ಆ್ಯಂಬುಲೆನ್ಸ್ ಸೌಲಭ್ಯ ಒದಗಿಸದ ಮಧ್ಯಪ್ರದೇಶ ಸರ್ಕಾರ: ಕಸದ ಟ್ರ್ಯಾಕ್ಟರ್‌ನಲ್ಲೇ ಮೃತದೇಹ ಸಾಗಾಟ!

Date:

ಮರಣೋತ್ತರ ಪರೀಕ್ಷೆಯ ನಂತರ ಮಹಿಳೆಯೊಬ್ಬರ ಮೃತದೇಹವನ್ನು ಮನೆಗೆ ತಲುಪಿಸಲು ಆ್ಯಂಬುಲೆನ್ಸ್ ಲಭ್ಯವಿಲ್ಲ ಎಂಬ ಕಾರಣಕ್ಕೆ, ನಗರ ಪರಿಷತ್ತಿನ ಕಸ ಸಂಗ್ರಹಿಸುವ ಟ್ರ್ಯಾಕ್ಟರ್-ಟ್ರಾಲಿಯಲ್ಲಿ ಮೃತದೇಹ ಸಾಗಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಛತರ್‌ಪುರ ಜಿಲ್ಲೆಯ ಬಡಾ ಮಲ್ಹಾರಾ ಸಿವಿಲ್ ಆಸ್ಪತ್ರೆಯಲ್ಲಿ ನಡೆದಿದೆ. ಈ ಮೂಲಕ ಮಧ್ಯಪ್ರದೇಶದ ಸರ್ಕಾರಿ ಆಸ್ಪತ್ರೆ ಆರೋಗ್ಯ ವ್ಯವಸ್ಥೆಯ ಅಮಾನವೀಯ ಮತ್ತು ನಿರ್ಲಕ್ಷ್ಯದ ಮುಖ ಬಯಲಾಗಿದೆ.

- Advertisement -

ಜುಲೈ 4ರಿಂದ ಕಾಣೆಯಾಗಿದ್ದ ರುಖ್ಸಾನಾ ಖಾನ್ ಎಂಬ ಮಹಿಳೆಯ ಮೃತದೇಹ ಆಗಸ್ಟ್ 5ರಂದು ಸೂರಜ್‌ಪುರ ರಸ್ತೆ ಬಳಿಯ ಕಸದ ರಾಶಿಯಲ್ಲಿ ಪತ್ತೆಯಾಗಿತ್ತು. ಕೊಲೆ ಶಂಕೆಯ ಹಿನ್ನೆಲೆಯಲ್ಲಿ ಪೊಲೀಸರು ಶವವನ್ನು ಪೋಸ್ಟ್‌ಮಾರ್ಟಂಗೆ ಬಡಾ ಮಲ್ಹಾರಾ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಇದನ್ನೂ ಓದಿ: ಹತ್ತಾರು ನೋವು ಹೊತ್ತು ಬಂದ ಜನರಿಗೆ ಸಿಎಂ ಸ್ಪಂದನೆ

ಮರಣೋತ್ತರ ಪರೀಕ್ಷೆ ಮುಗಿದ ನಂತರ, ಮೃತದೇಹವನ್ನು ಮನೆಗೆ ಕೊಂಡೊಯ್ಯಲು ಕುಟುಂಬಸ್ಥರು ಗಂಟೆಗಟ್ಟಲೆ ಆ್ಯಂಬುಲೆನ್ಸ್‌ಗಾಗಿ ಕಾಯುತ್ತಿದ್ದರು. ಆದರೆ ಆಸ್ಪತ್ರೆ ಮಂಡಳಿಯು “ನಮ್ಮಲ್ಲಿ ಪ್ರತ್ಯೇಕ ವಾಹನವಿಲ್ಲ ಹಾಗೂ ಅದಕ್ಕೆ ಬಜೆಟ್ ಅನುಮೋದನೆಯಾಗಿಲ್ಲ” ಎಂದು ಹೇಳಿ, ಶವವನ್ನು ನಗರ ಪರಿಷತ್ತಿನ ಕಸ ಸಂಗ್ರಹಣಾ ಟ್ರ್ಯಾಕ್ಟರ್‌ನಲ್ಲೇ ಪ್ಲಾಸ್ಟಿಕ್‌ ಹೊದಿಸಿ ಕಳುಹಿಸಿಕೊಟ್ಟಿದೆ.

ಮೃತದೇಹವನ್ನು ಕಸದ ವಾಹನದಲ್ಲಿ ಹಾಕುವ ದೃಶ್ಯಗಳನ್ನು ಸ್ಥಳೀಯರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. “ಸಾವು ಬಂದ ಮೇಲಾದರೂ ಮನುಷ್ಯನಿಗೆ ಕನಿಷ್ಠ ಗೌರವ ಸಿಗಬೇಡವೇ? ಕಸದ ವಾಹನದಲ್ಲಿ ಶವ ತರುವುದನ್ನು ನೋಡಿ ನೆಮ್ಮದಿ ಕೆಟ್ಟಿದೆ” ಎಂದು ಮೃತರ ಪತಿ ಬಾಬಲೇಶ್ ಅಹಿರ್ವಾರ್ ಕಣ್ಣೀರಿಟ್ಟಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಬ್ಲಾಕ್ ವೈದ್ಯಾಧಿಕಾರಿ (BMO) ಡಾ. ಹೇಮಂತ್ ಮರೈಯಾ, “ನಮ್ಮ ಆಸ್ಪತ್ರೆಗೆ ಪ್ರತ್ಯೇಕ ಶವವಾಹನವಿಲ್ಲ. ಜಿಲ್ಲಾ ಮಟ್ಟದ ಸಭೆಗಳಲ್ಲಿ ಹಲವು ಬಾರಿ ಶವವಾಹನಕ್ಕಾಗಿ (ಆ್ಯಂಬುಲೆನ್ಸ್) ಮನವಿ ಮಾಡಿದ್ದರೂ ಬಜೆಟ್ ಮಂಜೂರಾಗಿಲ್ಲ. ಹೀಗಾಗಿ ನಾವು ನಗರ ಪರಿಷತ್ ವಾಹನಗಳನ್ನೇ ನೆಚ್ಚಿಕೊಳ್ಳಬೇಕಾಗಿದೆ” ಎಂದು ಒಪ್ಪಿಕೊಂಡಿದ್ದಾರೆ.

ಘಟನೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಛತರ್‌ಪುರ ಜಿಲ್ಲಾಧಿಕಾರಿ ಮೃಣಾಲ್ ಮೀನಾ ತನಿಖೆಗೆ ಆದೇಶಿಸಿದ್ದಾರೆ. ಮುಖ್ಯ ವೈದ್ಯಾಧಿಕಾರಿ (CMHO) ಹಾಗೂ ಉಪ ವಿಭಾಗಾಧಿಕಾರಿ (SDM) ಅವರ ವರದಿಯನ್ನಾಧರಿಸಿ ಸಂಬಂಧಪಟ್ಟ ವೈದ್ಯಾಧಿಕಾರಿಯ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಘಟನೆಯನ್ನು ಖಂಡಿಸಿರುವ ಪ್ರತಿಪಕ್ಷ ಕಾಂಗ್ರೆಸ್, ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಮಾದರಿ ಆರೋಗ್ಯ ವ್ಯವಸ್ಥೆಯ ಬಗ್ಗೆ ದೊಡ್ಡ ಮಾತುಗಳನ್ನಾಡುವ ಸರ್ಕಾರ, ಕನಿಷ್ಠ ಮೃತದೇಹಕ್ಕೆ ಗೌರವ ಕೊಡುವ ಶವವಾಹನವನ್ನೂ ಒದಗಿಸಲಾರದೆ ವಿಫಲವಾಗಿದೆ ಎಂದು ಟೀಕಿಸಿದೆ. ಇದೇ ರಾಜ್ಯದಲ್ಲಿ ಅಲ್ಲವೇ ಏರ್‌ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿರುವುದು ಎಂದು ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಡಾ. ಮೋಹನ್ ಯಾದವ್ ಅವರನ್ನು ನೆಟ್ಟಿಗರು ಟೀಕಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ ಹರಾಜು ರದ್ದು, ಲೀಸ್‌ಗೆ ನೀಡಲು ಸಿಎಂ ಭರವಸೆ : ಶ್ರೀಮಂತ ಬಿರಾದರ್

ಬೀದರ್ ಜಿಲ್ಲೆಯ ರೈತರು‌, ಕಾರ್ಮಿಕರ ಜೀವನಾಡಿಯಾಗಿರುವ ಬೀದರ್‌ ಸಹಕಾರ ಸಕ್ಕರೆ ಕಾರ್ಖಾನೆ...

‘ದೇವರೇ ಈ ದೇಶವನ್ನು ಕಾಪಾಡಬೇಕು’: ರೈಲು ಪ್ರಯಾಣದ ಗದ್ದಲಕ್ಕೆ ಬೇಸತ್ತ ತೇಜಸ್ವಿ ಸೂರ್ಯ ಪತ್ನಿ

ರೈಲು ಪ್ರಯಾಣದ ವೇಳೆ ಸಹಪ್ರಯಾಣಿಕರ ಗದ್ದಲದಿಂದ ತೀವ್ರ ಕಿರಿಕಿರಿ ಅನುಭವಿಸಿರುವುದಾಗಿ ಬಿಜೆಪಿ...

ಬೀದರ್ | ಬರ ಪರಿಸ್ಥಿತಿ : ವಿಶೇಷ ಪ್ಯಾಕೇಜ್ ಘೋಷಿಸಲು ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿದ್ದು, ಬೆಳೆ...