ಕರ್ನಲ್ ಖುರೇಷಿ ವಿರುದ್ಧ ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ; ತನಿಖೆಗೆ ಎಸ್‌ಐಟಿ ರಚನೆ

Date:

ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ. ಇದಾದ ಬೆನ್ನಲ್ಲೇ ಮಧ್ಯಪ್ರದೇಶ ಪೊಲೀಸರು ತನಿಖೆಗೆ ಎಸ್‌ಐಟಿ ತಂಡವನ್ನು ರಚಿಸಿದೆ.

- Advertisement -

“ನಮ್ಮ ಹೆಣ್ಣುಮಕ್ಕಳ ಸಿಂಧೂರ ಅಳಿಸಿದ್ದ ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಲು ಅವರ ಸಹೋದರಿಯನ್ನೇ ಕಳುಹಿಸಿದ್ದೆವು” ಎಂದು ಮಧ್ಯಪ್ರದೇಶ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಕರ್ನಲ್ ಸೋಫಿಯಾ ಖುರೇಷಿ ಅವರ ಕುರಿತು ವಿಜಯ್ ಶಾ ನೀಡಿದ ಹೇಳಿಕೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದೂರೂ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಇದನ್ನು ಓದಿದ್ದೀರಾ? ಕರ್ನಲ್ ಖುರೇಷಿ ಕುರಿತು ಅವಹೇಳನ: ಬಿಜೆಪಿ ಸಚಿವ ವಿಜಯ್ ಶಾ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂ ಆದೇಶ

ಸೋಮವಾರ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಎನ್ ಕೋಟೀಶ್ವರ್ ಸಿಂಗ್ ಅವರ ಪೀಠವು ಈ ಪ್ರಕರಣದ ತನಿಖೆಯನ್ನು ನಡೆಸಿದ್ದು, ಮಧ್ಯಪ್ರದೇಶ ಕೇಡರ್‌ನ ಮೂವರು ಐಪಿಎಸ್ ಅಧಿಕಾರಿಗಳ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಆದೇಶಿಸಿದೆ.

ಈ ಆದೇಶದಂತೆ ಎಸ್‌ಐಟಿ ರಚಿಸಲಾಗಿದ್ದು, ಎಸ್‌ಐಟಿಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಪ್ರಮೋದ್ ವರ್ಮಾ, ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಕಲ್ಯಾಣ್ ಚಕ್ರವರ್ತಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ವಾಹಿನಿ ಸಿಂಗ್ ಇದ್ದಾರೆ ಎಂದು ವರದಿಯಾಗಿದೆ.

ಇನ್ನು ಮೇ 20ರ ಬೆಳಿಗ್ಗೆ 10 ಗಂಟೆಯೊಳಗೆ ಎಸ್‌ಐಟಿ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ತಿಳಿಸಿದ್ದು ಅದರಂತೆ ಮಂಗಳವಾರದೊಳಗೆ ಎಸ್‌ಐಟಿ ರಚಿಸಲಾಗಿದೆ. ಇನ್ನು ಈ ತನಿಖೆಯನ್ನು ಬಹಳ ನಿಕಟವಾಗಿ ಪರಿಶೀಲಿಸುವುದಾಗಿಯೂ ಉನ್ನತ ನ್ಯಾಯಾಲಯ ಹೇಳಿದೆ. ತನಿಖಾ ತಂಡವು ಮೇ 28ರಂದು ತನ್ನ ಮೊದಲ ವರದಿಯನ್ನು ಸಲ್ಲಿಸಬೇಕು ಎಂದೂ ಸುಪ್ರೀಂ ಕೋರ್ಟ್ ಸೂಚಿಸಿದೆ.

ಇನ್ನು ಸುಪ್ರೀಂ ಕೋರ್ಟ್ ವಿಜಯ್ ಶಾ ವಿರುದ್ಧ ವಾಗ್ದಾಳಿ ನಡೆಸಿದೆ. ಆದರೆ ಸದ್ಯ ಬಂಧನಕ್ಕೆ ತಡೆ ನೀಡಿದೆ. ಕ್ಷಮೆಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್‌, ವಿಚಾರಣೆಗೆ ಹಾಜರಾಗುವಂತೆ ವಿಜಯ್ ಶಾ ಅವರಿಗೆ ಸೂಚಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ನಲ್ಲಿ ಉತ್ತರ ಪ್ರದೇಶದ ಮತದಾರರ ಪಟ್ಟಿಗೆ 16.18 ಲಕ್ಷ ನಿಗೂಢ ಮತದಾರರ ಸೇರ್ಪಡೆ: ಏನಿದು ವರದಿ?

ಉತ್ತರ ಪ್ರದೇಶದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR)ಯ ಆರಂಭಿಕ ಹಂತಗಳಲ್ಲಿ 16.18...

ಪಂಜಾಬ್ ಸಿಎಂ ಭಗವಂತ್ ಮಾನ್ ಕ್ಯಾಂಪ್ ಕಚೇರಿ, ಒಎಸ್‌ಡಿ ಮನೆ ಮೇಲೆ ಸಿಬಿಐ ದಾಳಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರ ಆರೋಪಗಳ...