ಮಧ್ಯಪ್ರದೇಶ | 25 ಲಿಂಗತ್ವ ಅಲ್ಪಸಂಖ್ಯಾತರು ‘ಫಿನೈಲ್’ ಸೇವಿಸಿ ಸಾಮೂಹಿಕ ಆತ್ಮಹತ್ಯೆಗೆ ಯತ್ನ; ಆಸ್ಪತ್ರೆಗೆ ದಾಖಲು

Date:

ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಸುಮಾರು 25 ಮಂದಿ ವಿಷಕಾರಿ ‘ಫಿನೈಲ್’ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಅವರೆಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಎಲ್ಲ 25 ಮಂದಿಗೂ ಮಹಾರಾಜ ಯಶವಂತರಾವ್ ಸರ್ಕಾರಿ ಆಸ್ಪತ್ರೆಯಲ್ಲಿ (MYH) ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಯ ಉಸ್ತುವಾರಿ ಸೂಪರಿಂಟೆಂಡೆಂಟ್-ಇನ್-ಚಾರ್ಜ್ ಡಾ. ಬಸಂತ್ ಕುಮಾರ್ ನಿಂಗ್ವಾಲ್ ಹೇಳುವಂತೆ; “ಅವರೆಲ್ಲರೂ ಒಟ್ಟಿಗೆ ಫಿನೈಲ್ ಸೇವಿಸಿದ್ದಾಗಿ ಹೇಳಿಕೊಂಡಿದ್ದಾರೆ. ಸದ್ಯ, ಯಾವುದೇ ರೋಗಿಗಳ ಸ್ಥಿತಿ ಗಂಭೀರವಾಗಿಲ್ಲ. ಚಿಕಿತ್ಸೆ ನೀಡಲಾಗುತ್ತಿದೆ. ಪರೀಕ್ಷೆಗಳನ್ನು ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಆದಾಗ್ಯೂ, ಲಿಂಗತ್ವ ಅಲ್ಪಸಂಖ್ಯಾತರ ಈ ಆಘಾತಕಾರಿ ನಿರ್ಧಾರಕ್ಕೆ ಕಾರಣವೇನು ಎಂಬುದು ಗೊತ್ತಾಗಿಲ್ಲ ಎಂದು ವರದಿಯಾಗಿದೆ.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ರಾಜೇಶ್ ದಂಡೋಟಿಯಾ, “ಟ್ರಾನ್ಸ್‌ಜೆಂಡರ್ ಸಮುದಾಯದ ಜನರು ಯಾವ ವಿಷಕಾರಿ ವಸ್ತುವನ್ನು ಸೇವಿಸಿದ್ದಾರೆ. ಯಾಕೆ ಈ ನಿರ್ಧಾರ ಮಾಡಿದ್ದಾರೆ ಎಂಬುದು ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ” ಎಂದು ಹೇಳಿದ್ದಾರೆ.

ಎರಡು ಸ್ಥಳೀಯ ಗುಂಪುಗಳ ನಡುವಿನ ವಿವಾದವೂ ಈ ಘಟನೆಗೆ ಕಾರಣವಾಗಿರಬಹುದು ಎಂದು ಕೆಲವರು ಶಂಕಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...