ಮಧ್ಯಪ್ರದೇಶ | ಭೀಕರ ಅಪಘಾತ; ಮಗು ಸೇರಿ 9 ಮಂದಿ ದಾರುಣ ಸಾವು

Date:

ಶನಿವಾರ ತಡರಾತ್ರಿ ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದು, 23 ಮಂದಿಗೆ ಗಾಯಗಳಾಗಿವೆ.

- Advertisement -

ಮೈಹಾರ್ ಜಿಲ್ಲೆಯ ದೇಹತ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 30ರಲ್ಲಿ ರಾತ್ರಿ 11.30ರ ಸುಮಾರಿಗೆ ಪ್ರಯಾಣಿಕರಿದ್ದ ಬಸ್‌ ಒಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಸ್‌ನಲ್ಲಿ 45 ಪ್ರಯಾಣಿಕರಿದ್ದು, ಪ್ರಯಾಗ್‌ರಾಜ್‌ನಿಂದ ರೇವಾ ಮೂಲಕ ನಾಗ್ಪುರಕ್ಕೆ ತೆರಳುತ್ತಿತ್ತು. ಹೆದ್ದಾರಿಯಲ್ಲಿನ ಉಪಾಹಾರ ಗೃಹದ ಬಳಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಒಂದೇ ಕುಟುಂಬದ ಮೂವರು ಮಹಿಳೆಯರು, ಓರ್ವ ಬಾಲಕಿ ಬಾವಿಯಲ್ಲಿ ಶವವಾಗಿ ಪತ್ತೆ

ಇನ್ನು ಗಾಯಾಳುಗಳನ್ನು ಸತ್ನಾ, ಅಮರಪತನ್ ಮತ್ತು ಮೈಹಾರ್ ಆಸ್ಪತ್ರೆಗಳಲ್ಲಿ ದಾಖಲಿಸಲಾಗಿದೆ. ಗಾಯಾಳುಗಳನ್ನು ಮೊದಲು ಮೈಹರ್ ಮತ್ತು ಅಮರ್‌ಪತನ್ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದ್ದು ಬಳಿಕ ಅಮರಪತನ್‌ನಿಂದ ಮೂವರನ್ನು ಮತ್ತು ಮೈಹರ್‌ನಿಂದ ಐವರನ್ನು ಸತ್ನಾ ಜಿಲ್ಲಾ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಬಸ್ ಸಂಪೂರ್ಣ ಜಖಂಗೊಂಡಿದೆ. ಹಲವಾರು ಪ್ರಯಾಣಿಕರು ಬಸ್ಸಿನೊಳಗೆ ಸಿಲುಕಿಕೊಂಡಿದ್ದರು. ಬಸ್‌ ಒಳಗೆ ಸಿಲುಕಿದ್ದ ಪ್ರಯಾಣಿಕರನ್ನು ಹೊರ ತೆಗೆಯಲು ಜೆಸಿಬಿ ಹಾಗೂ ಗ್ಯಾಸ್ ಕಟರ್ ಯಂತ್ರಗಳನ್ನು ಬಳಸಲಾಗಿದೆ.

ಇದನ್ನು ಓದಿದ್ದೀರಾ? ಮಧ್ಯಪ್ರದೇಶ । ಹಾಡಹಗಲೇ ಮಹಿಳೆ ಮೇಲೆ ಅತ್ಯಾಚಾರ; ಕಾಮುಕನ ಕೃತ್ಯ ನೋಡುತ್ತ ನಿಂತ ಜನ

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮೈಹರ್‌ನ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಅಗರ್ವಾಲ್, “ಪ್ರಯಾಗ್‌ರಾಜ್‌ನಿಂದ ನಾಗ್ಪುರಕ್ಕೆ ಸ್ಲೀಪರ್ ಬಸ್ ಪ್ರಯಾಣಿಸುತ್ತಿತ್ತು. ದೇಹತ್ ಪೊಲೀಸ್ ಠಾಣೆ ಪ್ರದೇಶವನ್ನು ತಲುಪಿದಾಗ ಕಲ್ಲುಗಳನ್ನು ತುಂಬಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಪೊಲೀಸರು ತಕ್ಷಣವೇ ಘಟನಾ ಸ್ಥಳಕ್ಕೆ ಆಗಮಿಸಿದರು. ಮೊದಲು ಸುರಕ್ಷಿತವಾಗಿದ್ದವರನ್ನು ಸ್ಥಳಾಂತರಿಸಲಾಯಿತು” ಎಂದು ತಿಳಿಸಿದರು.

“ಅನೇಕರಿಗೆ ಗಾಯಗಳಾಗಿವೆ. ಬಸ್‌ನಲ್ಲೇ ಸಿಲುಕಿದ್ದ ಎಲ್ಲರನ್ನೂ ರಕ್ಷಿಸಲಾಗಿದೆ. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 23 ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ದುರದೃಷ್ಟವಶಾತ್, ಇನ್ನೂ ಮೂವರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭಿಸಿದೆ” ಎಂದು ಮಾಹಿತಿ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...