ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ತನ್ನ ವಿದ್ಯಾರ್ಥಿಗಳಿಗೆ ಮದ್ಯ ನೀಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಬರ್ವಾರಾ ಬ್ಲಾಕ್‌ನ ಖಿರ್ಹಾನಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಲಾಲ್ ನವೀನ್ ಪ್ರತಾಪ್ ಸಿಂಗ್ ಅವರು ವಿದ್ಯಾರ್ಥಿಗಳಿಗೆ ಮದ್ಯ ನೀಡಿದ್ದಾರೆ. ಅವರ ವಿಡಿಯೋ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ.
ಇದನ್ನು ಓದಿದ್ದೀರಾ? ಏರ್ ಇಂಡಿಯಾ ವಿಮಾನದಲ್ಲಿ ಸೋರಿದ ನೀರು: ವೈರಲ್ ಆದ ವಿಡಿಯೋ
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಜಿಲ್ಲಾಧಿಕಾರಿ ದಿಲೀಪ್ ಕುಮಾರ್ ಯಾದವ್ ಅವರು ಜಿಲ್ಲಾ ಶಿಕ್ಷಣ ಅಧಿಕಾರಿ ಒಪಿ ಸಿಂಗ್ ಅವರಿಗೆ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ವಿಡಿಯೋವನ್ನು ವಿವಿಧ ವಿಭಾಗದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬಳಿಕ ಶಿಕ್ಷಕನನ್ನು ಲಾಲ್ ನವೀನ್ ಪ್ರತಾಪ್ ಸಿಂಗ್ ಎಂದು ಗುರುತಿಸಲಾಗಿದೆ.
अब मुझे पूरा यकीन हो गया कि मेरा देश बदल रहा है। मध्य प्रदेश के कटनी में शिक्षक लाल नवीन प्रताप सिंह ने बच्चों को शराब पिलाई। pic.twitter.com/aHeyITL3Th
— Manraj Meena (@ManrajM7) April 19, 2025
ದುರ್ನಡತೆ, ಮಕ್ಕಳನ್ನು ಮದ್ಯ ಕುಡಿಯಲು ಪ್ರೋತ್ಸಾಹಿಸುವುದು ಮತ್ತು ಶಿಕ್ಷಕರ ಘನತೆಗೆ ಕುಂದುಂಟು ಮಾಡಿದ ಆರೋಪದ ಮೇಲೆ ಸಿಂಗ್ ವಿರುದ್ಧ ಮಧ್ಯಪ್ರದೇಶ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳ ಅಡಿಯಲ್ಲಿ ತಕ್ಷಣವೇ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಕೋಣೆಯೊಂದರಲ್ಲಿ ಕಪ್‌ಗಳಲ್ಲಿ ಸಣ್ಣ ಹುಡುಗರಿಗೆ ಮದ್ಯ ನೀಡುತ್ತಿರುವುದು ಕಂಡುಬಂದಿದೆ. ಹಾಗೆಯೇ ಅವರಲ್ಲಿ ಒಬ್ಬರು ಮದ್ಯ ಸೇವಿಸುವ ಮುನ್ನ ನೀರು ಬೆರೆಸುವಂತೆ ಹೇಳುತ್ತಿರುವುದು ಕೇಳಿಬರುತ್ತದೆ.
