ತಂದೆಯೋರ್ವ ನಾಲ್ಕು ವರ್ಷಗಳಿಂದ ತನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ದೂರು ದಾಖಲಾಗುತ್ತಿದ್ದಂತೆ 40 ವರ್ಷದ ಆರೋಪಿ ಪರಾರಿಯಾಗಿದ್ದು, ಪೊಲೀಸರು ಹುಡುಕುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
“ಆ ವ್ಯಕ್ತಿಯ ಪತ್ನಿ ತನ್ನ 21 ವರ್ಷದ ಮಗಳೊಂದಿಗೆ ಲವಕುಶ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದಾದ ಬಳಿಕ ನಾವು ಪರಾರಿಯಾದ ಆರೋಪಿಯನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಸಿದ್ದೇವೆ”ಎಂದು ಪೊಲೀಸ್ ವರಿಷ್ಠಾಧಿಕಾರಿ ಆಗಮ್ ಜೈನ್ ಪಿಟಿಐಗೆ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ | ಉಪವಾಸ ಸತ್ಯಾಗ್ರಹ ಬೆಂಬಲಿಸಿ 50 ಹಿರಿಯ ವೈದ್ಯರು ರಾಜೀನಾಮೆ
ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಅತ್ಯಾಚಾರದ ಆರೋಪ ಹೊರಿಸುವುದರ ಜೊತೆಗೆ, ಆತ ತನ್ನ ಮಗಳ ಮೇಲೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನಿಂದಲೂ ಅತ್ಯಾಚಾರವೆಸಗುತ್ತಿದ್ದರಿಂದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯೂ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಆರೋಪಿಯನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, 21 ವರ್ಷದ ಹುಡುಗಿ ಅಕ್ಟೋಬರ್ 10ರಂದು ಪೊಲೀಸರನ್ನು ತಲುಪಿ ದೂರು ನೀಡಿದ್ದಾಳೆ.
ಕಳೆದ ನಾಲ್ಕು ವರ್ಷಗಳಿಂದ ತನ್ನ ತಂದೆ ತನ್ನ ಮೇಲೆ ಅತ್ಯಾಚಾರ ನಡೆಸುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಅಷ್ಟೇ ಅಲ್ಲ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ತಿಳಿಸಿದ್ದಾನೆ.
ಸದ್ಯ ಆರೋಪಿಯ ಗುರುತು ಬಹಿರಂಗಪಡಿಸಲಾಗಿಲ್ಲ. ಆದರೆ ಛತ್ತರ್‌ಪುರ ಜಿಲ್ಲೆಯ ನಿವಾಸಿ ಎಂಬ ಮಾಹಿತಿಯಿದೆ.
