ಲಕ್ನೋ | ಮನರೇಗಾ ಸ್ವರೂಪ ಬದಲಾವಣೆ ಹಿಂಪಡೆಯುವಂತೆ ಕಮ್ಯುನಿಸ್ಟ್ ಪಕ್ಷಗಳ ಆಗ್ರಹ

Date:

ಮನರೇಗಾದಲ್ಲಿನ ಪ್ರಸ್ತಾವಿತ ಬದಲಾವಣೆಗಳ ವಿರುದ್ಧ ಎಡರಂಗ ಮತ್ತು ಕಮ್ಯುನಿಸ್ಟ್ ಪಕ್ಷಗಳು ಸೋಮವಾರ ಲಕ್ನೋದಲ್ಲಿ ಪ್ರತಿಭಟನೆ ನಡೆಸಿದ್ದು, ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಿದವು.

- Advertisement -

“ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹೆಸರನ್ನು ತೆಗೆದುಹಾಕುವ ಮೂಲಕ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(MGNREGA)ಯ ಮೂಲ ಆಶಯವನ್ನು ದುರ್ಬಲಗೊಳಿಸುತ್ತಿದೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಕೇಂದ್ರ ಸರ್ಕಾರವು ಮನರೇಗಾದಂತಹ ಐತಿಹಾಸಿಕ ಯೋಜನೆಯನ್ನು ಕೊನೆಗೊಳಿಸುವತ್ತ ಹೆಜ್ಜೆ ಇಡುತ್ತಿದೆ. ‘ವಿಕಸಿತ್‌ ಭಾರತ್ ಉದ್ಯೋಗ ಮತ್ತು ಜೀವನೋಪಾಯ ಖಾತರಿ ಮಿಷನ್ (ಗ್ರಾಮೀಣ)'(ವಿಬಿ ಜಿ ರಾಮ್‌ ಜಿ)ನಂತಹ ಹೊಸ ನಿಬಂಧನೆಗಳ ಮೂಲಕ ಮನರೇಗಾವನ್ನು ಕ್ರಮೇಣ ತೆಗೆದುಹಾಕಲು ಸರ್ಕಾರ ಮುಂದಾಗಿದೆ. ಇದರಿಂದ ಗ್ರಾಮೀಣ ಕಾರ್ಮಿಕರು ಮತ್ತು ರೈತರಿಗೆ ಹಾನಿಉಂಟಾಗುತ್ತದೆ” ಎಂದು ಆರೋಪಿಸಿದರು.

ಹಣಕಾಸಿನ ಪಾಲಿನ ಕುರಿತು ಪ್ರಶ್ನೆ

“ಮನರೇಗಾದಲ್ಲಿ ಈ ಹಿಂದೆ ಕೇಂದ್ರ ಸರ್ಕಾರವು ಪ್ರಮುಖ ಕೊಡುಗೆ ನೀಡುತ್ತಿತ್ತು. ಆದರೆ ಹೊಸ ಮಸೂದೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಣಕಾಸಿನ ಪಾಲನ್ನು ಬದಲಾಯಿಸಲಾಗುತ್ತಿದ್ದು, ರಾಜ್ಯಗಳ ಮೇಲೆ ಹೆಚ್ಚಿನ ಹೊರೆಯನ್ನು ಹೇರಲಾಗುತ್ತಿದೆ. ಸಾಲದ ಸುಳಿಯಲ್ಲಿ ಸಿಲುಕಿರುವ ರಾಜ್ಯ ಸರ್ಕಾರಗಳು ಈ ವ್ಯವಸ್ಥೆಯನ್ನು ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಇದು ಯೋಜನೆಯನ್ನು ಸ್ವಯಂಚಾಲಿತವಾಗಿ ದುರ್ಬಲಗೊಳಿಸುತ್ತದೆ” ಎಂದು ಎಡಪಕ್ಷಗಳು ಆರೋಪಿಸಿವೆ.

“ಲಕ್ಷಾಂತರ ಮಂದಿ ಗ್ರಾಮೀಣ ಕಾರ್ಮಿಕರಿಗೆ ಮನರೇಗಾ ಉದ್ಯೋಗ ಖಾತರಿಯಾಗಿದೆ. ಈ ಯೋಜನೆ ದುರ್ಬಲಗೊಂಡರೆ, ಗ್ರಾಮೀಣ ಪ್ರದೇಶಗಳಲ್ಲಿ ನಿರುದ್ಯೋಗ ಮತ್ತು ವಲಸೆ ಹೆಚ್ಚಾಗುತ್ತದೆ. ಹಾಗಾಗಿ ಮನರೇಗಾ ಸ್ವರೂಪ ಬದಲಾವಣೆ ಕಾರ್ಮಿಕ ವಿರೋಧಿ ನಡೆಯಾಗಿದೆ” ಎಂದು ಕರೆದರು.

ಈ ಸುದ್ದಿ ಓದಿದ್ದೀರಾ? ಮನರೇಗಾ ಹೆಸರು ಬದಲಾವಣೆ ವಿರುದ್ಧ ಅಭಿಯಾನ: ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಘೋಷಣೆ

“ವಿಕಸಿತ್ ಭಾರತ್ ಉದ್ಯೋಗ ಮತ್ತು ಜೀವನೋಪಾಯ ಖಾತರಿ ಮಿಷನ್(ಗ್ರಾಮೀಣ) ಮಸೂದೆಯನ್ನು ತಕ್ಷಣವೇ ಹಿಂಪಡೆಯಬೇಕು. ಮನರೇಗಾದಂತಹ ಐತಿಹಾಸಿಕ ಮತ್ತು ಸಾರ್ವಜನಿಕ ಕಲ್ಯಾಣ ಯೋಜನೆಗಳು ಯಾವುದೇ ಬದಲಾವಣೆಗಳಿಲ್ಲದೆ ಮುಂದುವರೆಯಬೇಕು” ಒತ್ತಾಯಿಸಿದರು.

“ಕೇಂದ್ರ ಸರ್ಕಾರ ತಮ್ಮ ಬೇಡಿಕೆಗಳಿಗೆ ಗಮನ ಕೊಡದಿದ್ದರೆ, ಚಳವಳಿಯನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು” ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...