ಮಹಾರಾಷ್ಟ್ರ ಪಾಲಿಕೆ ಚುನಾವಣೆ: ಬಿಜೆಪಿಯ 44 ಮಂದಿ ಸೇರಿ 68 ಮಹಾಯುತಿ ಅಭ್ಯರ್ಥಿಗಳು ಅವಿರೋಧ ಆಯ್ಕೆ

Date:

ಸುಧೀರ್ಘ ಕಾಲದಿಂದ ಬಾಕಿ ಇರುವ ಮಹಾರಾಷ್ಟ್ರ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಇನ್ನೂ ಒಂದು ಮತ ಕೂಡಾ ಚಲಾವಣೆಯಾಗುವ ಮುನ್ನವೇ ಆಡಳಿತಾರೂಢ ಬಿಜೆಪಿ ಮೈತ್ರಿಕೂಟ 68 ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಬಿಜೆಪಿ-ಶಿವಸೇನೆ ಒಟ್ಟು 66 ವಾರ್ಡ್‌ಗಳಲ್ಲಿ ಅವಿರೋಧ ಜಯ ಸಾಧಿಸಿದ್ದರೆ, ಅಜಿತ್ ಪವಾರ್ ನೇತೃತ್ವದ ಎನ್‌ಸಿ ಪಿಯ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಶುಕ್ರವಾರ ನಾಮಪತ್ರ ವಾಪಾಸು ಪಡೆಯಲು ಕೊನೆಯ ದಿನವಾಗಿತ್ತು. ಹಲವು ವಿರೋಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ವಾಪಾಸು ಪಡೆದಿದ್ದರಿಂದ 68 ಮುಖಂಡರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂಬೈ ಮೆಟ್ರೋಪಾಲಿಟನ್ ಪ್ರದೇಶ (ಎಂಎಂಆರ್)ದ ಕಲ್ಯಾಣ್ ದೊಂಬಿವಿಲಿ ಮಹಾನಗರ ಪಾಲಿಕೆಯಲ್ಲಿ ಗರಿಷ್ಠ ಅಂದರೆ 21 ಮಹಾಯುತಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರಲ್ಲಿ 15 ಮಂದಿ ಬಿಜೆಪಿ ಮುಖಂಡರು ಹಾಗೂ ಆರು ಮಂದಿ ಶಿವಸೇನೆಗೆ ಸೇರಿದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಾದಕ ವಸ್ತು ಉತ್ಪಾದನೆಗಿಳಿದ ಹೊರರಾಜ್ಯ ಮಾಫಿಯಾ ಗ್ಯಾಂಗ್‌; ಕರ್ನಾಟಕದ ಕಳಂಕ!

ಉಭಯ ಪಕ್ಷಗಳ ಭದ್ರಕೋಟೆ ಎನಿಸಿದ ಉತ್ತರ ಮಹಾರಾಷ್ಟ್ರದ ಜಲಗಾಂವ್‌ನಲ್ಲಿ ತಲಾ ಆರು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದು, 12 ಸ್ಥಾನಗಳು ಮಹಾಯುತಿ ಕೂಟಕ್ಕೆ ಲಭ್ಯವಾಗಿವೆ. ಇದೇ ಪ್ರವೃತ್ತಿ ಎಂಎಂಆರ್ ನ ಪನ್ವೇಲ್‌ನಲ್ಲೂ ಮುಂದುವರಿದಿದ್ದು, ಏಳು ಮಂದಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶರದ್ ಪವಾರ್ ಅವರ ಎನ್‌ಸಿಪಿ ಭದ್ರಕೋಟೆ ಎನಿಸಿದ ಭಿವಂಡಿ ಪಾಲಿಕೆಯಲ್ಲೂ ಆರು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಏಕನಾಥ್ ಶಿಂಧೆ ಅವರ ಸ್ವಕ್ಷೇತ್ರ ಥಾಣೆಯಲ್ಲಿ ಮೇಲ್ನೋಟಕ್ಕೆ ಬಿಜೆಪಿ ಹಾಗೂ ಶಿವಸೇನೆ ನಡುವೆ ಜಗಳ ಕಂಡುಬಂದಿದ್ದರೂ, ಶಿವಸೇನೆಯ ಆರು ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿರುವ ರಾಜ್ ಠಾಕ್ರೆ ನೇತೃತ್ವದ ಎಂಎನ್ಎಸ್, ಜಿಲ್ಲೆಯಲ್ಲಿ ಪ್ರತಿಭಟನೆಯನ್ನೂ ನಡೆಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...