ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಮಧ್ಯಪ್ರದೇಶ ಹೈಕೋರ್ಟ್

Date:

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಪುತ್ರ ಕಾರ್ತಿಕೇಯ ಸಿಂಗ್ ಚೌಹಾಣ್ ವಿರುದ್ಧ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು ಮಧ್ಯಪ್ರದೇಶ ಹೈಕೋರ್ಟ್ ಗುರುವಾರ (ಜೂನ್ 25, 2026) ರದ್ದುಗೊಳಿಸಿ ಆದೇಶಿಸಿದೆ.

- Advertisement -

2018ರಲ್ಲಿ ಜಬುವಾದಲ್ಲಿ ನಡೆದ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಅವರು, ‘ಪನಾಮ ಪೇಪರ್ಸ್’ ಹಗರಣಕ್ಕೆ ಸಂಬಂಧಿಸಿದಂತೆ ಕಾರ್ತಿಕೇಯ ಸಿಂಗ್ ಚೌಹಾಣ್ ಅವರ ಹೆಸರನ್ನು ತಪ್ಪಾಗಿ ಪ್ರಸ್ತಾಪಿಸಿದ್ದರು. ಈ ಹೇಳಿಕೆಯನ್ನು ವಿರೋಧಿಸಿ ಕಾರ್ತಿಕೇಯ ಸಿಂಗ್ ಚೌಹಾಣ್ ಅವರು ಭೋಪಾಲ್‌ನ ಎಂಪಿ/ಎಂಎಲ್‌ಎ ವಿಶೇಷ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಸಂಬಂಧ 2024ರ ಡಿಸೆಂಬರ್‌ನಲ್ಲಿ ನ್ಯಾಯಾಲಯವು ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಪ್ರಕರಣದ ವಿಚಾರಣೆಯನ್ನು ರದ್ದುಪಡಿಸುವಂತೆ ಕೋರಿ ರಾಹುಲ್ ಗಾಂಧಿ ಅವರು ಮಧ್ಯಪ್ರದೇಶ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬುಧವಾರ (ಜೂನ್ 24, 2026) ಹೈಕೋರ್ಟ್‌ಗೆ ಲಿಖಿತ ಹೇಳಿಕೆ ಸಲ್ಲಿಸಿದ ರಾಹುಲ್ ಗಾಂಧಿ, ಆ ಹೇಳಿಕೆಯು “ತಪ್ಪಾಗಿ” ನೀಡಲ್ಪಟ್ಟಿದೆ ಎಂದು ವಿಷಾದ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ರಾಮ ಮಂದಿರಕ್ಕೆ ಶಿವಸೇನೆ ನೀಡಿದ್ದ 4 ಕೆಜಿ ಬೆಳ್ಳಿ ಇಟ್ಟಿಗೆ ನಾಪತ್ತೆ? ಬಿಜೆಪಿ ಕಡೆ ಬೊಟ್ಟು ಮಾಡಿದ ಸಂಜಯ್ ರಾವತ್

“ಪನಾಮ ಪೇಪರ್ಸ್ ಪ್ರಕರಣದಲ್ಲಿ ನಾನು ಉಲ್ಲೇಖಿಸಬೇಕಾಗಿದ್ದು ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿಯವರ ಪುತ್ರನ ಹೆಸರನ್ನು, ಆದರೆ ಆಕಸ್ಮಿಕವಾಗಿ ಕಾರ್ತಿಕೇಯ ಅವರ ಹೆಸರನ್ನು ಪ್ರಸ್ತಾಪಿಸಿದ್ದೆ. ತಪ್ಪು ಅರಿವಾದ ಮರುದಿನವೇ ಅಂದರೆ 2018ರ ಅಕ್ಟೋಬರ್ 30ರಂದೇ ನಾನು ಸಾರ್ವಜನಿಕವಾಗಿ ಸ್ಪಷ್ಟನೆ ನೀಡಿದ್ದೆ. ಈ ಘಟನೆಗಾಗಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ” ಎಂದು ಅವರು ತಿಳಿಸಿದ್ದರು.

ರಾಹುಲ್ ಗಾಂಧಿ ಅವರ ಕ್ಷಮೆಯಾಚನೆಯನ್ನು ಕಾರ್ತಿಕೇಯ ಸಿಂಗ್ ಚೌಹಾಣ್ ಅವರು ಲಿಖಿತ ರೂಪದಲ್ಲಿ ಸ್ವೀಕರಿಸಿದ್ದಾರೆ. ಉಭಯ ಕಡೆಯ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಪ್ರಮೋದ್ ಕುಮಾರ್ ಅಗರ್ವಾಲ್ ಅವರಿದ್ದ ಏಕಸದಸ್ಯ ಪೀಠ, ಹೈಕೋರ್ಟ್ ಮತ್ತು ಭೋಪಾಲ್‌ನ ಕೆಳ ನ್ಯಾಯಾಲಯದಲ್ಲಿ ಬಾಕಿ ಇರುವ ಮಾನನಷ್ಟ ಮೊಕದ್ದಮೆ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಿ ಆದೇಶ ಹೊರಡಿಸಿದೆ.

WhatsApp Image 2025 05 16 at 6.54.26 PM
Sub Editor at Eedina.com |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...