ಮರಾಠ ಸಮುದಾಯದ ಮೀಸಲಾತಿಗೆ ಸಿಎಂ ಏಕನಾಥ್ ಶಿಂಧೆ ಸಮ್ಮತಿ

Date:

Advertisements

ತೀವ್ರಗೊಳ್ಳುತ್ತಿರುವ ಮರಾಠ ಮೀಸಲಾತಿ ಆಂದೋಲನದ ಕುರಿತು ಚರ್ಚಿಸಲು ಕರೆದಿದ್ದ ಮಹಾರಾಷ್ಟ್ರ ಸರ್ಕಾರದ ಸರ್ವಪಕ್ಷ ಸಭೆ ಮುಕ್ತಾಯಗೊಂಡಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರಾಜ್ಯ ಸರ್ಕಾರ ಮೀಸಲಾತಿಯ ಪರವಾಗಿದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ಮುಖಂಡರು, ಹೋರಾಟಗಾರ ಮನೋಜ್ ಜಾರಂಗೆ ಅವರ ಅನಿರ್ದಿಷ್ಟಾವಧಿ ಉಪವಾಸ ಹಿಂಪಡೆಯುವಂತೆ ನಿರ್ಣಯ ಅಂಗೀಕರಿಸಿದರು.

ಮರಾಠಾ ಸಮುದಾಯಕ್ಕೆ ಮೀಸಲಾತಿ ಖಾತ್ರಿಪಡಿಸುವಲ್ಲಿ ಕಾರ್ಯಕರ್ತ ಜಾರಂಗೆ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಶಿಂಧೆ ಹೇಳಿದರು.

ಮರಾಠಿಗರು ಸಂಯಮ ಪಾಲಿಸಬೇಕು ಎಂದ ಅವರು, ಮೀಸಲಾತಿ ಜಾರಿಗೊಳಿಸಲು ಕಾನೂನು ವಿಧಾನಗಳಿಗೆ ಸರ್ಕಾರಕ್ಕೆ ಕಾಲಾವಕಾಶ ಬೇಕು ಎಂದರು.

ಈ ಸುದ್ದಿ ಓದಿದ್ದೀರಾ? ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್‌ಗೆ ನಿರೀಕ್ಷಣಾ ಜಾಮೀನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ನಿರ್ಣಯಕ್ಕೆ ಸಿಎಂ ಶಿಂಧೆ, ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್, ಶಿವಸೇನೆ (ಯುಬಿಟಿ) ನಾಯಕ ಅನಿಲ್ ಪರಬ್, ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ವಿಜಯ್ ವಾಡೆತ್ತಿವಾರ್, ವಿಧಾನ ಪರಿಷತ್ತಿನಲ್ಲಿ ಅಂಬಾದಾಸ್ ದಾನ್ವೆ ಸೇರಿದಂತೆ ಇತರರು ಸಹಿ ಹಾಕಿದ್ದಾರೆ.

ಕಳೆದ ಕೆಲವು ದಿನಗಳಿಂದ ಮರಾಠ ಮೀಸಲಿಗೆ ಆಗ್ರಹಿಸಿ ರಾಜ್ಯದ ಹಲವೆಡೆ ಹಿಂಸಾಚಾರದ ಘಟನೆಗಳು ನಡೆದಿವೆ. ಮರಾಠವಾಡದ ಐದು ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ಸೇವೆಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಸೋಮವಾರ ಬೀಡ್‌ನ ಕೆಲವು ಭಾಗಗಳಲ್ಲಿ ಕರ್ಫ್ಯೂ ಮತ್ತು ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ. ಅಲ್ಲಿ ಪ್ರತಿಭಟನಾಕಾರರು ರಾಜಕೀಯ ಮುಖಂಡರ ಮನೆಗಳನ್ನು ಗುರಿಯಾಗಿಸಿ ಹಲವು ಮನೆಗಳನ್ನು ಸುಟ್ಟು ಹಾಕಿದ್ದಾರೆ.

ಹಿಂಸಾಚಾರಕ್ಕೆ ಕೈಹಾಕದಂತೆ ಸಾರ್ವಜನಿಕರಿಗೆ ಮನವಿ ಮಾಡಿದ ಸಿಎಂ, ರಾಜಕೀಯ ಪಕ್ಷಗಳು ಪರಿಸ್ಥಿತಿಯನ್ನು ಹದಗೆಡಿಸುವ ಯಾವುದೇ ಚಟುವಟಿಕೆಗಳಲ್ಲಿ ತೊಡಗುವುದನ್ನು ತಪ್ಪಿಸಬೇಕು ಎಂದು ಹೇಳಿದರು.

ಹಿಂಸಾಚಾರದ ಹಿನ್ನೆಲೆಯಲ್ಲಿ ಸಚಿವಾಲಯ, ಸಿಎಂ ಶಿಂಧೆ ಮತ್ತು ಸಚಿವರ ನಿವಾಸಕ್ಕೆ ಭದ್ರತೆ ಹೆಚ್ಚಿಸಿದೆ. ವಾಸ್ತವವಾಗಿ, ಪ್ರತಿಭಟನಾಕಾರರು ಮೂವರು ಶಾಸಕರ ನಿವಾಸ ಮತ್ತು ಕಚೇರಿಗೆ ಬೆಂಕಿ ಹಚ್ಚಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

RSS ಕುರಿತ ₹100 ನಾಣ್ಯ & ಅಂಚೆ ಚೀಟಿ ಬಿಡುಗಡೆ, ಸಂವಿಧಾನಕ್ಕೆ ಎಸಗಿದ ಘೋರ ಅಪಚಾರ: ಸಿಪಿಐ(ಎಂ)

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶತಮಾನೋತ್ಸವ ಸಮಾರಂಭದ ಪ್ರಯುಕ್ತ ಪ್ರಧಾನಿ ನರೇಂದ್ರ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ...

Download Eedina App Android / iOS

X