ಮಧ್ಯಪ್ರದೇಶ | ಬಿಜೆಪಿ ʼಡಬಲ್‌ ಎಂಜಿನ್‌ʼ ಬೂಟಾಟಿಕೆ ಬಯಲು; ಶೋಚನೀಯ ಸ್ಥಿತಿಯಲ್ಲಿ ಸರ್ಕಾರಿ ಶಾಲೆಗಳು

Date:

ಸರ್ಕಾರಿ ಶಾಲೆ ಎಂದರೆ, ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ಸುರಕ್ಷಿತ ಕಟ್ಟಡ, ಮೂಲಸೌಕರ್ಯ ಕಲ್ಪಿಸುವುದು ಸರ್ಕಾರದ ಹೊಣೆ. ಆದರೆ ಮಧ್ಯಪ್ರದೇಶದಲ್ಲಿ ಸರ್ಕಾರಿ ಶಾಲೆಗಳ ದುಸ್ಥಿತಿ ಎಷ್ಟರಮಟ್ಟಿಗೆ ತಲುಪಿದೆ ಎಂಬುದಕ್ಕೆ ಕೆಲ ಘಟನೆಗಳು ಸಾಕ್ಷಿಯಾಗಿವೆ. ಶಾಲಾ ಕಟ್ಟಡಕ್ಕಾಗಿ ವರ್ಷಗಳ ಕಾಲ ಸರ್ಕಾರದ ನೆರವು ಕಾಯುತ್ತಿದ್ದ ಗ್ರಾಮಸ್ಥರು, ಕೊನೆಗೆ ಸರ್ಕಾರದ ನಿರೀಕ್ಷೆ ಕೈಬಿಟ್ಟು ತಾವೇ ಹಣ ಸಂಗ್ರಹಿಸಿ, ಶ್ರಮದಾನ ಮಾಡಿ ಶಾಲೆ ನಿರ್ಮಿಸಲು ಮುಂದಾಗಿದ್ದಾರೆ. ಇನ್ನೊಂದೆಡೆ ಚಪ್ಪರ ಕಟ್ಟಿ ತಾತ್ಕಾಲಿಕ ಶೆಡ್‌ ನಿರ್ಮಿಸಿದ್ದಾರೆ.

- Advertisement -

ಮಂಡ್ಲಾ ಜಿಲ್ಲೆಯ ಘುಘರಿ ಬ್ಲಾಕ್‌ನ ಸಿಂಘನಪುರಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡು ಮಕ್ಕಳಿಗೆ ಅಪಾಯಕಾರಿಯಾಗುವ ಸ್ಥಿತಿ ನಿರ್ಮಾಣವಾಗಿತ್ತು. ಕಟ್ಟಡದ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಮಕ್ಕಳನ್ನು ಸುಮಾರು ಮೂರು ಕಿ.ಮೀ. ದೂರದಲ್ಲಿರುವ ಮತ್ತೊಂದು ಶಾಲೆಗೆ ಕಳುಹಿಸುವ ಪರಿಸ್ಥಿತಿ ಎದುರಾಗಿತ್ತು. ಈ ಕುರಿತು ಕೆಲ ತಿಂಗಳ ಹಿಂದೆ ಸಾಕಷ್ಟು ವರದಿಗಳೂ ಆದವು. ಆದರೆ ದೂರದ ಶಾಲೆಗೆ ತೆರಳುವುದು ಮಕ್ಕಳಿಗೆ ಕಷ್ಟವಾಗಿದ್ದರಿಂದ ಗ್ರಾಮಸ್ಥರು ಸರ್ಕಾರದ ನೆರವಿಗಾಗಿ ಕಾಯದೆ, ಸ್ವತಃ ಶಾಲೆ ನಿರ್ಮಿಸಲು ಮುಂದಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಗ್ರಾಮಸ್ಥರು ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಕಟ್ಟಿಗೆ ಗರಿ ಬಳಸಿಕೊಂಡು ತಾತ್ಕಾಲಿಕ ಕಟ್ಟಡ ನಿರ್ಮಾಣದ ಕೆಲಸ ಆರಂಭಿಸಿದ್ದಾರೆ. ಇದೇ ರೀತಿಯ ಮತ್ತೊಂದು ಘಟನೆ ಡಿಂಡೋರಿ ಜಿಲ್ಲೆಯ ಸಮನಾಪುರ ಬ್ಲಾಕ್‌ನ ಶಿಕಾರಿಟೋಲಾ ಗ್ರಾಮದಲ್ಲಿ ನಡೆದಿದೆ. ಅಲ್ಲಿನ ಸರ್ಕಾರಿ ಶಾಲೆಯ ಹಳೆಯ ಕಟ್ಟಡ ಶಿಥಿಲಗೊಂಡಿದ್ದರಿಂದ ಅದನ್ನು ತೆರವುಗೊಳಿಸಲಾಗಿತ್ತು. ಹೊಸ ಕಟ್ಟಡಕ್ಕಾಗಿ ಗ್ರಾಮಸ್ಥರು ಸುಮಾರು ಮೂರು ವರ್ಷಗಳಿಂದ ಅಧಿಕಾರಿಗಳ ಮೊರೆ ಹೋಗಿದ್ದರು. ಆದರೆ ಭರವಸೆಗಳ ಹೊರತಾಗಿ ಹೊಸ ಶಾಲಾ ಕಟ್ಟಡ ನಿರ್ಮಾಣವಾಗಿರಲಿಲ್ಲ.

image 2026 08 15T113532.322

ಕೊನೆಗೆ ಗ್ರಾಮಸ್ಥರೇ ಪ್ರತಿ ಕುಟುಂಬದಿಂದ ₹500ರಂತೆ ಹಣ ಸಂಗ್ರಹಿಸಿ, ತಾವೇ ಶ್ರಮದಾನ ಮಾಡಿ ಶಾಲೆ ನಿರ್ಮಿಸಲು ಮುಂದಾದರು. ಶಾಲಾ ಕಟ್ಟಡ ಸಿದ್ಧವಾಗುವವರೆಗೆ ಗ್ರಾಮದ ಮನೆಯೊಂದರಲ್ಲಿ ಸುಮಾರು 52 ಮಕ್ಕಳಿಗೆ ತರಗತಿ ನಡೆಸಬೇಕಾದ ಪರಿಸ್ಥಿತಿ ಕೂಡ ನಿರ್ಮಾಣವಾಗಿತ್ತು. ಈ ಘಟನೆಗಳು ಮಧ್ಯಪ್ರದೇಶದ ಗ್ರಾಮೀಣ ಸರ್ಕಾರಿ ಶಾಲೆಗಳ ಮೂಲಸೌಕರ್ಯದ ದುಃಸ್ಥಿತಿ ಹಾಗೂ ಸರ್ಕಾರದ ನಿರ್ಲಕ್ಷ್ಯವನ್ನು ಬಿಚ್ಚಿಟ್ಟಿವೆ.

ಇದನ್ನೂ ಓದಿ: ಭೂಮಿ ಉಳಿಸಲು ಯುವಪಡೆ ಏಳಲಿ: ಬಿಡದಿ ಹೋರಾಟಕ್ಕೆ ‘ಜೆನ್ ಝೀ’ಗಳ ಸಾಥ್ ಕೋರಿದ ದೇವನೂರ ಮಹಾದೇವ

ಜನರು ತಮ್ಮ ಮಕ್ಕಳಿಗಾಗಿ ಮುಂದೆ ಬಂದಿರುವುದು ನಿಜಕ್ಕೂ ಶ್ಲಾಘನೀಯ. ಆದರೆ ಅಲ್ಲಿನ ಸರ್ಕಾರ ಏನು ಮಾಡುತ್ತಿದೆ? ಮೇಲಾಗಿ ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿರುವುದು ಬಿಜೆಪಿ, ಕೇಂದ್ರದಲ್ಲೂ ಬಿಜೆಪಿ. ಡಬಲ್‌ ಎಂಜಿನ್‌ ಸರ್ಕಾರ ಡಬಲ್‌ ಅಭಿವೃದ್ಧಿ ಎಂದು ಬೊಬ್ಬೆ ಹೊಡೆಯುವವರು ಕಣ್ಣು ಬಿಟ್ಟು ನೋಡಿ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನಥಿಂಗ್ ನೈಸ್’: ಸಿಎಂ ಡಿಕೆಶಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ: ಪ್ರಜಾಪ್ರಭುತ್ವದ ಹಕ್ಕನ್ನೇ ಕಸಿಯುವ ಹುನ್ನಾರ!

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ...