ಸ್ಥಳೀಯ ಬಿಜೆಪಿ ಮುಖಂಡ ಮತ್ತು ಮಧ್ಯಪ್ರದೇಶದ ಸಚಿವ ಕೈಲಾಶ್ ವಿಜಯವರ್ಗಿಯಾ ಅವರ ಸಹಾಯಕ ಮೋನು ಕಲ್ಯಾಣೆ ಅವರನ್ನು ಇಂದೋರ್ನಲ್ಲಿ ಭಾನುವಾರ ಮುಂಜಾನೆ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಜೆಪಿಯ ಯುವ ಮೋರ್ಚಾದ ನಗರ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಕಲ್ಯಾಣೆ, ವಿಜಯವರ್ಗೀಯ ಮತ್ತು ಅವರ ಮಗ ಮಾಜಿ ಶಾಸಕ ಆಕಾಶ್ ವಿಜಯವರ್ಗಿಯ ಅವರ ನಿಕಟರಾಗಿದ್ದರು.
ಪ್ರಾಥಮಿಕ ತನಿಖೆಯಲ್ಲಿ, ಹಳೆಯ ದ್ವೇಷದ ಕಾರಣ ಪಿಯೂಷ್ ಮತ್ತು ಅರ್ಜುನ್ ಎಂಬ ಆರೋಪಿಗಳು ಮೋನು ಕಲ್ಯಾಣೆ ಮೇಲೆ ಗುಂಡು ಹಾರಿಸಿದ್ದಾರೆ ಎಂದು ತಿಳಿಸಿದ್ದಾರೆ.
ನಗರದ ಚಿಮನ್ಬಾಗ್ನಲ್ಲಿ ಕೇಸರಿ ವಾಹನ ರ್ಯಾಲಿಗಾಗಿ ಬ್ಯಾನರ್ ಮತ್ತು ಪೋಸ್ಟರ್ಗಳನ್ನು ಹಾಕುತ್ತಿದ್ದಾಗ ಕಲ್ಯಾಣ್ ಅವರನ್ನು ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಮಾತನಾಡಿದ್ದಾರೆ. ಇಬ್ಬರೂ ಫೋನ್ ನಂಬರ್ ಕೇಳಿದ್ದಾರೆ. ಕಲ್ಯಾಣೆ ತನ್ನ ಮೊಬೈಲ್ ಅನ್ನು ತೆಗೆಯುತ್ತಿದ್ದಂತೆ ಪಿಸ್ತೂಲಿನಿಂದ ಎದೆಗೆ ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಪಂಜಾಬಿನ ಯುವಕ ಕೆನಡಾದಲ್ಲಿ ಗುಂಡಿಕ್ಕಿ ಹತ್ಯೆ
ಕಲ್ಯಾಣ್ರನ್ನು ಅವರ ಸ್ನೇಹಿತರು ಆಸ್ಪತ್ರೆಗೆ ಕರೆದೊಯ್ದಿದ್ದು ಅಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಲಾಗಿದೆ.
ಇಬ್ಬರೂ ಕಲ್ಯಾಣೆಯ ನೆರೆಹೊರೆಯಲ್ಲಿ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಆರೋಪಿಗಳು ತಲೆಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಕೊಲೆ ನಡೆದ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಕಲ್ಯಾಣೆ ನಿವಾಸದ ಹೊರಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೈಲಾಶ್ ವಿಜಯವರ್ಗಿಯ, ಕಲ್ಯಾಣೆ ಸಾವಿಗೆ ಸಂತಾಪ ಸೂಚಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ತಿಳಿಸಿದ್ದಾರೆ.