ಪುಣೆಯಲ್ಲಿ ಭಾರಿ ಮಳೆ: ವಿದ್ಯುತ್ ಸ್ಪರ್ಶದಿಂದ ಮೂವರು ಸಾವು

Date:

ಮಹಾರಾಷ್ಟ್ರದ ಪುಣೆ ಮತ್ತು ಕೊಲ್ಹಾಪುರದಲ್ಲಿ ಎಡಬಿಡದೆ ಸುರಿದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥಗೊಂಡಿದ್ದು, ಶಾಲಾಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆ ಸಂಬಂಧಿತ ಅವಘಡಗಳಿಂದ ನಾಲ್ವರು ಮೃತಪಟ್ಟಿದ್ದು, ವಿದ್ಯುತ್ ಸ್ಪರ್ಶದಿಂದ ಮೂವರು ಸಾವಿಗೀಡಾಗಿದ್ದಾರೆ.

- Advertisement -

ತಗ್ಗು ಪ್ರದೇಶದ ನೂರಾರು ಮನೆಗಳು ಜಲಾವೃತವಾಗಿವೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಹವಾಮಾನ ಇಲಾಖೆ ಪುಣೆಯಾದ್ಯಂತ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಮುನ್ನೆಚ್ಚರಿಕೆಯಿಂದ ಇರುವಂತೆ ನಾಗರಿಕರಿಗೆ ಸೂಚನೆ ನೀಡಿದೆ.

ಪುಣೆ ಸುತ್ತಮುತ್ತಲಿನ ತಾಲ್ಲೂಕುಗಳಲ್ಲಿರುವ ಅನೇಕ ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತದೆ. ಖಡಕ್‌ವಾಸ್ಲಾ ಜಲಾಶಯದಲ್ಲಿಯೂ ನೀರಿನ ಮಟ್ಟ ಏರಿಕೆಯಾಗಿದ್ದು ಈಗಾಗಲೇ 35,000 ಕ್ಯುಸೆಕ್‌ಗಿಂತ ಹೆಚ್ಚು ನೀರು ಬಿಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿಜಕ್ಕೂ ಮೋದಿಯವರು ಕುರ್ಚಿ ಉಳಿಸಿಕೊಳ್ಳಲು ಮಂಡಿಸಿದ ಬಜೆಟ್ ಇದು

ಮಳೆಯಿಂದಾಗಿ ನೀರಿನ ಮಟ್ಟ ಇನ್ನಷ್ಟು ಹೆಚ್ಚಳವಾಗುತ್ತಿರುವ ಕಾರಣ ನದಿಗೆ ಬಿಡುವ ನೀರಿನ ಪ್ರಮಾಣ 45,000 ಕ್ಯೂಸೆಕ್‌ಗೆ ಹೆಚ್ಚಲಿದೆ. ಇದರಿಂದಾಗಿ ಇನ್ನಷ್ಟು ತಗ್ಗು ಪ್ರದೇಶಗಳು ಜಲಾವೃತವಾಗುವ ಸಾಧ್ಯತೆ ಇದ್ದು, ಜನರನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪುಣೆ ಮಹಾನಗರ ಪಾಲಿಕೆ ಹೇಳಿದೆ.

ಮಳೆ ಹೆಚ್ಚಾಗಿರುವ ಕಾರಣ ಏರ್‌ ಇಂಡಿಯಾ ಮಾರ್ಗಸೂಚಿಯನ್ನು ಪ್ರಕಟಿಸಿದ್ದು,ಮುಂಬೈಗೆ ತೆರಳುವ ವಿಮಾನಗಳು ತಡವಾಗಬಹುದು. ಇಂದು ಪ್ರಯಾಣಿಸುವ ಪ್ರಯಾಣಿಕರಿಗೆ ವೇಳಾಪಟ್ಟಿ ಬದಲಾವಣೆ ಅಥವಾ ಹಣ ಮರುಪಾವತಿ ಆಯ್ಕೆಯನ್ನು ನೀಡಲಾಗಿರುವುದಾಗಿ ಪ್ರಯಾಣಿಕರಿಗೆ ತಿಳಿಸಲಾಗಿದೆ ಎಂದು ಏರ್‌ ಇಂಡಿಯಾ ತಿಳಿಸಿದೆ.

ಇತರ ವಿಮಾನಯಾನ ಸಂಸ್ಥೆಗಳಾದ ಇಂಡಿಗೋ, ಸ್ಪೇಸ್‌ಜೆಟ್ ಸೇರಿದಂತೆ ಹಲವು ಸಂಸ್ಥೆಗಳು ವಿಮಾನ ತಡವಾಗುವ ಬಗ್ಗೆ ಸೂಚನೆಗಳನ್ನು ನೀಡಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...