ಕ್ರೈಸ್ತ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿದ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ.
ಯೂಟ್ಯೂಬ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅಣ್ಣಾಮಲೈ, ದೀಪಾವಳಿ ಸಂದರ್ಭದಲ್ಲಿ ಪಟಾಕಿಗಳನ್ನು ನಿಷೇಧಿಸಬೇಕೆಂದು ಸುಪ್ರೀಂ ಕೋರ್ಟ್ ನಿಷೆಧಿಸುವುದಕ್ಕೆ ಮುನ್ನ ಕ್ರೈಸ್ತ ಮಿಷಿನರಿ ನಡೆಸುತ್ತಿರುವ ಸರ್ಕಾರೇತರ ಸಂಸ್ಥೆ ಅರ್ಜಿ ಸಲ್ಲಿಸಿತ್ತು ಎಂದು ಹೇಳಿದ್ದರು.
ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರು ಪ್ರಕರಣ ರದ್ದುಗೊಳಿಸುವ ಅರ್ಜಿಯನ್ನು ವಜಾಗೊಳಿಸಿ ಸೇಲಂನ ನ್ಯಾಯಾಂಗ ಮ್ಯಾಜಿಸ್ಟ್ರೇಟರಿಗೆ ಹೈಕೋರ್ಟ್ ವಿಷಯಗಳಿಂದ ಪ್ರಭಾವಿತರಾಗದೆ ವಿಚಾರಣೆ ನಡೆಸುವಂತೆ ನಿರ್ದೇಶಿಸಿದರು.
ಅಣ್ಣಾಮಲೈ ವಿಷಯವು ಬೇರೆ ಪ್ರಕರಣದಂತಲ್ಲ ಅಧಿಕಾರ ಹಾಗೂ ಪ್ರಭಾವದ ಹುದ್ದೆ ಹೊಂದಿರುವವರು ನೆನಪಿನಲ್ಲಿ ಇಟ್ಟುಕೊಂಡು ಮಾತನಾಡಬೇಕು. ಪ್ರಭಾವ ಹೊಂದಿರುವ ಹಿಂದೂ ಸಮುದಾಯದ ಇವರು ಬೇರೆ ಸಮುದಾಯದ ಮೇಲೆ ಮಾತನಾಡುವ ಭಾಷೆಯು ಈ ದೇಶದ ನಾಗರಿಕರ ಮೇಲೆ ವಿಸ್ತಾರವಾಗಿ ತಲುಪುವುದಲ್ಲದೆ ಗಂಭೀರ ಪರಿಣಾಮ ಬೀರುತ್ತದೆ. ಬಹು ಸಂಖ್ಯಾತ ಸಮುದಾಯಕ್ಕೆ ಅವರು ಮಾಡಿದ ಭಾಷಣವು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಸಂಸ್ಕೃತಿಯನ್ನು ನಾಶಗೊಳಿಸಲು ಪ್ರಯತ್ನಿಸಿದೆ ಎಂದು ನ್ಯಾಯಮೂರ್ತಿ ವೆಂಕಟೇಶ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬೇಸಿಗೆ ಬೇಗ ಬಂದಿದೆ; ಜೀವಜಲಕ್ಕೆ ತತ್ವಾರ ತಂದಿದೆ
ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಪರಿಸರಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಅಣ್ಣಾಮಲೈ ಅವರು ಉದ್ದೇಶಪೂರ್ವಕವಾಗಿ ಹಾಗೂ ಅನುಕೂಲಕರವಾಗಿ ಕೋಮು ದ್ವೇಷದ ಅಸ್ತ್ರವಾಗಿ ಬಳಸಿಕೊಂಡರು ಎಂದು ಕೋರ್ಟ್ ಈ ಸಂದರ್ಭದಲ್ಲಿ ತಿಳಿಸಿತು.
ಸಾಮಾಜಿಕ ಕಾರ್ಯಕರ್ತರಾದ ವಿ ಪಿಯೂಶ್ ಅವರು 2022ರ ಅಕ್ಟೋಬರ್ 22ರಂದು ಯೂಟ್ಯೂಬ್ ಚಾನಲ್‌ನಲ್ಲಿ ಮಾಡಿದ ಕ್ರೈಸ್ತ ಸಮುದಾಯದ ವಿರುದ್ಧ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಸೇಲಂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು.
ಸೇಲಂ ಕೋರ್ಟ್ ಸಮನ್ಸ್ ನೀಡಿದ ಹಿನ್ನೆಲೆ ಅಣ್ಣಾಮಲೈ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಕೀಲ ಸಿ ವಿ ಶ್ಯಾಮ್ ಸುಂದರ್ ಅಣ್ಣಾಮಲೈ ಪರವಾಗಿ ವಾದ ಮಂಡಿಸಿದ್ದರು.