ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ನ ಇಬ್ಬರು ಪ್ರಮುಖ ಮಾಲೀಕರಲ್ಲಿ ಒಬ್ಬನಾದ ರವಿ ಉಪ್ಪಲ್ ಎಂಬಾತನನ್ನು ಇಡಿ ಆದೇಶದ ಮೇರೆಗೆ ಇಂಟರ್‌ಪೋಲ್ ಹೊರಡಿಸಿದ ರೆಡ್ ನೋಟಿಸ್ ಆಧಾರದ ಮೇಲೆ ಸ್ಥಳೀಯ ಪೊಲೀಸರು ದುಬೈನಲ್ಲಿ ಬಂಧಿಸಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.
ಛತ್ತೀಸ್‌ಗಢ ಪೊಲೀಸರು ಮತ್ತು ಮುಂಬೈ ಪೊಲೀಸರನ್ನು ಹೊರತುಪಡಿಸಿ ಅಕ್ರಮ ಬೆಟ್ಟಿಂಗ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಉಪ್ಪಲ್‌ನನ್ನು ಇಡಿ ತನಿಖೆ ನಡೆಸುತ್ತಿದೆ.
ಇಡಿ ತನಿಖಾ ಸಂಸ್ಥೆಯು ಉಪ್ಪಲ್ ಮತ್ತು ಇಂಟರ್‌ನೆಟ್ ಆಧಾರಿತ ಪ್ಲಾಟ್ಫಾರ್ಮ್‌ನ ಇನ್ನೊಬ್ಬ ಪ್ರವರ್ತಕ ಸೌರಭ್ ಚಂದ್ರಕರ್ ವಿರುದ್ಧ ಛತ್ತೀಸ್‌ಗಢ ರಾಯ್‌ಪುರದ ವಿಶೇಷ ಅಕ್ರಮ ಹಣ ವರ್ಗಾವಣೆ ಹಣ ತಡೆ ಕಾಯ್ದೆ (ಪಿಎಂಎಲ್ಎ) ನ್ಯಾಯಾಲಯದ ಮುಂದೆ ಅಕ್ಟೋಬರ್‌ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಸಿತ್ತು. ಇಡಿ ಮನವಿಯ ಆಧಾರದ ಮೇಲೆ ಇಂಟರ್‌ಪೋಲ್ ರೆಡ್ ನೋಟಿಸ್ ಜಾರಿ ಮಾಡಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಯೋಧ್ಯೆ – ರಿಯಲ್ ಎಸ್ಟೇಟ್ ದಂಧೆಯ ಆಪಾದನೆಗಳ ಮೈಲಿಗೆ!
ರವಿ ಉಪ್ಪಲ್ ಭಾರತೀಯ ಪೌರತ್ವವನ್ನು ತ್ಯಜಿಸದ ಕಾರಣ ಪೆಸಿಫಿಕ್ ಮಹಾ ಸಾಗರದ ದ್ವೀಪ ರಾಷ್ಟ್ರವಾದ ವನವಾಟು ಪಾಸ್‌ಪೋರ್ಟ್ ತೆಗೆದುಕೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ಚಾರ್ಜ್ ಶೀಟ್‌ನಲ್ಲಿ ನ್ಯಾಯಾಲಯಕ್ಕೆ ತಿಳಿಸಿತ್ತು.
ಚಂದ್ರಭೂಷಣ ವರ್ಮಾ ಎಂಬಾತನ ಮೂಲಕ ಉಪ್ಪಲ್, ಛತ್ತೀಸ್‌ಗಢದ ಅಧಿಕಾರಿಗಳು ಮತ್ತು ರಾಜಕಾರಣಿಗಳಿಗೆ ಅಕ್ರಮ ಹಣ ವರ್ಗಾವಣೆ ದಂಧೆಯನ್ನು ನೋಡಿಕೊಳ್ಳುತ್ತಿದ್ದ. ಅಲ್ಲದೆ ಈ ಪ್ರಕರಣದಲ್ಲಿ ಯೋಜಿತ ಅಪರಾಧದ ಆದಾಯವು ಸುಮಾರು 6,000 ಕೋಟಿ ರೂ. ನಷ್ಟಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.