ಉದ್ಯೋಗವಕಾಶ ಇದ್ದರೂ ಕೆಲಸ ಮಾಡಲು ಬಯಸದ ಕಾರ್ಮಿಕರು: ಎಲ್‌&ಟಿ ಅಧ್ಯಕ್ಷರ ಮತ್ತೊಂದು ವಿವಾದ

Date:

ಲಾರ್ಸೆನ್ & ಟೂಬ್ರೊ (ಎಲ್‌&ಟಿ) ಅಧ್ಯಕ್ಷ ಎಸ್.ಎನ್. ಸುಬ್ರಹ್ಮಣ್ಯನ್ ಮತ್ತೊಂದು ವಿವಾದವನ್ನು ಹುಟ್ಟುಹಾಕಿದ್ದಾರೆ. ಈ ಹಿಂದೆ “ಉದ್ಯೋಗಿಗಳು ವಾರದಲ್ಲಿ 90 ಗಂಟೆಗಳ ಕಾಲ ಕೆಲಸ ಮಾಡಬೇಕು, ಎಷ್ಟು ಹೊತ್ತು ಪತಿ, ಪತ್ನಿ ಮುಖವನ್ನು ನೋಡಿಕೊಂಡು ಕುಳಿತಿರುತ್ತೀರಿ” ಎಂದು ಹೇಳುವ ಮೂಲಕ ಸುಬ್ರಹ್ಮಣ್ಯನ್ ವಿವಾದದಲ್ಲಿ ಸಿಲುಕಿದ್ದರು.

- Advertisement -

“ದೇಶದಲ್ಲಿ ಕಾರ್ಮಿಕರು ಕೆಲಸ ಮಾಡಲು ಇಚ್ಛಿಸುತ್ತಿಲ್ಲ. ಕಲ್ಯಾಣ ಯೋಜನೆಗಳಿಂದಾಗಿ ಕಾರ್ಮಿಕರು ಒಂದು ಕಡೆಯಿಂದ ಮತ್ತೊಂದು ಕಡೆಗೆ ಸ್ಥಳಾಂತರಗೊಳ್ಳಲು ಹಿಂಜರಿಯುತ್ತಿದ್ದಾರೆ” ಎಂದು ಹೇಳುವ ಮೂಲಕ ಮತ್ತೊಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಮಂಗಳೂರು | ವಾರಕ್ಕೆ 90 ಗಂಟೆ ಕೆಲಸ ಅವೈಜ್ಞಾನಿಕ ಹಾಗೂ ಅಮಾನವೀಯ; ಸೈಯ್ಯದ್ ಮುಜೀಬ್

ಮಂಗಳವಾರ ಚೆನ್ನೈನಲ್ಲಿ ನಡೆದ ಸಿಐಐನ ಮಿಸ್ಟಿಕ್ ಸೌತ್ ಗ್ಲೋಬಲ್ ಲಿಂಕೇಜಸ್ ಶೃಂಗಸಭೆ 2025ರಲ್ಲಿ ಮಾತನಾಡಿದ ಸುಬ್ರಹ್ಮಣ್ಯನ್, “ಕಾರ್ಮಿಕರಿಗೆ ತಮ್ಮ ಊರಿನಲ್ಲಿ ಸೌಕರ್ಯಗಳು ಇರುವ ಕಾರಣದಿಂದಾಗಿ ಮತ್ತೊಂದು ಕಡೆ ಪ್ರಯಾಣಿಸಲು ಹಿಂಜರಿಯುತ್ತಿದ್ದಾರೆ. ಆದ್ದರಿಂದ ನಿರ್ಮಾಣ ಉದ್ಯಮದಲ್ಲಿ ಕಾರ್ಮಿಕರನ್ನು ಪಡೆಯುವುದು ಕಷ್ಟವಾಗಿದೆ. ನರೇಗಾ (ಎಂಜಿಎನ್‌ಆರ್‌ಇಜಿಎ), ನೇರ ಹಣ ವರ್ಗಾವಣೆ ಮತ್ತು ಜನಧನ್ ಖಾತೆಗಳಂತಹ ಯೋಜನೆಗಳಿಂದಾಗಿ ಕಾರ್ಮಿಕರನ್ನು ಪಡೆಯುವುದು ಈಗ ಕಷ್ಟವಾಗಿದೆ” ಎಂದು ಹೇಳಿರುವುದಾಗಿ ಎನ್‌ಡಿ ಟಿವಿ ವರದಿ ಮಾಡಿದೆ.

“ಕಾರ್ಮಿಕರು ಈಗ ಉದ್ಯೋಗವಕಾಶ ಇದ್ದಾಗಲೂ ಸ್ಥಳಾಂತರಗೊಂಡು ಕೆಲಸ ಮಾಡಲು ಇಚ್ಛಿಸಲ್ಲ. ಬಹುಶಃ ಅವರ ಸ್ಥಳೀಯ ಆರ್ಥಿಕತೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದು ಅದಕ್ಕೆ ಕಾರಣವಾಗಿರಬಹುದು. ಬಹುಶಃ ವಿವಿಧ ಸರ್ಕಾರಿ ಯೋಜನೆಗಳು ಇದಕ್ಕೆ ಕಾರಣವಾಗಿರಬಹುದು. ಇವೆಲ್ಲವುದರಿಂದಾಗಿ ದೇಶದ ಮೂಲಸೌಕರ್ಯ ನಿರ್ಮಾಣದ ಮೇಲೆ ಕಾರ್ಮಿಕರ ಕೊರತೆಯ ಪರಿಣಾಮ ಬೀರುತ್ತಿದೆ” ಎಂದರು.

“ಹಣದುಬ್ಬರದ ಕಾರಣದಿಂದಾಗಿ ಕಾರ್ಮಿಕರ ವೇತನವನ್ನು ಕೂಡಾ ಪರಿಷ್ಕರಿಸುವ ಅಗತ್ಯವಿದೆ. ದೇಶದಲ್ಲಿ ಕಾರ್ಮಿಕರು ಪಡೆಯುವ ವೇತನಕ್ಕಿಂತ 3.5 ಪಟ್ಟು ಹೆಚ್ಚು ವೇತನ ನೀಡುವ ಮೂಲಕ ಮಧ್ಯಪ್ರಾಚ್ಯವು ಭಾರತದ ಕಾರ್ಮಿಕರನ್ನು ಆಕರ್ಷಿಸುತ್ತಿದೆ” ಎಂದು ಹೇಳಿದರು.

ಇದನ್ನು ಓದಿದ್ದೀರಾ? 70 ಗಂಟೆ, 90 ಗಂಟೆ ಕೆಲಸ: ಉದ್ಯೋಗಿಗಳ ರಕ್ತ ಹೀರುವುದು ಲಾಭಕೋರ ಬಂಡವಾಳಿಗರ ಸಂಚು

ಈ ಹಿಂದೆ ಎಸ್.ಎನ್. ಸುಬ್ರಹ್ಮಣ್ಯನ್ ಅವರು, “ನೀವು ಮನೆಯಲ್ಲಿ ಕುಳಿತು ಏನು ಮಾಡುತ್ತೀರಿ? ನಿಮ್ಮ ಪತ್ನಿಯನ್ನು ಎಷ್ಟು ಹೊತ್ತು ನೋಡಬಹುದು? ಬನ್ನಿ, ಕಚೇರಿಗೆ ಹೋಗಿ ಕೆಲಸ ಮಾಡಲು ಪ್ರಾರಂಭಿಸಿ. ನಾನು ಭಾನುವಾರವೂ ಕೂಡಾ ಕೆಲಸ ಮಾಡುತ್ತೇನೆ” ಎಂದು ಹೇಳಿದ್ದರು.

ಈ ಹೇಳಿಕೆಯು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈಗಾಗಲೇ ಜನರು ಕೆಲಸದ ಒತ್ತಡದಿಂದಾಗಿ ಕುಟುಂಬದೊಂದಿಗೆ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಹಲವು ಮಂದಿ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಹೀಗಿರುವಾಗ ಇನ್ನೂ ಅಧಿಕ ಅವಧಿ ಕೆಲಸ ಮಾಡಿ ಮಾನಸಿಕ ಒತ್ತಡ ಇನ್ನಷ್ಟು ಹೆಚ್ಚಾಗುತ್ತದೆ ಎಂದು ನೆಟ್ಟಿಗರು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...