ಮಧ್ಯಪ್ರದೇಶ | ಹಿಜಾಬ್ ವಿವಾದಕ್ಕೆ ಶಾಲೆಯೊಂದು ಬಲಿ; ಮೂವರು ಶಿಕ್ಷಕರ ಬಂಧನ

Date:

ಮುಸ್ಲಿಮೇತರ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಒತ್ತಾಯಿಸಲಾಗಿದೆ ಎಂಬ ಆರೋಪದ ಮೇಲೆ ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಶಾಲೆಯೊಂದರ ಮಾನ್ಯತೆಯನ್ನು ರದ್ದುಪಡಿಸಲಾಗಿದೆ. ಅಲ್ಲದೆ, ಶಾಲೆಯ ಪ್ರಾಂಶುಪಾಲರು ಸೇರಿದಂತೆ ಮೂವರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

- Advertisement -

ಮೇ ತಿಂಗಳ ಕೊನೆಯಲ್ಲಿ ಗಂಗಾ ಜಮುನಾ ಹೈಯರ್ ಸೆಕೆಂಡರಿ ಶಾಲೆಯ ಬೋರ್ಡ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ 18 ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದ ಪೋಸ್ಟರ್‌ವೊಂದು ವೈರಲ್ ಆಗಿತ್ತು. ಪೋಸ್ಟರ್‌ನಲ್ಲಿದ್ದ ಕೆಲವು ವಿದ್ಯಾರ್ಥಿನಿಯರು ಸ್ಕಾರ್ಫ್‌ ಧರಿಸಿದ್ದರು. ಅದನ್ನು ಮುಸ್ಲಿಮೇತರ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಆ ಬಳಿಕ, ವಿವಾದ ಮುನ್ನೆಲೆಗೆ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಹಿಂದುತ್ವವಾದಿ ಕೋಮು ಸಂಘಟನೆಗಳು ಧಾರ್ಮಿಕ ಮತಾಂತರದ ನಡೆಯುತ್ತಿದೆ ಎಂಬ ಆರೋಪಗಳನ್ನು ಮಾಡಿದ್ದವು. ಶಾಲೆಯ ನೋಂದಣಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದವು. ಆದರೆ, ಶಾಲೆಯಲ್ಲಿ ಸ್ಕಾರ್ಫ್‌ ಧರಿಸುವುದು ಸಮವಸ್ತ್ರದ ಭಾಗವಾಗಿದೆ. ಯಾವುದೇ ವಿದ್ಯಾರ್ಥಿಗಳಿಗೆ ಹಿಜಾಬ್ ಧರಿಸಲು ಒತ್ತಾಯಿಸಿಲ್ಲ ಎಂದು ಶಾಲೆಯ ಆಡಳಿತ ಮಂಡಳಿ ಹೇಳಿರುವುದಾಗಿ ‘ಟಿಐಇ‘ ವರದಿ ಮಾಡಿದೆ.

ಈ ಮಧ್ಯೆ, ಪ್ರಕರಣ ಸಂಬಂಧ ಶಾಲೆಯ ಪ್ರಾಂಶುಪಾಲೆ ಅಫ್ಶಾ ಶೇಖ್, ಗಣಿತ ಶಿಕ್ಷಕ ಅನಾಸ್ ಅತಾಹರ್ ಮತ್ತು ಭದ್ರತಾ ಸಿಬ್ಬಂದಿ ರುಸ್ತಮ್ ಅಲಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

“ಮುಖ್ಯವಾಗಿ ಶಾಲಾ ವಿದ್ಯಾರ್ಥಿಗಳು ಮತ್ತು ಅವರ ಕುಟುಂಬದ ಸದಸ್ಯರನ್ನು ಒಳಗೊಂಡ ಆರು-ಏಳು ಸಾಕ್ಷಿಗಳ ಹೇಳಿಕೆಗಳನ್ನು ಆಧರಿಸಿ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ದಾಮೋಹ್ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ಸಿಂಗ್ ಹೇಳಿದ್ದಾರೆ. ಅವರೆಲ್ಲರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಶಾಲಾ ಆಡಳಿತ ಸಮಿತಿಯ 11 ಸದಸ್ಯರ ವಿರುದ್ಧ ಐಪಿಸಿ ಸೆಕ್ಷನ್ 295 (ಯಾವುದೇ ಸಮುದಾಯ ವ್ಯಕ್ತಿಗಳು ಪವಿತ್ರವೆಂದು ಪರಿಗಣಿಸುವ ಯಾವುದೇ ವಸ್ತುವನ್ನು ಹಾನಿಗೊಳಿಸುವುದು ಅಥವಾ ಅಪವಿತ್ರಗೊಳಿಸುವುದು) ಮತ್ತು 506 (ಅಪರಾಧ ಬೆದರಿಕೆ) ಹಾಗೂ ಮಧ್ಯಪ್ರದೇಶದ ಧಾರ್ಮಿಕ ಸ್ವಾತಂತ್ರ್ಯ ಕಾಯಿದೆ-2021ರ ನಿಬಂಧನೆಗಳ ಅಡಿಯಲ್ಲಿ ದಾಮೋಹ್ ಪೊಲೀಸರು ಜೂನ್ 7 ರಂದು ಪ್ರಕರಣ ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: 2002ರ ಗುಜರಾತ್ ಗಲಭೆ | ಬೆಸ್ಟ್ ಬೇಕರಿ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಖುಲಾಸೆ

ಜೂನ್ 2 ರಂದು, ರಾಜ್ಯ ಶಿಕ್ಷಣ ಇಲಾಖೆಯು ಶಾಲೆಯ ಮಾನ್ಯತೆಯನ್ನು ರದ್ದುಗೊಳಿಸಿದೆ. ವಿದ್ಯಾರ್ಥಿಗಳಿಗೆ ಮೀಸಲಾದ ಹಲವಾರು ಸೌಲಭ್ಯಗಳು ಅವರಿಗೆ ಲಭ್ಯವಿಲ್ಲ ಎಂದು ಆರೋಪಿಸಲಾಗಿದೆ. ಅಲ್ಲದೆ, ಶಾಲೆಯು ಅನಧಿತ ಕಟ್ಟಡವೆಂದು ಪರಿಗಣಿಸಿ ಕಟ್ಟದ ಭಾಗಗಳನ್ನು ಕಡವುವುದಾಗಿ ಸ್ಥಳೀಯ ಪುರಸಭೆ ಬೆದರಿಕೆ ಹಾಕಿದೆ ಎಂದು ತಿಳಿದುಬಂದಿದೆ.

ಈ ಶಾಲೆಯನ್ನು 2010ರಲ್ಲಿ ಗಂಗಾ ಜಮುನಾ ವೆಲ್ಫೇರ್ ಸೊಸೈಟಿ ಸ್ಥಾಪಿಸಿತ್ತು. ಸುಮಾರು 1,200 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಇವರಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಕಾರ್ಮಿಕ ಕುಟುಂಬಗಳ ಹಿನ್ನೆಲೆ ಹೊಂದಿದ್ದಾರೆ. ಅವರ ಪೋಷಕರು ಕೂಲಿಗಳು, ರೈತರು ಮತ್ತು ಬೀಡಿ ತಯಾರಕರಾಗಿ ಕೆಲಸ ಮಾಡುತ್ತಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...