ಮಧ್ಯ ಪ್ರದೇಶ ರಾಜ್ಯದ ಯನ ಸರ್ಕಾರಿ ವೈದ್ಯಕೀಯ ಕಾಲೇಜಿನ ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯೇ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ.
25 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ಮಾಡಿರುವ ಘಟನೆ ಭಾನುವಾರ ನಡೆದಿದೆ. ಆರೋಪಿಯನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಾರ ಚೆನ್ನಯ್ಯ ಸ್ವಾಮೀಜಿ ಹೇಳಿಕೆ ಅಪಾಯಕಾರಿ
ಸಂತ್ರಸ್ತ ವೈದ್ಯೆಯು ಇಲ್ಲಿನ ವೈದ್ಯಕೀಯ ಕಾಲೇಜಿನ ಹುಡುಗಿಯರ ಹಾಸ್ಟೆಲ್‌ನಲ್ಲಿ ನಲೆಸಿದ್ದರು. ಹುಡುಗರ ಹಾಸ್ಟೆಲ್‌ಗೆ ಕರಿಸಿಕೊಂಡು ಆರೋಪಿಯು ಅತ್ಯಾಚಾರವೆಸಗಿದ್ದಾನೆ ಎಂದು ಸಂತ್ರಸ್ತೆ ದೂರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ್ರಸ್ತೆ ಹಾಗೂ ಆರೋಪಿಯು ಒಂದೇ ವೈದ್ಯಕೀಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಬ್ಬರು ಒಂದೇ ಕಡೆ ಕೆಲಸ ಮಾಡುತ್ತಿದ್ದರು. ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
