ಅದಾನಿ ಗ್ರೂಪ್‌ ಯೋಜನೆಗಳಿಗೆ 83,700 ಚದರ ಅಡಿ ಅರಣ್ಯ ಭೂಮಿ ಹಸ್ತಾಂತರ: ಮಹಾ ಸರ್ಕಾರ ಅನುಮೋದನೆ

Date:

ಅದಾನಿ ಸಮೂಹಕ್ಕೆ ಸೇರಿದ ಕಂಪನಿಗಳ ಎರಡು ವಿಭಿನ್ನ ಯೋಜನೆಗಳಿಗಾಗಿ ಸುಮಾರು 83,700 ಚದರ ಅಡಿ ಅರಣ್ಯ ಭೂಮಿಯನ್ನು ಹಸ್ತಾಂತರಿಸಲು ಮಹಾರಾಷ್ಟ್ರ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ. ರಾಯಗಢ ಮತ್ತು ಅಮರಾವತಿ ಜಿಲ್ಲೆಗಳಲ್ಲಿರುವ ಮೀಸಲು ಅರಣ್ಯ ಮತ್ತು ಪ್ರಮುಖ ಕಂಡ್ಲಾ ಅರಣ್ಯ ಪ್ರದೇಶವನ್ನು ‘ಅದಾನಿ ಸಿಮೆಂಟೇಶನ್ ಲಿಮಿಟೆಡ್’ ಮತ್ತು ‘ಅದಾನಿ ಟೋಟಲ್ ಗ್ಯಾಸ್ ಲಿಮಿಟೆಡ್’ ಸಂಸ್ಥೆಗಳಿಗೆ ಒದಗಿಸಲು ಮಹಾರಾಷ್ಟ್ರ ಕಂದಾಯ ಮತ್ತು ಅರಣ್ಯ ಇಲಾಖೆ ಒಪ್ಪಿಕೊಂಡಿವೆ.

- Advertisement -

ರಾಯಗಢ ಜಿಲ್ಲೆಯ ಅಲಿಬಾಗ್ ತಾಲೂಕಿನ ಶಹಾಪುರ ಮತ್ತು ಶಹಾಬಾಜ್ ಗ್ರಾಮಗಳಲ್ಲಿರುವ ಸುಮಾರು 69,933 ಚದರ ಅಡಿ ಭೂಮಿಯನ್ನು ಅದಾನಿ ಗ್ರೂಪ್‌ನ ‘ರಾಯಗಢ ಸಿಮೆಂಟ್ ಬಲ್ಕ್ ಟರ್ಮಿನಲ್’ ಯೋಜನೆಗಾಗಿ ಹಡಗು ನಿಲ್ಲುವ ತಾಣ, ಕನ್ವೇಯರ್ ಕಾಲಿಡಾರ್ ಹಾಗೂ ಜೋಡು ರಸ್ತೆ ನಿರ್ಮಾಣಕ್ಕಾಗಿ ನೀಡಲಾಗಿದೆ. ಈ ಭೂಮಿಯಲ್ಲಿ ಪರಿಸರ ಸೂಕ್ಷ್ಮ ಪ್ರದೇಶಗಳಾದ ಮೀಸಲು ಅರಣ್ಯ ಮತ್ತು ಮ್ಯಾಂಗ್ರೋವ್ ಕಾಡುಗಳು ಸೇರಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಈ ಭೂಮಿ ಬಳಕೆಗೆ ಸರ್ಕಾರವು ಅದಾನಿ ಗ್ರೂಪ್‌ಗೆ ಷರತ್ತನ್ನು ವಿಧಿಸಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಈ ಪ್ರದೇಶಕ್ಕೆ ಪರಿಶೀಲನೆಗೆ ಬಂದಾಗ ಕಂಪನಿಯು ಯಾವುದೇ ಅಡ್ಡಿಪಡಿಸಬಾರದು; ಒಂದು ವೇಳೆ ಅಧಿಕಾರಿಗಳ ಪ್ರವೇಶವನ್ನು ತಡೆದರೆ ನೀಡಲಾದ ಅನುಮತಿಯನ್ನು ತಕ್ಷಣವೇ ಹಿಂಪಡೆಯಲಾಗುವುದು ಎಂದು ಎಚ್ಚರಿಸಿರುವಾಗಿ ವರದಿಯಾಗಿದೆ.

ಇನ್ನೊಂದೆಡೆ, ಅಮರಾವತಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೈಸರ್ಗಿಕ ಅನಿಲ ವಿತರಣಾ ಜಾಲವನ್ನು ಸ್ಥಾಪಿಸಲು ಅದಾನಿ ಟೋಟಲ್ ಗ್ಯಾಸ್ ಲಿಮಿಟೆಡ್ ಸಂಸ್ಥೆಗೆ ಸುಮಾರು 13,788 ಚದರ ಅಡಿ ಮೀಸಲು ಅರಣ್ಯ ಭೂಮಿಯನ್ನು ಹಸ್ತಾಂತರಿಸಲಾಗಿದೆ. ಕಂಪನಿಯು ಭೂಗತ ಸ್ಟೀಲ್ ಪೈಪ್‌ಲೈನ್ ಅಳವಡಿಸಲು ಈ ಭೂಮಿಯನ್ನು ಬಳಸಿಕೊಳ್ಳಲಿದೆ.

ಈ ಎರಡೂ ಯೋಜನೆಗಳಿಗೆ ಅರಣ್ಯ ಭೂಮಿಯನ್ನು ಸರ್ಕಾರ ನೀಡಿದೆ. ಆದರೆ, ಅರಣ್ಯ ನಾಶಕ್ಕೆ ಪ್ರತಿಯಾಗಿ ಕೈಗೊಳ್ಳಬೇಕಾದ ಪರ್ಯಾಯ ಮರ ನೆಡುವಿಕೆಯಂತಹ ‘ಪರಿಹಾರಾತ್ಮಕ ಅರಣ್ಯೀಕರಣ’ ಕ್ರಮಗಳ ಕುರಿತು ಸರ್ಕಾರಿ ಆದೇಶದಲ್ಲಿ ಯಾವುದೇ ವಿವರಗಳನ್ನು ನೀಡಲಾಗಿಲ್ಲ ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...