ಮಧ್ಯ ಪ್ರದೇಶ ಶೇ.71, ಛತ್ತೀಸ್‌ಗಢ ಶೇ.68 ಮತದಾನ: ಅಲ್ಲಲ್ಲಿ ಗಲಭೆ, ಯೋಧ ಸಾವು

Date:

ಮಧ್ಯ ಪ್ರದೇಶದ 230 ಕ್ಷೇತ್ರಗಳಿಗೆ ನಡೆದ ಏಕ ಹಂತ ಹಾಗೂ ಛತ್ತೀಸ್‌ಗಢದ 70 ಸ್ಥಾನಗಳಿಗೆ ನಡೆದ ಕೊನೆಯ ಹಂತದ ಮತದಾನ ಮುಕ್ತಾಯಗೊಂಡಿದೆ. ಚುನಾವಣಾ ಆಯೋಗದ ವರದಿ ಪ್ರಕಾರ ಸಂಜೆ 6 ಗಂಟೆ ವೇಳೆಗೆ ಮಧ್ಯ ಪ್ರದೇಶದಲ್ಲಿ ಶೇ. 71.16, ಛತ್ತೀಸ್‌ಗಢದಲ್ಲಿ ಶೇ. 68.15 ರಷ್ಟು ಮತದಾನವಾಗಿದೆ.

- Advertisement -

ಎರಡೂ ರಾಜ್ಯದ ಸಂಪೂರ್ಣ ಶೇಕಡವಾರು ಮತದಾನ ಏರಿಕೆಯಾಗುವ ಸಾಧ್ಯತೆಯಿದೆ. ಮತದಾನದ ಅವಧಿ ಮುಗಿಯುವವರೆಗೆ ಮತಗಟ್ಟೆಗಳನ್ನು ತಲುಪುವ ಮತದಾರರಿಗೆ ತಮ್ಮ ಹಕ್ಕು ಚಲಾಯಿಸಲು ಅವಕಾಶ ನೀಡಲಾಗಿದೆ. ಮತದಾನಕ್ಕೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆಯ ನಂತರ ಅಂತಿಮ ಅಂಕಿಅಂಶಗಳನ್ನು ಶನಿವಾರದೊಳಗೆ ತಿಳಿಯಲಾಗುವುದು ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಛತ್ತೀಸ್‌ಗಢದ ಬಿಂದ್ರನವಗಢ ಪ್ರದೇಶದಲ್ಲಿ ಶುಕ್ರವಾರ ನಕ್ಸಲರು ಮತಗಟ್ಟೆಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿಯಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಒಬ್ಬ ಯೋಧ ಹುತಾತ್ಮರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಖಾಸಗಿ ವಲಯದಲ್ಲಿ ಶೇ.75 ಮೀಸಲಾತಿ ಅಸಂವಿಧಾನಿಕ ಎಂದ ಹರಿಯಾಣ ಹೈಕೋರ್ಟ್

ಬಡೆ ಗೋಬ್ರಾ ಮತಗಟ್ಟೆಯಿಂದ ವಾಪಸಾಗುತ್ತಿದ್ದಾಗ ನಕ್ಸಲರು ಮತಗಟ್ಟೆಯನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟಿಸಿದ್ದಾರೆ. ಐಟಿಬಿಪಿ ಹೆಡ್ ಕಾನ್‌ಸ್ಟೆಬಲ್ ಜೋಗಿಂದರ್ ಸಿಂಗ್ ಸ್ಫೋಟದಲ್ಲಿ ಸಾವನ್ನಪ್ಪಿದ್ದಾರೆ. ಮತಗಟ್ಟೆ ಮತ್ತು ಇವಿಎಂ ಯಂತ್ರವು ಗರಿಯಾಬಂದ್‌ಗೆ ಸುರಕ್ಷಿತವಾಗಿ ತಲುಪಿಸಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

230 ವಿಧಾನಸಭೆ ಸ್ಥಾನಗಳಲ್ಲಿ ಮತದಾನ ಮಾಡಲು ಚುನಾವಣಾ ಆಯೋಗ 64,626 ಮತಗಟ್ಟೆಗಳನ್ನು ಸ್ಥಾಪಿಸಿದೆ. ಇವುಗಳಲ್ಲಿ 17,032 ಸೂಕ್ಷ್ಮ ಮತಗಟ್ಟೆಗಳಿವೆ. ರಾಜ್ಯದ ಒಟ್ಟು 230 ವಿಧಾನಸಭಾ ಸ್ಥಾನಗಳಿಗೆ 2,533 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಛತ್ತೀಸ್‌ಗಢದ ಎರಡನೇ ಹಂತದ ಚುನಾವಣೆಯಲ್ಲಿ 958 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನವೆಂಬರ್ 7 ರಂದು ನಡೆದ ಮೊದಲ ಹಂತದಲ್ಲಿ ರಾಜ್ಯದ 20 ಸ್ಥಾನಗಳಿಗೆ ಮತದಾನವಾಗಿ ಶೇ. 78 ಮಂದಿ ತಮ್ಮ ಹಕ್ಕು ಚಲಾಯಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...