ಉತ್ತರ ಪ್ರದೇಶ | ಇಂದಿನಿಂದ ಮಹಾಕುಂಭ ಮೇಳ ಆರಂಭ

Date:

Advertisements

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಗಂಗಾನದಿ ತಟದಲ್ಲಿ ಜಗತ್ತಿನ ಅತ್ಯಂತ ದೊಡ್ಡ ಧಾರ್ಮಿಕ ಉತ್ಸವ ಮಹಾಕುಂಭ ಮೇಳವು ಇಂದಿನಿಂದ ಆರಂಭಗೊಂಡಿದ್ದು, ಸಾಧು–ಸಂತರು ಸೇರಿ ದೇಶದ ವಿವಿಧ ಭಾಗದ ಭಕ್ತರು ಪಾಲ್ಗೊಳ್ಳಲಿದ್ದಾರೆ.

ಫೆಬ್ರುವರಿ 26ರವರೆಗೆ 45 ದಿನ ನಡೆಯುವ ಮೇಳದಲ್ಲಿ ದೇಶ–ವಿದೇಶಗಳಿಂದ ಭಕ್ತರು ಭಾಗವಹಿಸಲಿದ್ದಾರೆ. ಪ್ರಯಾಗ್ರಾಜ್‌ನ ತ್ರಿವೇಣಿ ಸಂಗಮದ ಆಸುಪಾಸು 10 ಸಾವಿರ ಎಕರೆಯಷ್ಟು ವಿಸ್ತೀರ್ಣದಲ್ಲಿ ಸಿದ್ಧತೆ ಕೈಗೊಳ್ಳಲಾಗಿದ್ದು, 25 ವಲಯಗಳನ್ನಾಗಿ ವಿಂಗಡಿಸಲಾಗಿದೆ.

ಈ ಬಾರಿ ನಡೆಯುತ್ತಿರುವುದು 12 ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭ ಮೇಳ. ಹಿಂದಿನ ಬಾರಿ ಕುಂಭ ಮೇಳದಲ್ಲಿ 24 ಕೋಟಿ ಮಂದಿ ಭಾಗವಹಿಸಿದ್ದರು. ಈ ಬಾರಿ ಮಹಾಕುಂಭ ಮೇಳದಲ್ಲಿ 45 ಕೋಟಿ ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಬಗ್ಗೆ ಕೇಜ್ರಿವಾಲ್‌ಗೆ ಇರಲಿ ಎಚ್ಚರ

ಕಳೆದ ಬಾರಿ 7,900 ಎಕರೆ ಜಾಗದಲ್ಲಿ ಕುಂಭ ಮೇಳ ಆಯೋಜಿಸಲಾಗಿತ್ತು. ಈ ಬಾರಿ ಶೇ 25ರಷ್ಟು ಹೆಚ್ಚು ಸ್ಥಳವನ್ನು ಮಹಾಕುಂಭ ಮೇಳಕ್ಕಾಗಿ ಬಳಸಿಕೊಳ್ಳಲಾಗಿದೆ. ಕಳೆದ ಬಾರಿ 3,500 ಕೋಟಿ ರೂ. ವೆಚ್ಚದಲ್ಲಿ ಕುಂಭಮೇಳ ನಡೆದಿತ್ತು. ಈ ಬಾರಿ ಮಹಾಕುಂಭ ಮೇಳದ ವೆಚ್ಚ ಅದರ ಎರಡರಷ್ಟಿದೆ. 2019ರಲ್ಲಿ ನಡೆದಿದ್ದ ಕುಂಭ ಮೇಳದ ಘಾಟ್‌ಗಳ ಉದ್ದ 8 ಕಿ.ಮೀ .ಇತ್ತು. ಈ ಬಾರಿ ಅದನ್ನು 12 ಕಿ.ಮೀ .ಗೆ ಹೆಚ್ಚಿಸಲಾಗಿದೆ. ರೈಲು, ಹೆದ್ದಾರಿ ಪ್ರಯಾಣದ ವ್ಯವಸ್ಥೆಯಲ್ಲೂ ಇದೇ ರೀತಿಯ ಹೆಚ್ಚಳವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದು ಗಂಗಾ, ಯಮುನಾ ನದಿಗಳ ಸಂಗಮ ಸ್ಥಳ. ಗುಪ್ತಗಾಮಿನಿಯಾದ ಸರಸ್ವತಿ ನದಿಯೂ ಪ್ರಯಾಗ್‌ರಾಜ್‌ನಲ್ಲಿ ಸಂಗಮಿಸುತ್ತಾಳೆ ಎಂಬ ನಂಬಿಕೆ ಇದೆ. ಪುಷ್ಯ ಪೂರ್ಣಿಮೆಯ ಪವಿತ್ರ ದಿನದಂದು ಶಾಹೀ (ಪವಿತ್ರ) ಸ್ನಾನ ಮಾಡುವುದು ಭಕ್ತಾದಿಗಳ ಬಯಕೆಯಾಗಿದೆ.

https://twitter.com/ANI/status/1878641127890600285?ref_src=twsrc%5Etfw%7Ctwcamp%5Etweetembed%7Ctwterm%5E1878630905247584272%7Ctwgr%5E936ee728c60f7cb52b2eb978370e959439d22c24%7Ctwcon%5Es1_&ref_url=https%3A%2F%2Fwww.prajavani.net%2Fnews%2Findia-news%2Fmahakumbh-2025-worlds-biggest-fair-set-to-begin-from-today-with-anticipated-footfall-of-45-cr-pilgrims-3122646
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

Download Eedina App Android / iOS

X