ಲಂಚ ನೀಡಲು ನಿರಾಕರಣೆ :ಬುಡಕಟ್ಟು ಯುವಕನ ಮೇಲೆ ಬಜರಂಗ ದಳದವರಿಂದ ಅಮಾನುಷ ಹಲ್ಲೆ

Date:

ಮಧ್ಯ ಪ್ರದೇಶದ ಬೆತುಲ್ ಜಿಲ್ಲೆಯ ಗ್ರಾಮವೊಂದರಲ್ಲಿ ಲಂಚ ನೀಡಲು ನಿರಾಕರಿಸಿದ ಕಾರಣಕ್ಕಾಗಿ ಬಜರಂಗದಳದ ಕಾರ್ಯಕರ್ತರು ಲಂಚ ನೀಡಲು ನಿರಾಕರಿಸಿದ್ದಕ್ಕೆ ಟೀ ಮಾರಾಟ ಮಾಡುವ ಬುಡಕಟ್ಟು ಸಮುದಾಯದ ಯುವಕನೊಬ್ಬನ ಮೇಲೆ ತಲೆ ಕೆಳಗೆ ಮಾಡಿ ನೇತುಹಾಕಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

- Advertisement -

2023ರ ನವೆಂಬರ್‌ನಲ್ಲಿ ಬುಡಕಟ್ಟು ಸಮುದಾಯದ ಯುವಕ ಅಶೀಸ್ ಪಾತ್ರೆ ಎಂಬುವವರ ಮೇಲೆ  ಅಮಾನುಷ ಹಲ್ಲೆ ನಡೆದಿದ್ದು, ಘಟನೆಯ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈಗ ಹಲ್ಲೆಯ ಸಂಪೂರ್ಣ ವಿಡಿಯೋ ಫೆ.13ರಂದು ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಚಹದ ಅಂಗಡಿ ನಡೆಸಲು ಲಂಚ ಕೇಳಿದ ಬಜರಂಗದಳದ ಇಬ್ಬರು ಕಾರ್ಯಕರ್ತರು ಅಶೀಸ್ ಪಾತ್ರೆ ಎಂಬುವವರನ್ನು ಮೊದಲು ವಿವಸ್ತ್ರಗೊಳಿಸಿ ತಲೆ ಕೆಳಗೆ ಮಾಡಿ ನೇತು ಹಾಕಿದ್ದಾರೆ. ನಂತರ ದೊಣ್ಣೆ ಹಾಗೂ ಬೆಲ್ಟ್ಗಳಿಂದ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಸಂತ್ರಸ್ತ ಅಶೀಶ್ ಪಾತ್ರೆ ತಮ್ಮ ತಂದೆಯೊಂದಿಗೆ ಚಹದ ಅಂಗಡಿ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಪೊರೇಟ್‌ಗೆ ರೆಡ್ ಕಾರ್ಪೆಟ್, ರೈತರಿಗೆ ಮುಳ್ಳಿನ ಬೇಲಿ- ಇದು ಮೋದಿ ಶೈಲಿ

ಪೊಲೀಸರಿಗೆ ಪಾತ್ರೆ ಅವರು ದೂರು ನೀಡಿರುವ ಪ್ರಕಾರ ದಾಳಿ ನಡೆಸಿದವರಲ್ಲಿ ಒಬ್ಬಾತ ಬಂದೂಕನ್ನು ಹೊಂದಿದ್ದ ಈ ಹಿಂದೆ ತಾನು ಕೊಲೆ ಮಾಡಿರುವ ಬಗ್ಗೆ ಮತ್ತೊಬ್ಬ ದಾಳಿಕೋರನಿಗೆ ತಿಳಿಸಿದ್ದಾನೆ. ಈ ಕಾರಣದಿಂದ ಸಂತ್ರಸ್ತ ಯಾರಿಗೂ ಹೇಳಿರಲಿಲ್ಲ.

ವಿಡಿಯೋ ವೈರಲ್ ಆದ ನಂತರ ಫೆ.13ರಂದು ತನ್ನ ಅಣ್ಣನಿಗೆ ಸಂತ್ರಸ್ತ ಪಾತ್ರೆ ತಿಳಿಸಿದ್ದಾರೆ. ನಂತರ ವಿಸ್ತಾರವಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆ ಸಂಬಂಧ ಎಸ್ಸಿ/ಎಸ್ಟಿ(ದೌರ್ಜನ್ಯ ತಡೆ) ಕಾಯ್ದೆಯಡಿ ಬಜರಂಗದಳದ ನಾಯಕ ಚಂಚಲ್ ರಜಪೂತ್ ಹಾಗೂ  ದೂರು ದಾಖಲಿಸಲಾಗಿದೆ.

ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಜಿತು ಪಟವಾರಿ, ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ದಲಿತರು ಮತ್ತು ಬುಡಕಟ್ಟು ಸಮುದಾಯದ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಧ್ಯ ಪ್ರದೇಶದಲ್ಲಿ 2022ರಲ್ಲಿ ದಲಿತರ ಮೇಲೆ 11,384 ದೌರ್ಜನ್ಯ ಪ್ರಕರಣಗಳು ನಡೆದಿದ್ದರೆ, 2023ರಲ್ಲಿ 11,171 ಪ್ರಕರಣಗಳು ವರದಿಯಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...