ಮಧ್ಯಪ್ರದೇಶ ಸಿಎಂ ವಿರುದ್ಧ ಭೂ ಹಗರಣ ಆರೋಪ: ಮೋಹನ್ ಯಾದವ್ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

Date:

ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರ ಕುಟುಂಬ ಮತ್ತು ಅವರಿಗೆ ಸಂಬಂಧಿಸಿದ ರಿಯಲ್ ಎಸ್ಟೇಟ್ ಸಂಸ್ಥೆಗಳ ವಿರುದ್ಧ ಬೃಹತ್ ಭೂ ಹಗರಣ ಆರೋಪ ಕೇಳಿಬಂದಿದೆ. ಹಗರಣದ ಆರೋಪ ಎದುರಿಸುತ್ತಿರುವ ಮೋಹನ್ ಯಾದವ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್‌ ಆಗ್ರಹಿಸಿದೆ. ಜೊತೆಗೆ, ಸಮಗ್ರವಾದ ಸ್ವತಂತ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.

- Advertisement -

ಯಾದವ್ ಮತ್ತು ಅವರ ಕುಟುಂಬವು ಉಜ್ಜಯಿನಿಯಲ್ಲಿ ಸರ್ಕಾರದ ಪ್ರಮುಖ ಯೋಜನೆಗಳು ಅನುಷ್ಠಾನಗೊಳ್ಳುವ ಪ್ರದೇಶಗಳ ಕುರಿತು ಮೊದಲೇ ಮಾಹಿತಿ ಪಡೆದುಕೊಂಡಿದ್ದರು. ಭವಿಷ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿ, ಮೆಟ್ರೋ ಮಾರ್ಗ, ಕೈಗಾರಿಕಾ ಪ್ರದೇಶ ಅಥವಾ ಮಾಸ್ಟರ್ ಪ್ಲಾನ್ ಬರುವಂತಹ ಪ್ರದೇಶಗಳಲ್ಲಿ ಕಡಿಮೆ ಬೆಲೆಗೆ ಜಮೀನನ್ನು ಖರೀದಿಸಿ, ದುಪ್ಪಟ್ಟು ಲಾಭ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಅವರ ಕುಟುಂಬಸ್ಥರ ಭೂಮಿಯು ಗಣನೀಯವಾಗಿ ಹೆಚ್ಚಾಗಿದೆ. ಅಧಿಕಾರ ದುರುಪಯೋಗ ಮಾಡಿಕೊಂಡು, ಭೂ ಹಗರಣ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಭೋಪಾಲ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಮಧ್ಯಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಜಿತು ಪಟ್ವಾರಿ, “ರಾಜ್ಯದ ಬಿಜೆಪಿ ಸರ್ಕಾರವು ಭ್ರಷ್ಟಾಚಾರದ ಸಂಕೇತವಾಗಿ ಮಾರ್ಪಟ್ಟಿದೆ. ಮೋಹನ್ ಯಾದವ್ ಅವರು ಮುಖ್ಯಮಂತ್ರಿಯಾಗುವ ಮುನ್ನ ಮತ್ತು ನಂತರದ ವರ್ಷಗಳಲ್ಲಿ ಅವರ ಕುಟುಂಬಕ್ಕೆ ಸೇರಿದ ಭೂಮಿಯ ಪ್ರಮಾಣವು ಭಾರಿ ಪ್ರಮಾಣದಲ್ಲಿ ವಿಸ್ತರಣೆಯಾಗಿದೆ” ಎಂದು ಆರೋಪಿಸಿದ್ದಾರೆ.

“ಮೋಹನ್ ಯಾದವ್ ಅವರು 2023ರ ಡಿಸೆಂಬರ್ 13ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ, 2021 ಮತ್ತು 2023ರ ನಡುವಿನ ಅವಧಿಯಲ್ಲೇ ಅವರ ಕುಟುಂಬದ ನಿಕಟ ಸಂಬಂಧಿಕರು ಸುಮಾರು 194 ಪ್ರದೇಶಗಳಲ್ಲಿ 253 ಎಕರೆ ಭೂಮಿಯನ್ನು ಖರೀದಿಸಿದ್ದಾರೆ. ಅಂದರೆ, ಅವರು ಮುಖ್ಯಮಂತ್ರಿಯಾಗುವ ಮುಂಚಿನ ಅವಧಿಯಲ್ಲೇ ಅವರ ಆಸ್ತಿ ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ಸದ್ಯದ ಒಟ್ಟು ಭೂ ಮಾಲೀಕತ್ವದ ವರದಿಯ ಪ್ರಕಾರ, ಮುಖ್ಯಮಂತ್ರಿಯವರ ಕುಟುಂಬ ಮತ್ತು ಸಂಬಂಧಿಕರು ಒಟ್ಟು 335 ಎಕರೆ ಭೂಮಿಯನ್ನು ಹೊಂದಿದ್ದಾರೆ” ಎಂದು ಅವರು ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದ್ದಾರೆ.

“ಈ ಖರೀದಿಗಳಲ್ಲಿ ಅತ್ಯಂತ ಆಘಾತಕಾರಿ ವಿಷಯವೆಂದರೆ, ಈ ಬಹುತೇಕ ಜಮೀನು ಉಜ್ಜಯಿನಿ ಸುತ್ತಮುತ್ತ ಹೊಸದಾಗಿ ಘೋಷಿಸಲಾದ ರಸ್ತೆ ಯೋಜನೆಗಳ ಸಮೀಪದಲ್ಲೇ ಇವೆ. ಅಷ್ಟೇ ಅಲ್ಲದೆ, ಇವೆಲ್ಲವೂ ಉಜ್ಜಯಿನಿ ಮಾಸ್ಟರ್ ಪ್ಲಾನ್-2035ರ ಅಡಿಯಲ್ಲಿ ಕೃಷಿ ಭೂಮಿಯಿಂದ ವಸತಿ ಅಥವಾ ವಾಣಿಜ್ಯ ಬಳಕೆಗೆ ಬದಲಾಯಿಸಲು ಗುರುತಿಸಲಾದ ವಲಯಗಳಿಗೆ ಒಳಪಡುತ್ತವೆ” ಎಂದು ಪಟ್ವಾರಿ ವಿವರಿಸಿದ್ದಾರೆ.

“ಈ ಖರೀದಿ ಮತ್ತು ಅಕ್ರಮಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರು ಸಾರ್ವಜನಿಕವಾಗಿ ಉತ್ತರ ನೀಡಬೇಕು ಮತ್ತು ತನಿಖೆಗೆ ಒಳಪಡಬೇಕು. ಇಷ್ಟು ದೊಡ್ಡ ಹಗರಣದ ನಂತರವೂ ಮುಖ್ಯಮಂತ್ರಿಗಳು ಆಡಳಿತದಲ್ಲಿ ಮುಂದುವರಿಯಲು ಹೇಗೆ ಸಾಧ್ಯ” ಎಂದು ಪ್ರಶ್ನಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಸಂಜಯ್ ಗಾಂಧಿ ಸಾವಿಗೀಡಾದಾಗ ಪಿ. ಲಂಕೇಶ್ ಬರೆದದ್ದು: ಮುಳ್ಳಿನ ತೋಟದ ಕನಸುಗಾರ

ಇದೇ ವೇಳೆ ಮಾತನಾಡಿದ ವಿಧಾನಸಭೆಯ ವಿಪಕ್ಷ ನಾಯಕ ಉಮಂಗ್ ಸಿಂಘಾರ್, “ಈ ಹಗರಣವು ಇತ್ತೀಚಿನ ವರ್ಷಗಳಲ್ಲಿ ರಾಜ್ಯದಲ್ಲಿ ನಡೆದ ಅತ್ಯಂತ ಗಂಭೀರ ಭೂ ಹಗರಣಗಳಲ್ಲಿ ಒಂದಾಗಿದೆ. ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಉಜ್ಜಯಿನಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮತ್ತು ನಂತರ 2021 ರಿಂದ 2023ರ ನಡುವೆ ಉನ್ನತ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದರು. ಆದ್ದರಿಂದ, ಅವರಿಗೆ ಮುಂಬರುವ ಪ್ರಮುಖ ರಸ್ತೆ ಯೋಜನೆಗಳು ಮತ್ತು ಮೂಲಸೌಕರ್ಯ ಯೋಜನೆಗಳ ರೂಪರೇಷೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇತ್ತು. ಉಜ್ಜಯಿನಿಯ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ಅನ್ನು ಮರುರೂಪಿಸಲಾಗಿಲ್ಲ. ಬದಲಿಗೆ ಮುಖ್ಯಮಂತ್ರಿಯವರ ಕುಟುಂಬದ ರಿಯಲ್ ಎಸ್ಟೇಟ್ ಹಿತಾಸಕ್ತಿಗಳಿಗೆ ಅನುಕೂಲ ಮಾಡಿಕೊಡಲು ಇದನ್ನು ವ್ಯವಸ್ಥಿತವಾಗಿ ಬದಲಾಯಿಸಲಾಗಿದೆ” ಎಂದು ಆರೋಪಿಸಿದ್ದಾರೆ.

“ಇದು ಅಕ್ಷರಶಃ ಅಧಿಕಾರದ ದುರುಪಯೋಗ ಮತ್ತು ಮುಕ್ತ ಭ್ರಷ್ಟಾಚಾರವಾಗಿದೆ. ಅಧಿಕಾರದ ಮರೆಯಲ್ಲಿ ನಡೆಯುತ್ತಿರುವ ಈ ಆಟವನ್ನು ರಾಜ್ಯದ ಜನರು ಸಹಿಸುವುದಿಲ್ಲ. ಮುಖ್ಯಮಂತ್ರಿಗಳು ಕನಿಷ್ಠ ನೈತಿಕತೆ ಉಳಿಸಿಕೊಂಡಿದ್ದರೆ, ಅವರು ತಕ್ಷಣವೇ ರಾಜೀನಾಮೆ ನೀಡಬೇಕು” ಎಂದು ಉಮಂಗ್ ಸಿಂಘಾರ್ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಕಬ್ಬಿಗೆ ರೂ. 5,500 ಘೋಷಣೆ ಆಗುವವರೆಗೂ ಸಕ್ಕರೆ ಕಾರ್ಖಾನೆ ಆರಂಭಿಸಬೇಡಿ: ರೈತ ಸಂಘ ಕರೆ

ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ರೂ.5,500 ದರ ಘೋಷಿಸುವವರೆಗೆ ಹಾಗೂ...

ECINetನಲ್ಲಿ ಅಧಿಕಾರ ಕೇಂದ್ರೀಕರಣದ ಆರೋಪ; ಕ್ಯಾಬಿನೆಟ್‌ ಕಾರ್ಯದರ್ಶಿಗೆ ಚುನಾವಣಾ ಆಯುಕ್ತರ ದೂರು

ಚುನಾವಣಾ ಆಯೋಗದ ಮತದಾರರ ಪಟ್ಟಿ ನಿರ್ವಹಣಾ ಸಾಫ್ಟ್‌ವೇರ್‌ ವ್ಯವಸ್ಥೆಯ ಕಾರ್ಯವೈಖರಿ ಹಾಗೂ...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ...

2027ರ ಯುಪಿ ಚುನಾವಣೆಗೆ ಅಖಿಲೇಶ್ ಯಾದವ್ ಸಜ್ಜು; ಎಸ್‌ಪಿ ‘ಪಿಡಿಎ ರಥಯಾತ್ರೆ’ ಶುರು

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಾರ್ಟಿ (ಎಸ್‌ಪಿ) ತನ್ನ ಪ್ರಚಾರ...