ಮಹಾರಾಷ್ಟ್ರ | ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಉಪ ಮುಖ್ಯಮಂತ್ರಿ ಹುದ್ದೆ

Date:

ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಲಾಗಿದೆ. ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಎನ್‌ಸಿಪಿ (ಅಜಿತ್ ಬಣ) ಹೇಳಿರುವುದಾಗಿ ವರದಿಯಾಗಿದೆ.

- Advertisement -

ಪ್ರಸ್ತುತ, ಸುನೇತ್ರಾ ಅವರು ರಾಜ್ಯಸಭಾ ಸದಸ್ಯೆಯಾಗಿದ್ದಾರೆ. ಅವರನ್ನು ಉಪ ಮುಖ್ಯಮಂತ್ರಿ ಹುದ್ದೆಗೆ ಪಕ್ಷದ ನಾಯಕರು ಪ್ರಸ್ತಾಪಿಸಿದ್ದಾರೆ. ಸುನೇತ್ರಾ ಕೂಡ ಉಪ ಮುಖ್ಯಮಂತ್ರಿ ಹುದ್ದೆ ಸ್ವೀಕರಿಸಲು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸುನೇತ್ರಾ ಅವರಿಗೆ ಉಪ ಮುಖ್ಯಮಂತ್ರಿ ಹುದ್ದೆಯ ಜೊತೆಗೆ, ಅಜಿತ್ ಪವಾರ್ ನಿರ್ವಹಿಸುತ್ತಿದ್ದ ಅಬಕಾರಿ ಮತ್ತು ಕ್ರೀಡಾ ಖಾತೆಗಳನ್ನೂ ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗಿದೆ.

ಮಹಾಯುತಿಯಲ್ಲಿ ಉಪ ಮುಖ್ಯಮಂತ್ರಿ ಹುದ್ದೆಯನ್ನು ಯಾರಿಗೆ ನೀಡಬೇಕು ಎಂಬುದನ್ನು ಎನ್‌ಸಿಪಿ ತೀರ್ಮಾನಿಸಬೇಕು. ಎನ್‌ಸಿಪಿ ನಿರ್ಧಾರಕ್ಕೆ ನಮ್ಮ ಯಾವುದೇ ತಕರಾರು ಇರುವುದಿಲ್ಲ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದರು. ಇದೀಗ, ಸುನೇತ್ರಾ ಅವರ ನೇಮಕಕ್ಕೆ ದೇವೇಂದ್ರ ಫಡ್ನವೀಸ್‌ ಕೂಡ ಒಪ್ಪಿಕೊಂಡಿದ್ದಾರೆ ಎಂದು ಎನ್‌ಸಿಪಿ ನಾಯಕ ಛಗನ್ ಭುಜಬಲ್ ಹೇಳಿದ್ದಾರೆ.

ಅಜಿತ್ ಪವಾರ್ ಅವರು ಹಣಕಾಸು ಖಾತೆಯನ್ನೂ ಕೂಡ ನಿರ್ವಹಿಸುತ್ತಿದ್ದರು. ಆದರೆ, ಮಾರ್ಚ್‌ನಲ್ಲಿ ಬಜೆಟ್‌ ಅಧಿವೇಶನ ಇರುವುದರಿಂದ, ಅಲ್ಲಿಯವರೆಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರೇ ಆ ಖಾತೆಯನ್ನು ನಿರ್ವಹಿಸುತ್ತಾರೆ. ಅಧಿವೇಶನದ ಬಳಿಕ ಆ ಖಾತೆಯನ್ನು ಎನ್‌ಸಿಪಿಗೆ ನೀಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...