ಕುದುರೆ ವ್ಯಾಪಾರ ಭೀತಿ; ಮಧ್ಯಪ್ರದೇಶ ಕಾಂಗ್ರೆಸ್ ಶಾಸಕರು ಬೆಂಗಳೂರಿನ ರೆಸಾರ್ಟ್‌ಗೆ ಶಿಫ್ಟ್‌!

Date:

‘ರೆಸಾರ್ಟ್ ರಾಜಕೀಯ’ ಮತ್ತು ‘ಶಾಸಕರ ಖರೀದಿ ಭೀತಿ’ (ಕುದುರೆ ವ್ಯಾಪಾರ) ಮಧ್ಯಪ್ರದೇಶದಲ್ಲಿ ಮತ್ತೆ ಮುಂಚೂಣಿಗೆ ಬಂದಿದೆ. ಜೂನ್ 18 ರಂದು ನಡೆಯಲಿರುವ ದೇಶದ ಅತ್ಯಂತ ಕುತೂಹಲಕಾರಿ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಹೈಕಮಾಂಡ್ ಸೂಚನೆಯ ಮೇರೆಗೆ ಬೆಂಗಳೂರಿನತ್ತ ಮುಖ ಮಾಡಿದ್ದಾರೆ. ಆಡಳಿತಾರೂಢ ಬಿಜೆಪಿ ತನ್ನ ಶಾಸಕರನ್ನು ಕೋಟ್ಯಂತರ ರೂ. ಹಣದ ಆಮಿಷ ಒಡ್ಡಿ ಸೆಳೆಯಲು ತೀವ್ರ ಪ್ರಯತ್ನ ನಡೆಸುತ್ತಿದೆ ಎಂದು ಮಧ್ಯಪ್ರದೇಶ ಕಾಂಗ್ರಸ್‌ ಗಂಭೀರ ಆರೋಪ ಮಾಡಿದೆ. ತಮ್ಮ ಶಾಸಕರನ್ನು ಒಗ್ಗಟ್ಟಾಗಿಡಲು ಮತ್ತು ಸಂಭಾವ್ಯ ‘ಅಡ್ಡ ಮತದಾನ’ವನ್ನು ತಡೆಯಲು ಕಾಂಗ್ರೆಸ್ ಆಡಳಿತವಿರುವ ಕರ್ನಾಟಕಕ್ಕೆ ಸ್ಥಳಾಂತರಗೊಳ್ಳಲಿದ್ದಾರೆ.

- Advertisement -

ಪ್ರಸ್ತುತ ಮಧ್ಯಪ್ರದೇಶದ ವಿಧಾನಸಭೆಯಲ್ಲಿ ಒಟ್ಟು 229 ಶಾಸಕರಿದ್ದಾರೆ. ಈ ಪೈಕಿ ಒಬ್ಬ ಅಭ್ಯರ್ಥಿ ರಾಜ್ಯಸಭೆಗೆ ನೇರವಾಗಿ ಆಯ್ಕೆಯಾಗಬೇಕಾದರೆ ಕನಿಷ್ಠ 58 ಪ್ರಥಮ ಪ್ರಾಶಸ್ತ್ಯದ ಮತಗಳನ್ನು ಪಡೆಯುವುದು ಅನಿವಾರ್ಯವಾಗಿದೆ. ಸದ್ಯದ ಅಧಿಕೃತ ಲೆಕ್ಕಾಚಾರದ ಪ್ರಕಾರ, ಆಡಳಿತಾರೂಢ ಬಿಜೆಪಿ ಸುಲಭವಾಗಿ 2 ಸ್ಥಾನಗಳನ್ನು ಹಾಗೂ ವಿರೋಧ ಪಕ್ಷವಾದ ಕಾಂಗ್ರೆಸ್ 1 ಸ್ಥಾನವನ್ನು ಯಾವುದೇ ಆತಂಕವಿಲ್ಲದೆ ಗೆಲ್ಲಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

64 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ತನ್ನ ಹಿರಿಯ ನಾಯಕಿ, ಮಾಜಿ ಸಂಸದೆ ಮೀನಾಕ್ಷಿ ನಟರಾಜನ್ ಅವರಿಗೆ ಟಿಕೆಟ್ ನೀಡಿದೆ. 164 ಶಾಸಕರ ಬಲ ಹೊಂದಿರುವ ಬಿಜೆಪಿ, ತನ್ನ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಮತ್ತು ರಾಜ್ಯ ಘಟಕದ ಕಾರ್ಯದರ್ಶಿ ರಜನೀಶ್ ಅಗರ್ವಾಲ್ ಅವರನ್ನು ಕಣಕ್ಕಿಳಿಸಿದೆ. ಆದರೆ, ಅಲ್ಲಿಗೆ ಸುಮ್ಮನಾಗದ ಬಿಜೆಪಿ ಮೂರನೇ ಅಭ್ಯರ್ಥಿಯನ್ನೂ ಕಣಕ್ಕಿಳಿಸಿದೆ. ಬಿಜೆಪಿಯ ಮೂರನೇ ಅಭ್ಯರ್ಥಿಯಾಗಿ ಮಧ್ಯಪ್ರದೇಶ ಮೀನುಗಾರರ ಕಲ್ಯಾಣ ಮಂಡಳಿಯ ಅಧ್ಯಕ್ಷ ಮಹೇಶ್ ಕೇವತ್ ಸ್ಪರ್ಧೆಯಲ್ಲಿದ್ದಾರೆ. ಅವರ ಸ್ಪರ್ಧೆ ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದೆ.

ಮೂರನೇ ಅಭ್ಯರ್ಥಿ ಮಹೇಶ್ ಕೇವತ್ ಅವರನ್ನು ಗೆಲ್ಲಿಸಲು ಬಿಜೆಪಿಗೆ ಸ್ಪಷ್ಟ ಸಂಖ್ಯಾಬಲದ ಕೊರತೆಯಿದೆ. ಎರಡು ಸ್ಥಾನಗಳಿಗೆ ತಲಾ 58 ರಂತೆ 116 ಮತಗಳನ್ನು ಬಳಸಿಕೊಂಡ ನಂತರವೂ ಬಿಜೆಪಿಯ ಬಳಿ ಹೆಚ್ಚುವರಿಯಾಗಿ ಕೇವಲ 48 ಮತಗಳು ಉಳಿಯುತ್ತವೆ (ಗೆಲುವಿಗೆ ಇನ್ನೂ 10 ಮತಗಳ ಕೊರತೆಯಿರುತ್ತದೆ). ಆದರೂ ಬಿಜೆಪಿ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವುದು ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಮತ್ತು ಆ ಮೂಲಕ ಪ್ರತಿಪಕ್ಷಕ್ಕೆ ಶಾಕ್ ನೀಡುವ ರಾಜಕೀಯ ತಂತ್ರಗಾರಿಕೆಯ ಭಾಗವಾಗಿದೆ ಎಂಬುದು ಸ್ಪಷ್ಟ.

ಇದಕ್ಕೆ ಪೂರಕವಾಗಿ ಕಾಂಗ್ರೆಸ್‌ನ ಆಂತರಿಕ ಸಂಖ್ಯಾಬಲದಲ್ಲಿ ಈಗಾಗಲೇ ಕೆಲವು ಏರುಪೇರುಗಳಾಗಿವೆ. ದತಿಯಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರ್ತಿ ಅವರ ಸದಸ್ಯತ್ವ ರದ್ದುಗೊಂಡಿರುವುದರಿಂದ ಒಂದು ಸ್ಥಾನ ಈಗಾಗಲೇ ಖಾಲಿಯಾಗಿದೆ. ಇನ್ನು ಶಿಯೋಪುರ್ ಜಿಲ್ಲೆಯ ವಿಜಯಪುರದ ಕಾಂಗ್ರೆಸ್ ಶಾಸಕ ಮುಖೇಶ್ ಮಲ್ಹೋತ್ರಾ ಅವರಿಗೆ ಮತದಾನ ಮಾಡದಂತೆ ಮಧ್ಯಪ್ರದೇಶ ಹೈಕೋರ್ಟ್ ಕಟ್ಟುನಿಟ್ಟಿನ ನಿರ್ಬಂಧ ವಿಧಿಸಿದೆ. ಇದರೊಂದಿಗೆ, ಸಾಗರ್ ಜಿಲ್ಲೆಯ ಬಿನಾ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಿರ್ಮಲಾ ಸಪ್ರೆ ಅವರು ಇತ್ತೀಚೆಗೆ ನಾಟಕೀಯವಾಗಿ ಮುಖ್ಯಮಂತ್ರಿ ಮೋಹನ್ ಯಾದವ್ ಅವರನ್ನು ಭೇಟಿಯಾಗಿದ್ದು, ಅವರು ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಚಲಾಯಿಸುವ ಸಾಧ್ಯತೆಯಿದೆ. (ಅವರ ಸದಸ್ಯತ್ವ ರದ್ದತಿ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ). ಈ ಎಲ್ಲ ಕಾರಣಗಳಿಂದಾಗಿ ಕಾಂಗ್ರೆಸ್‌ನ ಪರಿಣಾಮಕಾರಿ ಸಂಖ್ಯಾಬಲವು 62ಕ್ಕೆ ಇಳಿಯಲಿದೆ. ಇದು ಗೆಲುವಿನ ಕೋಟಾಕ್ಕಿಂತ (58 ಮತಗಳು) ಕೇವಲ 4 ಮತಗಳು ಮಾತ್ರ ಹೆಚ್ಚಿರುವುದರಿಂದ, ಕಾಂಗ್ರೆಸ್ ನಾಯಕರಲ್ಲಿ ಆತಂಕ ಮನೆಮಾಡಿದೆ.

ಈ ಲೇಖನ ಓದಿದ್ದೀರಾ?: ಒಡೆದ ಟಿಎಂಸಿ, ದೂರವಾದ ಡಿಎಂಕೆ: ವಿವಾದಿತ ಕಾಯ್ದೆಗಳ ಜಾರಿಗೆ ಬಿಜೆಪಿ ಪಡೆಯುವುದೇ ‘ಲೋಕ’ಬಲ?

ಈ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಉಮಂಗ್ ಸಿಂಘಾರ್ ಅವರ ನಿವಾಸದಲ್ಲಿ ಸೋಮವಾರ ತಡರಾತ್ರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ತುರ್ತು ಸಭೆ ನಡೆದಿದೆ. ಈ ಸಭೆಯಲ್ಲಿ ಸುಮಾರು 60 ಶಾಸಕರು ಭಾಗವಹಿಸಿದ್ದರು. ಒಬ್ಬ ಶಾಸಕರು ದೆಹಲಿಯಲ್ಲಿದ್ದ ಕಾರಣ ಗೈರಾಗಿದ್ದರೆ, ಹಿರಿಯ ನಾಯಕ ಕಮಲ್ ನಾಥ್ ಆನ್‌ಲೈನ್ ಮೂಲಕ ಭಾಗವಹಿಸಿ ಶಾಸಕರಿಗೆ ಧೈರ್ಯ ತುಂಬಿದ್ದಾರೆ.

ಸಭೆಯ ನಂತರ ಮಾತನಾಡಿದ ಉಮಂಗ್ ಸಿಂಘಾರ್, “ಬಿಜೆಪಿ ನಾಯಕರು ನಮ್ಮ ಶಾಸಕರನ್ನು ಕೋಟ್ಯಂತರ ರೂಪಾಯಿಗಳ ನೋಟಿನ ಚೀಲಗಳೊಂದಿಗೆ ಸಂಪರ್ಕಿಸಿ ಖರೀದಿಸಲು ಯತ್ನಿಸುತ್ತಿದ್ದಾರೆ. ಆದರೆ, ನಮ್ಮ ನಿಷ್ಠಾವಂತ ಶಾಸಕರು ಆ ಆಮಿಷಗಳನ್ನು ತಿರಸ್ಕರಿಸಿ ವಾಪಸ್ ಕಳುಹಿಸಿದ್ದಾರೆ. ಬಿಜೆಪಿಯ ಈ ಪ್ರಜಾಪ್ರಭುತ್ವ ವಿರೋಧಿ ಸಂಚನ್ನು ವಿಫಲಗೊಳಿಸಲು ನಮ್ಮ ಶಾಸಕರನ್ನು ಕರ್ನಾಟಕಕ್ಕೆ ಸ್ಥಳಾಂತರಿಸುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಆರಂಭದಲ್ಲಿ ಕೆಲವು ಶಾಸಕರು ರಾಜ್ಯ ಬಿಟ್ಟು ಹೋಗಲು ಹಿಂದೇಟು ಹಾಕಿದರಾದರೂ, ಪಕ್ಷದ ಶಿಸ್ತು ಮತ್ತು ಹೈಕಮಾಂಡ್‌ನ ಕಡ್ಡಾಯ ತೀರ್ಮಾನಕ್ಕೆ ತಲೆಬಾಗಿ ಬೆಂಗಳೂರಿನ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಲು ಒಪ್ಪಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ ಜಿಯೋ ಸಾಮ್ರಾಜ್ಯ ರಕ್ಷಣೆಗೆ ನಿಂತಿತೇ RSS?

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್...

ರಾಮಮಂದಿರ ಲೂಟಿ: ಕಳ್ಳರು, ಅಪರಾಧಿಗಳನ್ನು ಮೋದಿ, ಶಾ, ಯೋಗಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್ ಆರೋಪ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಭಕ್ತರು ನೀಡಿದ ಕಾಣಿಕೆ ಹಣ ಮತ್ತು ದಾನದ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ ಭರವಸೆಯ ಆಟಗಾರ

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ...

ಸಿದ್ಧರಾಮಯ್ಯ ‘ಸ್ಟಿಂಗ್’ ಪ್ರಕರಣ: ಎಚ್‌ಡಿಕೆ‌ ದೆಹಲಿ ಕಚೇರಿಯ ಸಿಬ್ಬಂದಿ ರಿತೇಶ್ ಬಂಧನ

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸಂಬಂಧಿಸಿದ 'ಸ್ಟಿಂಗ್ ಆಪರೇಷನ್' ಪ್ರಕರಣದಲ್ಲಿ ದೆಹಲಿ...