ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಆಯ್ಕೆ

Date:

ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ತನ್ನ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ ಪಿ ರಾಧಾಕೃಷ್ಣನ್‌ ಅವರನ್ನು ಆಯ್ಕೆ ಮಾಡಿದೆ.

- Advertisement -

ಈ ನಿರ್ಧಾರವನ್ನು ಇಂದು ಸಂಜೆ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷದ ಸಂಸದೀಯ ಮಂಡಳಿಯ ಸಭೆಯಲ್ಲಿ ಅಂತಿಮಗೊಳಿಸಲಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತಿತರ ಹಿರಿಯ ನಾಯಕರು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ತಮಿಳುನಾಡಿನ ತಿರುಪ್ಪೂರಿನಲ್ಲಿ 1957ರ ಅಕ್ಟೋಬರ್ 20ರಂದು ಜನಿಸಿದ ಚಂದ್ರಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್‌, ಆರ್‌ಎಸ್‌ಎಸ್ ಸ್ವಯಂಸೇವಕರಾಗಿ ತಮ್ಮ ಸಾರ್ವಜನಿಕ ಜೀವನವನ್ನು ಆರಂಭಿಸಿದರು. 1974ರಲ್ಲಿ ಭಾರತೀಯ ಜನಸಂಘದ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ರಾಜಕೀಯಕ್ಕೆ ಕಾಲಿಟ್ಟ ಅವರು,  ಕೊಯಂಬತ್ತೂರಿನಿಂದ ಎರಡು ಬಾರಿ (1998 ಮತ್ತು 1999) ಲೋಕಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪುಕೋಟೆಯಲ್ಲಿ ನಿಂತು ಮೋದಿ ಆರ್‌ಎಸ್‌ಎಸ್‌ಅನ್ನು ಹೊಗಳುವ ದರ್ದು ಏನು?

ಜವಳಿ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ, ಸಾರ್ವಜನಿಕ ವಲಯದ ಸಮಿತಿಗಳು ಮತ್ತು ಹಣಕಾಸು ಸಮಿತಿಯ ಸದಸ್ಯರಾಗಿದ್ದರು. 2004-2007 ಅವಧಿಯಲ್ಲಿ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದರು.

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಜುಲೈ 21, 2025ರಂದು ದಿಢೀರ್ ರಾಜೀನಾಮೆ ಸಲ್ಲಿಸಿದ ನಂತರ ಈ ಚುನಾವಣೆಗೆ ದಾರಿ ಮಾಡಿಕೊಟ್ಟಿತು. ಚುನಾವಣಾ ಆಯೋಗವು ಸೆಪ್ಟೆಂಬರ್ 9, 2025ರಂದು ಚುನಾವಣೆಯನ್ನು ಘೋಷಿಸಿದ್ದು, ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸಂಸತ್‌ ಭವನದ ಮೊದಲ ಮಹಡಿಯಲ್ಲಿ ಮತದಾನ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...

ಮೋದಿ ಸರ್ಕಾರ ECಗೆ ಇಮ್ಯೂನಿಟಿ ನೀಡಿದ್ದರೂ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲಾಗಲ್ಲ: ಕಪಿಲ್ ಸಿಬಲ್

ಮುಖ್ಯ ಚುನಾವಣಾ ಆಯುಕ್ತರಿಗೆ (CEC) ಕ್ರಿಮಿನಲ್ ಪ್ರಕರಣಗಳಿಂದ ಕಾನೂನು ರಕ್ಷಣೆ ನೀಡಲಾಗಿದೆ...