ 944.50 ರೂ.ಗೆ ಹೆಚ್ಚಳವಾಗಿದೆ.

ಇದಲ್ಲದೆ, ಮೇ ಮಧ್ಯಭಾಗದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಒಟ್ಟಾರೆಯಾಗಿ ಲೀಟರ್‌ಗೆ 7.50 ರೂ. ಹೆಚ್ಚಿಸಲಾಗಿದ್ದರೆ, ಸಂಕುಚಿತ ನೈಸರ್ಗಿಕ ಅನಿಲ (CNG) ದರಗಳು ಪ್ರತಿ ಕಿಲೋಗ್ರಾಂಗೆ ಸುಮಾರು 6 ರೂ.ಗಳಷ್ಟು ಹೆಚ್ಚಿಸಲಾಗಿದೆ.

ಪ್ರಸ್ತುತ ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆ ಕಡಿತವಾಗಿದೆ. ಆದಾಗ್ಯೂ, ಇಂಧನ ಬಿಕ್ಕಟ್ಟಿನ ನಡುವೆಯೂ ಇತ್ತೀಚೆಗೆ ನಡೆದ ಐದು ರಾಜ್ಯಗಳ ಚುನಾವಣೆಗೂ ಮುನ್ನ ಬೆಲೆ ಏರಿಕೆ ಮಾಡಿರಲಿಲ್ಲ. ಅದರಿಂದಾಗಿದ್ದ ನಷ್ಟವನ್ನು ಸರಿದೂಗಿಸುವ ಹುನ್ನಾರದಿಂದ ಈಗ ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದು ಹೇಳಲಾಗಿದೆ. ಆದರೆ, ಹಲವು ವರ್ಷಗಳಿಂದ ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಬೆಲೆ ತೀರಾ ಕಡಿಮೆ ಇತ್ತು. ಆಗಲೂ ಕೇಂದ್ರ ಸರ್ಕಾರ ಬೆಲೆ ಏರಿಕೆಯ ಬರೆ ಎಳೆದು, ಕಂಪನಿಗಳಿಗೆ ಲಾಭ ಮಾಡಿಕೊಟ್ಟಿತ್ತು. ಗರಿಷ್ಠ ಲಾಭ ಪಡೆದಿದ್ದ ಕಂಪನಿಗಳಿಗೆ ಈಗ ನಷ್ಟದ ಹೆಸರಿನಲ್ಲಿ ಗ್ರಾಹಕರನ್ನು ಸುಲಿಗೆ ಮಾಡಲು ಮುಂದಾಗಿವೆ ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ವಿದೇಶಿ ಪ್ರವಾಸದ ದಾಖಲೆ ಬಹಿರಂಗಕ್ಕೆ ದೆಹಲಿ ಹೈಕೋರ್ಟ್ ನಕಾರ

ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ...

ಈ ದಿನ ಸಂಪಾದಕೀಯ | ʼಕೊಂದು ಉಳಿಸಿಕೊಳ್ಳಬೇಕಾದ ಧರ್ಮ ಯಾವುದಾದರೂ ಇದ್ಯಾ ಈ ಪ್ರಪಂಚದಲ್ಲಿ?ʼ

ಸೌದಿ ಅರೇಬಿಯಾದ ಮರಣದಂಡನೆ ಪ್ರಕರಣದಿಂದ ಚಿಂತನೆಗೆ ಹಚ್ಚುವ ಸಂಗತಿ ಎಂದರೆ, ಧಾರ್ಮಿಕ...

ಶಿವಮೊಗ್ಗ ಜಂಬೂ ಸವಾರಿ ವೇಳೆ ಭಾರೀ ಅನಾಹುತ: ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಅದ್ಧೂರಿ ಚಾಲನೆ ಸಿಕ್ಕು ಅಲ್ಲಿನ...