ಪರೀಕ್ಷೆ ವೇಳೆ ವಿದ್ಯುತ್ ಕಡಿತ; ನೀಟ್-ಯುಜಿ ಫಲಿತಾಂಶಕ್ಕೆ ಮಧ್ಯಂತರ ತಡೆ ನೀಡಿದ ಮಧ್ಯಪ್ರದೇಶ ಹೈಕೋರ್ಟ್

Date:

ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ ನೀಟ್-ಯುಜಿ ಬರೆಯುವ ಸಮಯದಲ್ಲಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯುತ್ ಕಡಿತದಿಂದಾಗಿ ತನಗೆ ಪರೀಕ್ಷೆ ಬರೆಯಲು ತೊಂದರೆಯಾಗಿದೆ ಎಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠವು ಪುರಸ್ಕರಿಸಿದೆ. ನೀಟ್- ಯುಜಿ ಫಲಿತಾಂಶ ಘೋಷಣೆಗೆ ಮಧ್ಯಂತರ ತಡೆ ನೀಡಿದೆ.

- Advertisement -

ವೈದ್ಯಕೀಯ ಪದವಿಪೂರ್ವ ಕೋರ್ಸ್‌ಗಳಿಗೆ ಮೇ 4ರಂದು ಪರೀಕ್ಷೆಯನ್ನು ನಡೆಸಲಾಗಿದೆ. ಆ ಸಮಯದಲ್ಲಿ ಇಂದೋರ್‌ನ ಹಲವಾರು ಭಾಗಗಳಲ್ಲಿ ಹವಾಮಾನ ವೈಪರೀತ್ಯ ಉಂಟಾಗಿತ್ತು. ಆ ಸಮಯದಲ್ಲಿ ಇಂದೋರ್‌ನ ಹಲವಾರು ಭಾಗಗಳಲ್ಲಿ ವಿದ್ಯುತ್ ಕಡಿತಗೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನು ಓದಿದ್ದೀರಾ? ಮಧ್ಯಪ್ರದೇಶ | ಸಮ್ಮತಿಯ ಸೆಕ್ಸ್‌ನಲ್ಲಿ ಮಹಿಳೆಯರ ವಯೋಮಿತಿ 16ಕ್ಕೆ ಇಳಿಸಲು ಹೈಕೋರ್ಟ್‌ ಕೇಂದ್ರಕ್ಕೆ ಮನವಿ

ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಪರೀಕ್ಷೆಗೆ ಮತ್ತೆ ಹಾಜರಾಗಲು ಅವಕಾಶ ನೀಡಬೇಕೆಂದು ಕೋರಿದರು. ಈ ಅರ್ಜಿ ಪರಿಶೀಲಿಸಿದ ಕೋರ್ಟ್ ಸದ್ಯ ಫಲಿತಾಂಶಕ್ಕೆ ಮಧ್ಯಂತರ ತಡೆ ನೀಡಿದೆ. ಈ ಆದೇಶವು ದೇಶದ ಸುಮಾರು 21 ಲಕ್ಷ ಅಭ್ಯರ್ಥಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

ನ್ಯಾಯಮೂರ್ತಿ ಸುಬೋಧ್ ಅಭ್ಯಂಕರ್, “ವಿದ್ಯುತ್ ಕಡಿತದಿಂದಾಗಿ ಆಕೆಯ ಪ್ರವೇಶ ಪರೀಕ್ಷೆಯಲ್ಲಿ ತೊಂದರೆ ಉಂಟಾಗಿದೆ. ಪರೀಕ್ಷೆ ವೇಳೆ ಅಭ್ಯರ್ಥಿಗೆ ಸರಿಯಾದ ಸವಲತ್ತು ಒದಗಿಸಲು ಅಧಿಕಾರಿಗಳು ವಿಫಲರಾಗಿದ್ದಾರೆ” ಎಂದು ಅಭಿಪ್ರಾಯಿಸಿದ್ದಾರೆ. ಹಾಗೆಯೇ ಮುಂದಿನ ವಿಚಾರಣೆವರೆಗೂ ಫಲಿತಾಂಶವನ್ನು ಘೋಷಿಸಬಾರದು ಎಂದು ಹೇಳಿದ್ದಾರೆ.

ಈ ಅರ್ಜಿಯ ವಿಚಾರಣೆಯನ್ನು ಜೂನ್ 30ರಂದು ನಡೆಸುವ ಸಾಧ್ಯತೆಯಿದೆ. ಕೋರ್ಟ್‌ ಪ್ರತಿವಾದಿಗಳಾಗಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ), ಕೇಂದ್ರ ಸರ್ಕಾರ ಮತ್ತು ಮಧ್ಯಪ್ರದೇಶ ಪಶ್ಚಿಮ ವಲಯ ವಿದ್ಯುತ್ ವಿತರಣಾ ಕಂಪನಿ ಈಗಾಗಲೇ ನೋಟಿಸ್ ಜಾರಿ ಮಾಡಿದೆ. ಹಾಗೆಯೇ ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡಲು ಸೂಚಿಸಿದೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದರೂ ಪ್ರತಿವಾದಿಗಳು ಹಾಜರಾಗಿಲ್ಲ ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಜರಾತ್‌ನ ವಾಡಿಯಾ ಗ್ರಾಮದ ಕರಾಳ ವಾಸ್ತವ: ವೇಶ್ಯಾವಾಟಿಕೆಯಿಂದ ಪಾರಾಗಲು ‘ಬಾಲ್ಯವಿವಾಹ’ವೇ ರಕ್ಷಾಕವಚ

ಅಹಮದಾಬಾದ್‌ನಿಂದ ಸುಮಾರು 200 ಕಿ.ಮೀ. ದೂರದಲ್ಲಿರುವ ಗುಜರಾತ್‌ನ ವಾಡಿಯಾ ಗ್ರಾಮದ ಹೆಣ್ಣುಮಕ್ಕಳ...

ಇದು SIR ಅಲ್ಲ, ‘ವಿಶೇಷ ಡಿಲಿಟೇಷನ್’ ಕಾರ್ಯಾಚರಣೆ: ಇಸಿ ನೋಟಿಸ್‌ಗೆ ಕಪಿಲ್ ಸಿಬಲ್ ಆಕ್ರೋಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ನಡೆಸುತ್ತಿರುವ ‘ಮತದಾರರ ಪಟ್ಟಿ ವಿಶೇಷ ತೀವ್ರ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...