ಮಹಾದೇವ್ ಬೆಟ್ಟಿಂಗ್ ಆ್ಯಪ್‌ನ ಮಾಲೀಕ ರವಿ ಉಪ್ಪಲ್ ದುಬೈನಲ್ಲಿ ಬಂಧನ

Date:

ಮಹಾದೇವ್ ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ನ ಇಬ್ಬರು ಪ್ರಮುಖ ಮಾಲೀಕರಲ್ಲಿ ಒಬ್ಬನಾದ ರವಿ ಉಪ್ಪಲ್ ಎಂಬಾತನನ್ನು ಇಡಿ ಆದೇಶದ ಮೇರೆಗೆ ಇಂಟರ್‌ಪೋಲ್ ಹೊರಡಿಸಿದ ರೆಡ್‌ ನೋಟಿಸ್‌ ಆಧಾರದ ಮೇಲೆ ಸ್ಥಳೀಯ ಪೊಲೀಸರು ದುಬೈನಲ್ಲಿ ಬಂಧಿಸಿದ್ದಾರೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.

- Advertisement -

ಛತ್ತೀಸ್‌ಗಢ ಪೊಲೀಸರು ಮತ್ತು ಮುಂಬೈ ಪೊಲೀಸರನ್ನು ಹೊರತುಪಡಿಸಿ ಅಕ್ರಮ ಬೆಟ್ಟಿಂಗ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಉಪ್ಪಲ್‌ನನ್ನು ಇಡಿ ತನಿಖೆ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇಡಿ ತನಿಖಾ ಸಂಸ್ಥೆಯು ಉಪ್ಪಲ್ ಮತ್ತು ಇಂಟರ್‌ನೆಟ್ ಆಧಾರಿತ ಪ್ಲಾಟ್ಫಾರ್ಮ್‌ನ ಇನ್ನೊಬ್ಬ ಪ್ರವರ್ತಕ ಸೌರಭ್ ಚಂದ್ರಕರ್ ವಿರುದ್ಧ ಛತ್ತೀಸ್‌ಗಢ ರಾಯ್‌ಪುರದ ವಿಶೇಷ ಅಕ್ರಮ ಹಣ ವರ್ಗಾವಣೆ ಹಣ ತಡೆ ಕಾಯ್ದೆ (ಪಿಎಂಎಲ್ಎ) ನ್ಯಾಯಾಲಯದ ಮುಂದೆ ಅಕ್ಟೋಬರ್‌ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಚಾರ್ಜ್ ಶೀಟ್ ಸಲ್ಲಿಸಿತ್ತು. ಇಡಿ ಮನವಿಯ ಆಧಾರದ ಮೇಲೆ ಇಂಟರ್‌ಪೋಲ್ ರೆಡ್‌ ನೋಟಿಸ್ ಜಾರಿ ಮಾಡಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಯೋಧ್ಯೆ – ರಿಯಲ್ ಎಸ್ಟೇಟ್ ದಂಧೆಯ ಆಪಾದನೆಗಳ ಮೈಲಿಗೆ!

ರವಿ ಉಪ್ಪಲ್ ಭಾರತೀಯ ಪೌರತ್ವವನ್ನು ತ್ಯಜಿಸದ ಕಾರಣ ಪೆಸಿಫಿಕ್ ಮಹಾ ಸಾಗರದ ದ್ವೀಪ ರಾಷ್ಟ್ರವಾದ ವನವಾಟು ಪಾಸ್‌ಪೋರ್ಟ್ ತೆಗೆದುಕೊಂಡಿದ್ದಾರೆ ಎಂದು ತನಿಖಾ ಸಂಸ್ಥೆ ಚಾರ್ಜ್ ಶೀಟ್‌ನಲ್ಲಿ ನ್ಯಾಯಾಲಯಕ್ಕೆ ತಿಳಿಸಿತ್ತು.

ಚಂದ್ರಭೂಷಣ ವರ್ಮಾ ಎಂಬಾತನ ಮೂಲಕ ಉಪ್ಪಲ್, ಛತ್ತೀಸ್‌ಗಢದ ಅಧಿಕಾರಿಗಳು ಮತ್ತು ರಾಜಕಾರಣಿಗಳಿಗೆ ಅಕ್ರಮ ಹಣ ವರ್ಗಾವಣೆ ದಂಧೆಯನ್ನು ನೋಡಿಕೊಳ್ಳುತ್ತಿದ್ದ. ಅಲ್ಲದೆ ಈ ಪ್ರಕರಣದಲ್ಲಿ ಯೋಜಿತ ಅಪರಾಧದ ಆದಾಯವು ಸುಮಾರು 6,000 ಕೋಟಿ ರೂ. ನಷ್ಟಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನಿ ಜಾಲದ ಹನಿಟ್ರ್ಯಾಪ್‌ಗೆ ಬಿದ್ದ ಭಾರತೀಯ ನೌಕಾಪಡೆ ಸೈನಿಕನಿಂದ ಗೌಪ್ಯ ಮಾಹಿತಿ ಸೋರಿಕೆ; ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆಯ ಗುಪ್ತ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಭಾರತೀಯ ನೌಕಾಪಡೆಯ...

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...