ಜಾರಿ ನಿರ್ದೇಶನಾಲಯ ವಿರುದ್ಧ ಮದ್ರಾಸ್ ಹೈಕೋರ್ಟ್ ತರಾಟೆ

Date:

ಕಾನೂನು ಜಾರಿ ನಿರ್ದೇಶನಾಲಯ ತನ್ನ ಇಚ್ಛೆಯಂತೆ ಎಲೆಂದರಲ್ಲಿ ದಾಳಿ ಮಾಡುವ “ಅಡ್ಡಾಡುವ ಶಸ್ತ್ರ ಅಥವಾ ಡ್ರೋನ್ ಅಲ್ಲ” ಅಥವಾ ತನ್ನ ಗಮನಕ್ಕೆ ಬಂದ ಪ್ರತಿಯೊಂದು ವಿಚಾರಗಳ ತನಿಖೆ ನಡೆಸುವ “ಸೂಪರ್ ಪೊಲೀಸ್” ಕೂಡಾ ಅಲ್ಲ ಎಂದು ಮದ್ರಾಸ್ ಹೈಕೋರ್ಟ್ ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡಿದೆ. 901 ಕೋಟಿ ರೂಪಾಯಿ ನಿಶ್ಚಿತ ಠೇವಣಿ ಖಾತೆಯನ್ನು ಅಮಾನತು ಮಾಡಿ ನಿರ್ದೇಶನಾಲಯ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸುವ ವೇಳೆ ಕೋರ್ಟ್ ಈ ಅಭಿಪ್ರಾಯಕ್ಕೆ ಬಂದಿದೆ.

- Advertisement -

ನ್ಯಾಯಮೂರ್ತಿಗಳಾದ ಎಂ ಎಸ್ ರಮೇಶ್ ಮತ್ತು ವಿ.ಲಕ್ಷ್ಮೀನಾರಾಯಣನ್ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಪ್ರಕರಣದ ಬಗ್ಗೆ ತೀರ್ಪು ನೀಡಿ, ಹಣ ದುರುಪಯೋಗ ತಡೆ ಕಾಯ್ದೆ (ಪಿಎಂಎಲ್ಎ) ಅನ್ವಯ ಕಾನೂನು ಜಾರಿ ನಿರ್ದೇಶನಾಲಯದ ಅಧಿಕಾರವನ್ನು ದೃಢಪಟ್ಟ ಅಪರಾಧ ಎಂದು ಪರಿಗಣಿಸಲಾದ ಪ್ರಕರಣಗಳಲ್ಲಿ ಮತ್ತು ಅಪರಾಧ ಕೃತ್ಯದಿಂದ ಬಂದ ಹಣ ಕಂಡುಬಂದಾಗ ಮಾತ್ರ ಚಲಾಯಿಸಲು ಅವಕಾಶವಿದೆ ಎಂದು ಅಭಿಪ್ರಾಯಪಟ್ಟಿದೆ. ಪಿಎಂಎಲ್ಎ ಪ್ರಕಾರ, ದೃಢಪಟ್ಟ ಅಪರಾಧ ಇರುವುದು ಅಗತ್ಯ ಎಂದು ಸ್ಪಷ್ಟಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಇದನ್ನು ಓದಿದ್ದೀರಾ?: ಅನನ್ಯ ಪ್ರತಿಭೆಯ ಅಪ್ಪಟ ಕಲಾವಿದ ಬಾಲಕೃಷ್ಣ

ದೃಢಪಟ್ಟ ಅಪರಾಧ ಇಲ್ಲದ ಸಂದರ್ಭದಲ್ಲಿ, ಪಿಎಂಎಲ್ಎ ಅನ್ವಯವಾಗುವುದಿಲ್ಲ ಎಂದು ಹೇಳಿದೆ. ಕಾನೂನು ಜಾರಿ ನಿರ್ದೇಶನಾಲಯದ ಪಾತ್ರವನ್ನು ಒಂದು ಹಡಗು ಕಾರ್ಯ ನಿರ್ವಹಿಸಲು ನೌಕೆಯ ತಳದಲ್ಲಿರುವ ಸಿಡಿಗುಂಡಿಗೆ ನ್ಯಾಯಪೀಠ ಹೋಲಿಸಿದೆ. ನೌಕೆ ಒಂದು ದೃಢಪಟ್ಟ ಅಪರಾಧ ಹಾಗೂ ಅಪರಾಧ ಕೃತ್ಯದಿಂದ ಬಂದ ಹಣದಂತೆ ಎಂದು ವಿವರಿಸಿದೆ.

ಆರ್‌ಕೆಎಂ ಪವರ್ಜೆನ್ ಪ್ರೈವೆಟ್ ಲಿಮಿಟೆಡ್‌ನ ನಿಶ್ಚಿತ ಠೇವಣಿ ಖಾತೆಯನ್ನು ಅಮಾನತುಗೊಳಿಸಿ ಕಾನೂನು ಜಾರಿ ನಿರ್ದೇಶನಾಲಯ ಹೊರಡಿಸಿದ್ದ ಜನವರಿ 31ರ ಆದೇಶ ರದ್ದುಪಡಿಸುವಂತೆ ಕೋರಿ ಕಂಪನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ತೀರ್ಪು ನೀಡಿದೆ. ಹಿರಿಯ ವಕೀಲ ಬಿ.ಕುಮಾರ್ ಕಂಪನಿ ಪರ ವಾದ ಮಂಡಿಸಿದ್ದರು. ಈ ಹಿಂದೆ ನ್ಯಾಯಾಲಯ ನೀಡಿದ್ದ ಆದೇಶವನ್ನು ಕಡೆಗಣಿಸಿ ನಿರ್ದೇಶಾನಲಯ ಕ್ರಮ ಕೈಗೊಂಡಿದೆ ಎಂದು ಅರ್ಜಿದಾರರು ವಾದಿಸಿದ್ದರು. ಆರ್‌ಕೆಎಂಪಿಗೆ 2006ರಲ್ಲಿ ಫತೇಪುರ ಪೂರ್ವ ಕಲ್ಲಿದ್ದಲು ಗಣಿ ಹಂಚಿಕೆ ಮಾಡಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್‌ ಕುಮಾ‌ರ್ – ಮೇಧಾ ರೂಪಂ: ತಪ್ಪು ಕಾರಣಗಳಿಗಾಗಿ ಸುದ್ದಿಯ ಸುಳಿಯಲ್ಲಿ ಐಎಎಸ್ ಅಪ್ಪ-ಮಗಳ ಜೋಡಿ

ಉನ್ನತ ಸಾಂವಿಧಾನಿಕ ಹಾಗೂ ಆಡಳಿತಾತ್ಮಕ ಹುದ್ದೆಗಳನ್ನು ಅಲಂಕರಿಸಿರುವ ಐಎಎಸ್ ಅಧಿಕಾರಿಗಳಾದ ಅಪ್ಪ–ಮಗಳ...

IIT ಬಾಂಬೆ ವಿದ್ಯಾರ್ಥಿ ಸಾಹಿಲ್‌ ಆತ್ಮಹತ್ಯೆ ಪ್ರಕರಣ | ಪೋಷಕರ ಬೆಂಬಲಕ್ಕೆ ನಿಂತ ರಾಹುಲ್‌ ಗಾಂಧಿ

IIT ಬಾಂಬೆ ವಿದ್ಯಾರ್ಥಿ ಸಾಹಿಲ್‌ ವಕೋಡೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌...

EC ಒಳಜಗಳ | ಗ್ಯಾನೇಶ್‌ ಕುಮಾರ್‌ ಎಡವಟ್ಟುಗಳಿಗೆ ಆಕ್ಷೇಪಗಳ ಸರಮಾಲೆ

SIR ವಿಚಾರದಲ್ಲಿ ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯ ಬಹಿರಂಗಗೊಂಡ ಬೆನ್ನಲ್ಲೇ, ಮುಖ್ಯ ಚುನಾವಣಾ...