ಅಭಿವೃದ್ಧಿಗಾಗಿ ಮರ ಕಡಿಯುವುದನ್ನು ಸೈನಿಕರ ಬಲಿದಾನಕ್ಕೆ ಹೋಲಿಸಿದ ಮಹಾರಾಷ್ಟ್ರ ಸಚಿವೆ

Date:

ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಮರಗಳನ್ನು ಕಡಿಯುವುದನ್ನು, ಗಡಿಯಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡುವ ಸೈನಿಕರ ಬಲಿದಾನಕ್ಕೆ ಹೋಲಿಸಿರುವ ಮಹಾರಾಷ್ಟ್ರ ಪರಿಸರ ಸಚಿವೆ ಪಂಕಜಾ ಮುಂಡೆ ಅವರ ಹೇಳಿಕೆ ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

- Advertisement -

ಮುಂಬೈ ಕ್ಲೈಮೇಟ್ ವೀಕ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪಂಕಜಾ ಮುಂಡೆ, ಅಭಿವೃದ್ಧಿಗಾಗಿ ಮರ ಕಡಿಯುವುದನ್ನು ಸಮರ್ಥಿಸಿ ಈ ವಿವಾದಾಸ್ಪದ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಒಬ್ಬ ತಾಯಿ ತನ್ನ ಮಗನನ್ನು ಪೋಷಿಸಿ-ಬೆಳೆಸಿ ದೇಶಕ್ಕಾಗಿ ಹೋರಾಡಲು ಎಂಥ ಧೈರ್ಯದಿಂದ ಗಡಿಗೆ ಕಳುಹಿಸುತ್ತಾಳೆಯೋ, ಅದೇ ರೀತಿ ನಾವು ಮರಗಳನ್ನು ಬೆಳೆಸಿದರೆ ಕೆಲವೊಮ್ಮೆ ಅವುಗಳನ್ನು ಕಡಿಯಬೇಕಾಗುತ್ತದೆ. ಆದರೆ, ಒಂದು ಕಡೆ ಕಡಿದರೆ ನಾವು ಬೇರೆ ಕಡೆ ಅವುಗಳನ್ನು ನೆಡಬಹುದು. ಮರಗಳನ್ನು ಉಳಿಸಬೇಕು ಎಂಬ ಕಾರಣಕ್ಕಾಗಿ ಅಭಿವೃದ್ಧಿಯನ್ನು ಬೇಡ ಎನ್ನಲಾಗದು. ಪ್ರಗತಿಗಾಗಿ ನಾವು 5 ಮರಗಳನ್ನು ಕಡಿದರೆ, 10 ಮರಗಳನ್ನು ಬೆಳೆಸಬಹುದು. ಇದೊಂದೆ ಮಾರ್ಗ” ಎಂದು ಬಿಜೆಪಿ ನಾಯಕಿ ಹಾಗೂ ಸಚಿವೆಯಾಗಿರುವ ಮುಂಡೆ ಹೇಳಿದ್ದಾರೆ.

“ಮರಗಳನ್ನು ಸೈನಿಕರ ರೀತಿ ಭಾವಿಸಿ. ಅವು ಬದುಕಿರುವವರೆಗೆ ನಮ್ಮನ್ನು ರಕ್ಷಿಸುತ್ತವೆ ಹಾಗೂ ಅವುಗಳನ್ನು ತೆಗೆದುಹಾಕಿದಾಗಲೂ ಅವು ಅಭಿವೃದ್ಧಿಗಾಗಿ ಕೆಲಸ ಮಾಡುತ್ತವೆ” ಎಂದು ಮರಗಳ ನಾಶವನ್ನು ಸೈನಿಕರ ಸೇವೆಗೆ ಹೋಲಿಸಿದ್ದಾರೆ.

ಇದನ್ನು ಓದಿದ್ದೀರಾ? ​ಪಂಜಾಬ್: ನಾರ್ಕೊ-ಟೆರರಿಸಂ ಕಪಿಮುಷ್ಠಿಯಲ್ಲಿ ಗಡಿರಾಜ್ಯ; ಮನೆ ಬಾಗಿಲಿಗೆ ಡ್ರಗ್ಸ್ ಡೆಲಿವರಿ!

ಸಾಮಾಜಿಕ ಜಾಲತಾಣಗಳ ಆಕ್ರೋಶ
ಮುಂಡೆ ಅವರ ಈ ವಿಡಿಯೋ ಹೇಳಿಕೆಯನ್ನು ಸಾಮಾಜಿಕ ಹೋರಾಟಗಾರ್ತಿ ಅಂಜಲಿ ದಮಾನಿಯಾ ಅವರು ‘ಎಕ್ಸ್’ ಜಾಲತಾಣದಲ್ಲಿ ಹಂಚಿಕೊಂಡಿದ್ದು”ಈ ಪರಿಸರ ಸಚಿವೆಯ ಬುದ್ಧಿಮತ್ತೆಯನ್ನು ನೋಡಿ ನನಗೆ ಸಂಕಟವಾಗುತ್ತಿದೆ” ಎಂದು ಟೀಕಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ನೆಟ್ಟಿಗರು ಸಚಿವೆಯ ಹೇಳಿಕೆಯನ್ನು ವಿರೋಧಿಸಿದ್ದು, ದೇಶಾಭಿಮಾನದ ಹೆಸರಿನಲ್ಲಿ ಪರಿಸರ ನಾಶವನ್ನು ಸಮರ್ಥಿಸುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...