ಗಾಯಕ ಟಿಎಂ ಕೃಷ್ಣಗೆ ‘ಎಂಎಸ್ ಸುಬ್ಬುಲಕ್ಷ್ಮಿ’ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ನಿರ್ಬಂಧ

Date:

ಗಾಯಕ ಟಿಎಂ ಕೃಷ್ಣ ಅವರಿಗೆ ‘ಸಂಗೀತ ಕಲಾನಿಧಿ ಎಂ ಎಸ್ ಸುಬ್ಬುಲಕ್ಷ್ಮಿ ಪ್ರಶಸ್ತಿ’ ನೀಡುವುದಕ್ಕೆ ಮದ್ರಾಸ್ ಹೈಕೋರ್ಟ್ ಮಂಗಳವಾರ (ನವೆಂಬರ್ 19) ನಿರ್ಬಂಧಿಸಿದೆ. ಎಂ ಎಸ್ ಸುಬ್ಬುಲಕ್ಷ್ಮಿ ಅವರ ಹೆಸರಲ್ಲಿ ಟಿಎಂ ಕೃಷ್ಣ ಅವರಿಗೆ ಪ್ರಶಸ್ತಿ ನೀಡದಂತೆ ‘ದಿ ಹಿಂದೂ ಪತ್ರಿಕೆಗೆ’ ನಿರ್ಬಂಧಿಸಿದೆ.

- Advertisement -

ದಿ ಹಿಂದೂ ಪತ್ರಿಕೆ 2005ರಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಲು ಆರಂಭಿಸಿತು. ಚೆನ್ನೈ ಮ್ಯೂಸಿಕ್ ಅಕಾಡೆಮಿ ನೀಡುವ ಸಂಗೀತ ಕಲಾನಿಧಿ ಪಶಸ್ತಿ ಗೆದ್ದವರಿಗೆ ಈ ನಗದು ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ವರ್ಷ ಕರ್ನಾಟಿಕ್ ಸಂಗೀತ ಗಾಯಕ ಟಿಎಂ ಕೃಷ್ಣ ಅವರಿಗೆ ಸಂಗೀತ ಕಲಾನಿಧಿ ಪ್ರಶಸ್ತಿ ಲಭಿಸಿದೆ. ಈ ನಿಟ್ಟಿನಲ್ಲಿ ದಿ ಹಿಂದೂ ಪತ್ರಿಕೆ ಅವರಿಗೆ ‘ಸಂಗೀತ ಕಲಾನಿಧಿ ಎಂ ಎಸ್ ಸುಬ್ಬುಲಕ್ಷ್ಮಿ’ ಪ್ರಶಸ್ತಿ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಎಂಎಸ್ ಸುಬ್ಬುಲಕ್ಷ್ಮಿ ಅವರ ಮೊಮ್ಮಗ ಶ್ರೀನಿವಾಸನ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ ಜಯಚಂದ್ರನ್ ಅವರ ಪೀಠವು ಈ ಮಧ್ಯಂತರ ಆದೇಶವನ್ನು ನೀಡಿದೆ.

ಇದನ್ನು ಓದಿದ್ದೀರಾ? ಎಸ್‌ಸಿ/ಎಸ್‌ಟಿ ಪತ್ರಿಕಾ ಸಂಪಾದಕರ ಸಂಘದಿಂದ ದತ್ತಿ ಮತ್ತು ಸಂಘದ ಗೌರವ ಪ್ರಶಸ್ತಿ ಪ್ರಕಟ

ಈ ಹಿಂದೆ ಟಿಎಂ ಕೃಷ್ಣ ಅವರು ಎಂ ಎಸ್ ಸುಬ್ಬುಲಕ್ಷ್ಮಿ ಅವರನ್ನು ಟೀಕಿಸಿದ್ದರು. ಹಾಗಾಗಿ ನನ್ನ ಅಜ್ಜಿಯನ್ನು ನಿರಂತರವಾಗಿ ಟೀಕಿಸುವವರಿಗೆ ಪ್ರಶಸ್ತಿ ನೀಡಬಾರದು ಎಂಬುದು ಶ್ರೀನಿವಾಸನ್ ವಾದವಾಗಿದೆ.

ಈ ಅರ್ಜಿ ಪುರಸ್ಕರಿಸಿದ ಮದ್ರಾಸ್ ಹೈಕೋರ್ಟ್ “ಎಂ ಎಸ್ ಸುಬ್ಬುಲಕ್ಷ್ಮಿ ಅವರ ಹೆಸರಲ್ಲಿ ಪ್ರಶಸ್ತಿ ನೀಡುವುದು ಅವರ ಆಶಯಕ್ಕೆ ವಿರುದ್ಧವಾಗಿದೆ” ಎಂದು ಅಭಿಪ್ರಾಯಿಸಿ ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವುದನ್ನು ಮುಂದುವರಿಸಬಾರದು ಎಂದು ಆದೇಶಿಸಿದೆ.

ಹಾಗೆಯೇ ಶ್ರೀನಿವಾಸನ್ ಅರ್ಜಿ ತಿರಸ್ಕರಿಸುವಂತೆ ಕೋರಿ ಸಂಗೀತ ಅಕಾಡೆಮಿ ಸಲ್ಲಿಸಿದ್ದ ಅರ್ಜಿಯನ್ನೂ ನ್ಯಾಯಾಧೀಶರು ವಜಾಗೊಳಿಸಿದ್ದಾರೆ. ಆಕೆಯ ಇಚ್ಛೆಯ ಬಗ್ಗೆ ತಿಳಿದಿರುವ ಶ್ರೀನಿವಾಸನ್‌ಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ಎಂದು ಪೀಠ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...