ಯುವಕರ ತಲೆ ಬೋಳಿಸಿ ವಿಕೃತಿ ಮೆರೆದ ಪೊಲೀಸರು

Date:

ಐಸಿಸಿ ಚಾಂಪಿಯನ್ಸ್‌ ಟ್ರೋಫಿಯನ್ನು ಭಾರತ ತಂಡ ಗೆದ್ದು ಹಿನ್ನೆಲೆ ಯುವಕರ ಗುಂಪೊಂದು ಸಂಭ್ರಮಾಚರಣೆ ನಡೆಸಿದೆ. ಈ ವೇಳೆ, ಅತಿರೇಕದಿಂದ ಯುವಕರು ವರ್ತಿಸಿದ್ದು, ಅವರ ತಲೆ ಬೋಳಿಸಿ ಪೊಲೀಸರು ಕೂಡ ವಿಕೃತಿ ಮೆರೆದಿದ್ದಾರೆ.

- Advertisement -

ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಸಯ್ಯಾಜಿ ಗೇಟ್ ಪ್ರದೇಶದಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಇದೀಗ, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಕರಣ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸಯ್ಯಾಜಿ ಗೇಟ್‌ ಬಳಿ ಯುವಕರು ಭಾನುವಾರ ರಾತ್ರಿ ಭಾರೀ ಪ್ರಮಾಣದಲ್ಲಿ ಪಟಾಕಿಗಳನ್ನು ಸಿಡಿಸಿದ್ದಾರೆ. ಅವರನ್ನು ತಡೆಯಲು ಬಂದ ಪೊಲೀಸರ ವಿರುದ್ಧವೂ ಯುವಕರು ದಾಂಧಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ.

ಯುವಕರನ್ನು ವಶಕ್ಕೆ ಪಡೆದ ಪೊಲೀಸರು ಅವರ ತಲೆಯನ್ನು ಬೋಳಿಸಿ, ರಸ್ತೆಯಲ್ಲಿ ಮೆರವಣಿಗೆ ನಡೆಸಿದ್ದಾರೆ. ಸಯ್ಯಾಜಿ ಗೇಟ್ ಪೊಲೀಸ್‌ ಠಾಣಾಧಿಕಾರಿ ಅಜಯ್ ಸಿಂಗ್ ಗುಜ್ರಾರ್ ನೇತೃತ್ವದಲ್ಲಿ ಪೊಲೀಸರು ಯುವಕರನ್ನು ಅವಮಾನಕರವಾಗಿ ಶಿಕ್ಷಿಸಿದ್ದಾರೆ. ಯುವಕರ ಮೇಲೆ ಪೊಲೀಸರು ಹಿಂಸಾತ್ಮಕ ಮತ್ತು ವಿಕೃತವಾಗಿ ದೌರ್ಜನ್ಯ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ದೇವಾಸ್‌ನ ಎಸ್‌ಪಿ ಪುನೀತ್ ಗೆಹ್ಲೋಟ್, “ಭಾರತ ತಂಡದ ಗೆಲುವನ್ನು ಯುವಕರು ಸಂಭ್ರಮಿಸಿದ್ದರು. ಅವರು ಅಪರಾಧಿಗಳಲ್ಲ; ಅವರನ್ನು ಸಾರ್ವಜನಿಕವಾಗಿ ಮೆರವಣಿಗೆ ನಡೆಸಿರುವುದು ನ್ಯಾಯಸಮ್ಮತವೂ ಅಲ್ಲ. ಪೊಲೀಸರ ಧೋರಣೆಯನ್ನು ನಾವು ಕೂಡ ಖಂಡಿಸಿದ್ದೇವೆ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲಿದ್ದೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...