ಮಹಾರಾಷ್ಟ್ರ ಚುನಾವಣೆ | ಮಹಾಯುತಿಯಲ್ಲಿ ಮಹಾ ಬಿರುಕು? ಯೋಗಿ ವಿರುದ್ಧ ಅಜಿತ್ ಕಿಡಿ

Date:

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್ 20ರಂದು ಮತದಾನ ನಡೆಯಲಿದೆ. ಎಲ್ಲ ಪಕ್ಷಗಳು, ಮೈತ್ರಿಕೂಟಗಳು ಭಾರೀ ಪ್ರಚಾರ ನಡೆಸುತ್ತಿವೆ. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಪರವಾಗಿ ಪ್ರಚಾರಕ್ಕೆ ಬಂದಿದ್ದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ‘ಬಟೇಂಗೆ ತೊ ಕಟೆಂಗೆ’ (ವಿಭಜಿಸಿದರೆ ಒಡೆಯುತ್ತದೆ) ಎಂಬ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ಮಹಾಯುತಿಯ ಭಾಗವೇ ಆಗಿರುವ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಇಂತಹ ಹೇಳಿಕೆ ನೀಡಲು ಇದು ಉತ್ತರ ಪ್ರವೇಶವಲ್ಲ ಎಂದು ಕಿರಿಕಾರಿದ್ದಾರೆ.

- Advertisement -

ಮಹಾಯುತಿ ಮೈತ್ರಿಕೂಟದಲ್ಲಿ ಅಜಿತ್ ಪವಾರ್ ಅವರ ಎನ್‌ಸಿಪಿಯನ್ನು ಒಳಗೊಂಡಿರುವುದು ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಒಂದು ವರ್ಗಕ್ಕೆ ಒಪ್ಪಿಗೆ ಇಲ್ಲ. 2022ರಲ್ಲಿ ಮಹಾಯುತಿ ಸರ್ಕಾರ ರಚನೆಯಾದಾಗಿನಿಂದಲೂ ಆ ವರ್ಗ ಅಜಿತ್ ವಿರುದ್ಧ ಕಿಡಿಕಾರುತ್ತಲೇ ಇದೆ. ಇದೀಗ, ಚುನಾವಣಾ ಸಮಯದಲ್ಲಿಯೂ ಅಜಿತ್ ಅವರನ್ನು ಮೈತ್ರಿಯಿಂದ ಹೊರಹಾಕಬೇಕೆಂದು ಬಿಜೆಪಿ-ಆರ್‌ಎಸ್‌ಎಸ್‌ ಒಂದು ವಿಭಾಗ ಹೇಳುತ್ತಿತ್ತು. ಈಗ, ಅಜಿತ್‌ ಅವರೂ ಕೂಡ ಬಿಜೆಪಿ ವಿರುದ್ಧ ಮಾತನಾಡಲು ಆರಂಭಿಸಿದ್ದಾರೆ. ಯೋಗಿ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಯೋಗಿ ಆದಿತ್ಯನಾಥ್ ಅವರ ಹೇಳಿಕೆಗೆ ಬಹಿರಂಗ ಪ್ರಚಾರ ಸಭೆ ಮತ್ತು ಮಾಧ್ಯಮ ಸಂವಾದಗಳಲ್ಲಿಯೂ ಅಸಮಾಧಾನ ವ್ಯಕ್ತಪಡಿಸಿದ್ದೇನೆ. ಮಹಾರಾಷ್ಟ್ರವು ಪ್ರಧಾನಿ ಮೋದಿ ಅವರ ‘ಸಬ್ ಕಾ ಸಾಥ್, ಸಾಬ್ ಕಾ ವಿಕಾಸ್’ ಮಂತ್ರವನ್ನು ಅನುಸರಿಸುತ್ತದೆ. ಯೋಗಿ ಆದಿತ್ಯನಾಥ್ ನೀಡಿರುವ ಘೋಷಣೆ ಸರಿಯಲ್ಲ. ಅವರ ಘೋಷಣೆ ಮಹಾರಾಷ್ಟ್ರಕ್ಕೆ ಅನ್ವಯಿಸುವುದಿಲ್ಲ. ಇದು ಉತ್ತರ ಪ್ರದೇಶವೂ ಅಲ್ಲ. ಇಲ್ಲಿಗೆ ಅವರ ಘೋಷಣೆಗಳು ಸಲ್ಲುವುದಿಲ್ಲ” ಎಂದು ಅಜಿತ್ ಪವಾರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...