ಮಹಾ ಕುಂಭಮೇಳವನ್ನು ‘ಮೃತ್ಯು ಕುಂಭ’ ಎಂದು ಕರೆದ ಮಮತಾ ಬ್ಯಾನರ್ಜಿ

Date:

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಇತ್ತೀಚೆಗೆ ಉಂಟಾದ ಕಾಲ್ತುಳಿತದಲ್ಲಿ ಸುಮಾರು 30 ಮಂದಿ ಸಾವನ್ನಪ್ಪಿದ್ದಾರೆ ಎಂದು ಆಡಳಿತವು ಹೇಳಿದೆ. ನಿಜವಾಗಿ ಇನ್ನೂ ಅಧಿಕ ಮಂದಿ ಮೃತಪಟ್ಟಿದ್ದಾರೆ, ಆದರೆ ನೈಜ ಮೃತರ ಸಂಖ್ಯೆಯನ್ನು ಮರೆಮಾಚಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ. ಈ ಆರೋಪಗಳ ನಡುವೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾ ಕುಂಭಮೇಳವನ್ನು ‘ಮೃತ್ಯು ಕುಂಭ’ ಎಂದು ಕರೆದಿದ್ದಾರೆ.

- Advertisement -

ದೇಶದಲ್ಲಿ ಇತ್ತೀಚೆಗೆ ಕಾಲ್ತುಳಿತ ಪ್ರಕರಣಗಳು ಅಧಿಕವಾಗಿದೆ. ಕಳೆದ ತಿಂಗಳು ಮಹಾ ಕುಂಭಮೇಳದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಸುಮಾರು 30 ಮಂದಿ ಸಾವನ್ನಪ್ಪಿ, 60 ಭಕ್ತರು ಗಾಯಗೊಂಡಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಇನ್ನು ಇತ್ತೀಚೆಗೆ ದೆಹಲಿ ರೈಲ್ವೇ ನಿಲ್ದಾಣದಲ್ಲಿ ಜನದಟ್ಟಣೆ ಉಂಟಾಗಿ 18 ಮಂದಿ ಮೃತಪಟ್ಟಿದ್ದಾರೆ. ಇವೆಲ್ಲವುದರ ನಡುವೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಗಂಗಾ ನದಿ ನೀರು ಸ್ನಾನಕ್ಕೆ ಯೋಗ್ಯವಾಗಿಲ್ಲ, ಬ್ಯಾಕ್ಟೀರಿಯಾಮಯ: ಮಾಲಿನ್ಯ ನಿಯಂತ್ರಣ ಮಂಡಳಿ

“ಮಹಾ ಕುಂಭಮೇಳವು ‘ಮೃತ್ಯು ಕುಂಭ’ವಾಗಿ ಬದಲಾಗಿದೆ. ಅವರು (ಬಿಜೆಪಿ ಸರ್ಕಾರ) ಮೃತರ ಸಂಖ್ಯೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನೂರಾರು ಮೃತದೇಹಗಳನ್ನು ಅಡಗಿಸಿಟ್ಟಿದ್ದಾರೆ” ಎಂದು ಪಶ್ಚಿಮ ಬಂಗಾಳ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಬ್ಯಾನರ್ಜಿ ಆರೋಪಿಸಿದ್ದಾರೆ.

“ನಾನು ಮಹಾ ಕುಂಭಮೇಳಕ್ಕೆ, ಗಂಗಾ ಮಾತೆಗೆ ಗೌರವ ನೀಡುತ್ತೇನೆ. ಆದರೆ ಕುಂಭಮೇಳ ಆಯೋಜಿಸುವಾಗ ಸರಿಯಾದ ಯೋಜನೆ ರೂಪಿಸಲಾಗಿಲ್ಲ. ಈವರೆಗೆ ಎಷ್ಟು ಜನರನ್ನು ಪತ್ತೆಹಚ್ಚಲಾಗಿದೆ? ಶ್ರೀಮಂತರಿಗೆ ವಿಐಪಿ ಸ್ಥಾನ ನೀಡಲಾಗುತ್ತದೆ. ಒಂದು ಲಕ್ಷ ರೂಪಾಯಿವರೆಗೆ ಪಾವತಿ ಮಾಡಿ ಟೆಂಟ್ (ವಸತಿ) ಪಡೆಯುವ ವ್ಯವಸ್ಥೆಯಿದೆ. ಆದರೆ ಬಡವರಿಗೆ ಯಾವುದೇ ವ್ಯವಸ್ಥೆಯಿಲ್ಲ. ಮೇಳಗಳಲ್ಲಿ ಕಾಲ್ತುಳಿತ ನಡೆಯುವುದು ಸಾಮಾನ್ಯ. ಆದರೆ ಅದನ್ನು ತಡೆಯಲು ವ್ಯವಸ್ಥೆಯನ್ನು ಮೊದಲೇ ಮಾಡಿಕೊಳ್ಳಬೇಕು. ನೀವು ಯಾವ ವ್ಯವಸ್ಥೆಯನ್ನು ಮಾಡಿಕೊಂಡಿದ್ದಿರಿ” ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

“ಮಹಾ ಕುಂಭಮೇಳದಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ. ಆದರೆ ಉತ್ತರ ಪ್ರದೇಶ ಸರ್ಕಾರ ಎಷ್ಟು ಪರಿಹಾರವನ್ನು ನೀಡಿದೆ? ಪಶ್ಚಿಮ ಬಂಗಾಳ ಮೂಲದವರೂ ಕೂಡಾ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದು, ಅವರ ಮರಣೋತ್ತರ ಪರೀಕ್ಷೆಯನ್ನೂ ಕೂಡಾ ಮಾಡಲಾಗಿಲ್ಲ. ನಮ್ಮ ಸರ್ಕಾರವೇ ಮರಣೋತ್ತರ ಪರೀಕ್ಷೆಯನ್ನು ಮಾಡಿಸಿದೆ. ನಮಗೆ ಸಾವಿಗೆ ನಿಖರವಾದ ಕಾರಣ ತಿಳಿದಿಲ್ಲದಿದ್ದರೆ, ಸರ್ಕಾರ ಪರಿಹಾರ ನೀಡುವುದು ಹೇಗೆ? ಉತ್ತರ ಪ್ರದೇಶ ಸರ್ಕಾರ ಸಾವಿಗೆ ಕಾರಣವನ್ನೂ ಉಲ್ಲೇಖಿಸಿಲ್ಲ” ಎಂದು ಆರೋಪಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...