ಮಗಳ ಮೇಲೆ 4 ವರ್ಷ ನಿರಂತರ ಅತ್ಯಾಚಾರ ಎಸಗಿದ ತಂದೆ; ದೂರು ದಾಖಲಾಗುತ್ತಿದ್ದಂತೆ ಪರಾರಿ

Date:

ತಂದೆಯೋರ್ವ ನಾಲ್ಕು ವರ್ಷಗಳಿಂದ ತನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ದೂರು ದಾಖಲಾಗುತ್ತಿದ್ದಂತೆ 40 ವರ್ಷದ ಆರೋಪಿ ಪರಾರಿಯಾಗಿದ್ದು, ಪೊಲೀಸರು ಹುಡುಕುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

- Advertisement -

“ಆ ವ್ಯಕ್ತಿಯ ಪತ್ನಿ ತನ್ನ 21 ವರ್ಷದ ಮಗಳೊಂದಿಗೆ ಲವಕುಶ್ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದಾದ ಬಳಿಕ ನಾವು ಪರಾರಿಯಾದ ಆರೋಪಿಯನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಸಿದ್ದೇವೆ”ಎಂದು ಪೊಲೀಸ್ ವರಿಷ್ಠಾಧಿಕಾರಿ ಆಗಮ್ ಜೈನ್ ಪಿಟಿಐಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ | ಉಪವಾಸ ಸತ್ಯಾಗ್ರಹ ಬೆಂಬಲಿಸಿ 50 ಹಿರಿಯ ವೈದ್ಯರು ರಾಜೀನಾಮೆ

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಅಡಿಯಲ್ಲಿ ಅತ್ಯಾಚಾರದ ಆರೋಪ ಹೊರಿಸುವುದರ ಜೊತೆಗೆ, ಆತ ತನ್ನ ಮಗಳ ಮೇಲೆ 18 ವರ್ಷಕ್ಕಿಂತ ಕಡಿಮೆ ವಯಸ್ಸಿನಿಂದಲೂ ಅತ್ಯಾಚಾರವೆಸಗುತ್ತಿದ್ದರಿಂದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯೂ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಆರೋಪಿಯನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ ಎಂದು ಎಸ್‌ಪಿ ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, 21 ವರ್ಷದ ಹುಡುಗಿ ಅಕ್ಟೋಬರ್ 10ರಂದು ಪೊಲೀಸರನ್ನು ತಲುಪಿ ದೂರು ನೀಡಿದ್ದಾಳೆ.

ಕಳೆದ ನಾಲ್ಕು ವರ್ಷಗಳಿಂದ ತನ್ನ ತಂದೆ ತನ್ನ ಮೇಲೆ ಅತ್ಯಾಚಾರ ನಡೆಸುತ್ತಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಅಷ್ಟೇ ಅಲ್ಲ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎಂದು ತಿಳಿಸಿದ್ದಾನೆ.

ಸದ್ಯ ಆರೋಪಿಯ ಗುರುತು ಬಹಿರಂಗಪಡಿಸಲಾಗಿಲ್ಲ. ಆದರೆ ಛತ್ತರ್‌ಪುರ ಜಿಲ್ಲೆಯ ನಿವಾಸಿ ಎಂಬ ಮಾಹಿತಿಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...