ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಮಧ್ಯಾಹ್ನ 3.30ಕ್ಕೆ ಪ್ರಕಟಗೊಳಿಸಲಿದೆ.
ಇಂದು ಮಧ್ಯಾಹ್ನ 3.30ಕ್ಕೆ ಆಯೋಗದ ಚುನಾವಣಾಧಿಕಾರಿಗಳು ಪತ್ರಿಕಾಗೋಷ್ಠಿ ಕರೆದಿದ್ದು, ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಪ್ರಕಟವಾಗಲಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣಿನ ಮೇಲಿನ ಶೋಷಣೆ ತಡೆಯುವಲ್ಲಿ ಕುಟುಂಬಗಳಿಗಿದೆ ಪ್ರಧಾನ ಪಾತ್ರ!
“ಮಹಾರಾಷ್ಟ್ರ ಮತ್ತು ಜಾರ್ಖಂಡ್ 2024 ರ ವಿಧಾನಸಭೆಗಳಿಗೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲು ಭಾರತದ ಚುನಾವಣಾ ಆಯೋಗದಿಂದ ಪತ್ರಿಕಾಗೋಷ್ಠಿ ಕರೆಯಲಾಗಿದೆ” ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ.
288 ಸದಸ್ಯರ ಮಹಾರಾಷ್ಟ್ರ ವಿಧಾನಸಭೆಯ ಅಧಿಕಾರಾವಧಿಯು ಈ ವರ್ಷದ ನವೆಂಬರ್‌ನಲ್ಲಿ ಕೊನೆಗೊಳ್ಳುತ್ತಿದ್ದರೆ, 81 ಸದಸ್ಯರ ಜಾರ್ಖಂಡ್ ವಿಧಾನಸಭೆಯ ಅಧಿಕಾರಾವಧಿಯು ಜನವರಿ 5, 2025 ರಂದು ಕೊನೆಗೊಳ್ಳಲಿದೆ.
