ಅವಿವಾಹಿತ ಯುವತಿಯ ಹೆರಿಗೆ ಮುಚ್ಚಿಹಾಕಲು ಸಗಣಿ ರಾಶಿಯಲ್ಲಿ ನವಜಾತ ಶಿಶುವಿನ ಸಮಾಧಿ

Date:

ಅವಿವಾಹಿತ ಯುವತಿಯೊಬ್ಬಳು ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ವಿಚಾರವನ್ನು ಸಮಾಜದಿಂದ ಮುಚ್ಚಿಹಾಕುವ ಉದ್ದೇಶದಿಂದ, ನವಜಾತ ಶಿಶುವೊಂದನ್ನು ಸಗಣಿಯ ರಾಶಿಯಲ್ಲಿ ಜೀವಂತವಾಗಿ ಹೂತು ಕಗ್ಗೊಲೆ ಮಾಡಿರುವ ಬೆಚ್ಚಿಬೀಳಿಸುವ ಘಟನೆ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ನಡೆದಿದೆ. ಈ ಕೃತ್ಯದ ಬಳಿಕ, ಯುವತಿಯ ತಂದೆ (ಶಿಶುವಿನ ಅಜ್ಜ) ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

- Advertisement -

ಜಿಲ್ಲೆಯ ವಾರಾಸಿಯೋನಿ (Waraseoni) ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ರಾತ್ರಿಯ ವೇಳೆ ಮಗುವಿನ ಅಳುವಿನ ಶಬ್ದ ಕೇಳಿಸಿಕೊಂಡಿದ್ದ ಗ್ರಾಮಸ್ಥರು, ಈ ಬಗ್ಗೆ ಯುವತಿಯ ಕುಟುಂಬವನ್ನು ಪ್ರಶ್ನಿಸಿದ್ದಾರೆ. ಆದರೆ, ಕುಟುಂಬದವರಿಂದ ಸಮರ್ಪಕ ಉತ್ತರ ಸಿಗದಿದ್ದಾಗ ಅನುಮಾನಗೊಂಡ ಗ್ರಾಮಸ್ಥರು ಶುಕ್ರವಾರ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಶನಿವಾರ ಶಿಶುವಿನ ಮೃತದೇಹವನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಗ್ರಾಮಸ್ಥರ ಅನುಮಾನದ ಬೆನ್ನಲ್ಲೇ ಗ್ರಾಮದ ಸರಪಂಚ್ ಅವರು ಸಭೆಯೊಂದನ್ನು ಕರೆದಿದ್ದರು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ಸ್ಥಳೀಯ ಆಶಾ (ASHA) ಕಾರ್ಯಕರ್ತೆಯೊಬ್ಬರು, ಆ ಕುಟುಂಬದ ಅವಿವಾಹಿತ ಮಗಳು ಮಗುವಿಗೆ ಜನ್ಮ ನೀಡಿರುವ ವಿಚಾರವನ್ನು ದೃಢಪಡಿಸಿದ್ದರು ಎಂದು ಅಧಿಕಾರಿ ವಿವರಿಸಿದ್ದಾರೆ.

ಮಾಹಿತಿ ತಿಳಿದ ತಕ್ಷಣ ಪೊಲೀಸರು, ನಾಯಬ್ ತಹಸೀಲ್ದಾರ್ ಹಾಗೂ ವೈದ್ಯಕೀಯ ತಂಡದೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ, ಸಗಣಿಯ ರಾಶಿಯಲ್ಲಿ ಹೂತುಹಾಕಿದ್ದ ನವಜಾತ ಶಿಶುವಿನ ಮೃತದೇಹವನ್ನು ಹೊರತೆಗೆದರು. ಕಂದಮ್ಮನ ಬಾಯಿ ಮತ್ತು ಕುತ್ತಿಗೆಗೆ ಬಟ್ಟೆ ಕಟ್ಟಿ ಹೂಳಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಯುವತಿಯ ತಂದೆ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಾರಾಸಿಯೋನಿ ಉಪವಿಭಾಗದ ಪೊಲೀಸ್ ಅಧಿಕಾರಿ (ಎಸ್‌ಡಿಒಪಿ) ಅಭಿಷೇಕ್ ಚೌಧರಿ ತಿಳಿಸಿದ್ದಾರೆ. ಸದ್ಯ ಅಸಹಜ ಸಾವು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಮತ್ತು ಮುಂದಿನ ತನಿಖೆಯ ಆಧಾರದ ಮೇಲೆ ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದಿಂದ ನಾಡಿಗೆ ಮುಕ್ತಿ ಸಿಗಲಿ: ಗಾಣಗಾಪುರ ದತ್ತಾತ್ರೇಯನ ಮೊರೆ ಹೋದ ಸಿಎಂ ಡಿ.ಕೆ. ಶಿವಕುಮಾರ್

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದಿಂದ ಜನತೆಗೆ ಶೀಘ್ರವೇ ಮುಕ್ತಿ ಸಿಗಲಿ ಹಾಗೂ...

ಕಾನೂನುಬಾಹಿರ ನೇಮಕದ ಆರೋಪ: ಚಂದ್ರಶೇಖರನ್ ಬೆನ್ನಿಗೆ ನಿಂತ ಮಂಡಳಿ, ವಿರೋಧಿಸಿದ ನೊಯೆಲ್ ಟಾಟಾ

ಟಾಟಾ ಸನ್ಸ್ ಕಂಪನಿಯ ಆಡಳಿತ ಮಂಡಳಿಯು ಎನ್. ಚಂದ್ರಶೇಖರನ್ ಅವರನ್ನು ಅಧ್ಯಕ್ಷರನ್ನಾಗಿ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ ರೈತರ ಒತ್ತಾಯ

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು...

‘ಕಠಿಣ ಆದೇಶಕ್ಕೆ ಆಹ್ವಾನ ನೀಡದಿರಿ’: ಮಣಿಪುರ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದಾಗಿ ಮನೆ ಕಳೆದುಕೊಂಡು ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿರುವವರ...