ಪಿಎಸಿ ಸಭೆಗೆ ಎರಡನೇ ಬಾರಿಯೂ ಸೆಬಿ ಮುಖ್ಯಸ್ಥೆ ಮಾಧವಿ ಪುರಿ ಬುಚ್ ಗೈರು

Date:

ಭಾರತೀಯ ಷೇರು ಮಾರುಕಟ್ಟೆ ನಿಯಂತ್ರಕ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಪುರಿ ಬುಚ್ ಗುರುವಾರ ಎರಡನೇ ಬಾರಿಗೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಸಭೆಗೆ ಗೈರಾಗಿದ್ದಾರೆ. ಕೊನೆಗೆ ಸಮಿತಿಯು ಸಭೆಯನ್ನು ಮುಂದೂಡಿದೆ.

- Advertisement -

“ಕೆಲವು ಕಾರಣಗಳಿಂದ ಸಭೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಬುಚ್ ಅವರು ಬೆಳಿಗ್ಗೆ ಸಮಿತಿಗೆ ತಿಳಿಸಿದರು” ಎಂದು ಪಿಎಸಿ ಅಧ್ಯಕ್ಷ ಕೆ ಸಿ ವೇಣುಗೋಪಾಲ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸಾರ್ವಜನಿಕ ಲೆಕ್ಕಪತ್ರ ಸಮಿತಿ (ಪಿಎಸಿ) ಮುಖ್ಯಸ್ಥ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, “ಸಮಿತಿಯ ಮೊದಲ ಸಭೆಯಲ್ಲಿ ನಾವು ನಮ್ಮ ನಿಯಂತ್ರಣ ಸಂಸ್ಥೆಗಳ ಪರಿಶೀಲನೆಯ ಬಗ್ಗೆ ಸ್ವಯಂಪ್ರೇರಿತ ನಿರ್ಧಾರ ಮಾಡಿದೆವು. ಅದಕ್ಕಾಗಿಯೇ ನಾವು ಸೆಬಿಗೆ ಸಭೆಗೆ ಹಾಜರಾಗಲು ತಿಳಿಸಿದ್ದೇವೆ. ಸಮಿತಿಯ ಶಾಖೆಯು ಸಂಬಂಧಪಟ್ಟವರಿಗೆ ನೋಟಿಸ್ ಕಳುಹಿಸುತ್ತದೆ. ಮೊದಲನೆಯದಾಗಿ, ಅವರು ಸಭೆಗೆ ಹಾಜರಾಗುವುದರಿಂದ ವಿನಾಯಿತಿ ಕೋರಿದರು. ನಾವು ಅದನ್ನು ನಿರಾಕರಿಸಿದೆವು. ಅದಾದ ಬಳಿಕ ಅವರು ಮತ್ತು ಅವರ ತಂಡ ಸಭೆಗೆ ಹಾಜಾರಾಗುವುದಾಗಿ ಖಚಿತಪಡಿಸಿದ್ದರು” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಸೆಬಿ ಅಧ್ಯಕ್ಷೆ ವಿರುದ್ಧ ಲೋಕಪಾಲ್‌ಗೆ ದೂರು ನೀಡಿದ ಸಂಸದೆ ಮಹುವಾ ಮೊಯಿತ್ರಾ

“ಇಂದು ಬೆಳಿಗ್ಗೆ 9:30ಕ್ಕೆ ಅವರು ದೆಹಲಿಗೆ ಪ್ರಯಾಣಿಸುವ ಸ್ಥಿತಿಯಲ್ಲಿಲ್ಲ ಎಂದು ನನಗೆ ತಿಳಿಸಿದರು. ಮಹಿಳೆಯೊಬ್ಬರ ಮನವಿಯಾದ ಕಾರಣ ನಾವು ಅದನ್ನು ಪರಿಗಣಿಸಿ ಸಭೆಯನ್ನು ಇನ್ನೊಂದು ದಿನಕ್ಕೆ ಮುಂದೂಡುವುದು ಉತ್ತಮ ಎಂದು ನಾವು ಭಾವಿಸಿದ್ದೇವೆ” ಎಂದು ವೇಣುಗೋಪಾಲ್ ಹೇಳಿದ್ದಾರೆ.

ಭಾರತದ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿ ಗ್ರೂಪ್‌ನ ವಂಚನೆಯನ್ನು ಕಳೆದ ವರ್ಷ ಬಹಿರಂಗಪಡಿಸಿದ್ದ ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್‌ ಕಂಪನಿ ಹಿಂಡನ್‌ಬರ್ಗ್‌ 2024ರ ಆಗಸ್ಟ್ 10ರಂದು ಭಾರತಕ್ಕೆ ಸಂಬಂಧಿಸಿದ ಮತ್ತೊಂದು ಸ್ಪೋಟಕ ವರದಿಯನ್ನು ಬಹಿರಂಗಪಡಿಸಿದೆ.

ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ (ಸೆಬಿ) ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಅದಾನಿ ಮನಿ ಸೈಫನಿಂಗ್ ಹಗರಣದಲ್ಲಿ ಬಳಸಲಾದ ಆಫ್‌ಶೋರ್ ಫಂಡ್‌ನಲ್ಲಿ ಪಾಲನ್ನು ಹೊಂದಿದ್ದರು ಎಂದು ಹಿಂಡನ್‌ಬರ್ಗ್ ಆರೋಪಿಸಿದೆ. ಆದರೆ ಈ ಆರೋಪವನ್ನು ಸೆಬಿ ಅಧ್ಯಕ್ಷೆ ಮತ್ತು ಅವರ ಪತಿ ಅಲ್ಲಗಳೆದಿದ್ದಾರೆ.

ಇದನ್ನು ಓದಿದ್ದೀರಾ? ಮಾಧವಿ ಬುಚ್ ವಿರುದ್ಧ ತಿರುಗಿಬಿದ್ದ ಸೆಬಿ ಉನ್ನತಾಧಿಕಾರಿಗಳು

ಇವೆಲ್ಲವುದರ ನಡುವೆ ಸದ್ಯ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಪ್ರಸ್ತುತ ಸೆಬಿಯ ಕಾರ್ಯನಿರ್ವಹಣೆಯನ್ನು ಪರಿಶೀಲಿಸುತ್ತಿದೆ. ಸಮಿತಿಯ ಮುಂದೆ ಹಾಜರಾಗುವಂತೆ ಬುಚ್‌ಗೆ ಸಮನ್ಸ್ ನೀಡಲಾಗಿದೆ. ಸಭೆಗೆ ಹಾಜರಾಗದ ಕಾರಣ ಸಭೆ ಮುಂದೂಡಲಾಗಿದೆ.

ಆದರೆ ಪಿಎಸಿ ಸಭೆಯನ್ನು ಮುಂದೂಡಿದ ನಂತರ, ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಅವರು ವೇಣುಗೋಪಾಲ್ ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...