ಮಹಾರಾಷ್ಟ್ರ SIR | ಅಲ್ಪಸಂಖ್ಯಾತರ ಪ್ರಾಬಲ್ಯದ 10 ಕ್ಷೇತ್ರಗಳಲ್ಲಿ 35%ಗೂ ಹೆಚ್ಚು ಮತದಾರರು ಡಿಲೀಟ್

Date:

ಮಹಾರಾಷ್ಟ್ರದಲ್ಲಿ ನಡೆದಿರುವ ಮತಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಬಳಿಕ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಮುಂಬೈ ಮತ್ತು ಮುಂಬೈ ಮಹಾನಗರ ಪ್ರದೇಶದಲ್ಲಿ (MMR)  ಅಲ್ಪಸಂಖ್ಯಾತ ಸಮುದಾಯದ ಪ್ರಾಬಲ್ಯವಿರುವ 10 ವಿಧಾನಸಭಾ ಕ್ಷೇತ್ರಗಳಲ್ಲಿ 35%ಕ್ಕಿಂತ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ. ಚುನಾವಣಾ ಆಯೋಗದ ಕ್ರಮದ ಬಗ್ಗೆ ಪ್ರಶ್ನೆಗಳನ್ನು ಎತ್ತಿವೆ.

- Advertisement -

ಎನ್‌ಸಿಪಿ (ಎಸ್‌ಪಿ) ನಾಯಕ ಅನೀಶ್ ಗವಾಂಡೆ ಅವರು ‘ಎಕ್ಸ್‌’ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, “ಮುಂಬೈ ಮತ್ತು ಮುಂಬೈ ಮಹಾನಗರ ಪ್ರದೇಶದಲ್ಲಿ ಬೃಹತ್ ಮತದಾರರ ಅಳಿಸುವಿಕೆ ನಡೆದಿದೆ. ಮಹಾರಾಷ್ಟ್ರದ ಉಳಿದ ಭಾಗಗಳಲ್ಲಿ ಸರಾಸರಿ 17%ರಷ್ಟು ಮತದಾರರ ಹೆಸರುಗಳು ಡಿಲೀಟ್ ಆಗಿದ್ದರೆ, ಮುಂಬೈನಲ್ಲಿ ಸುಮಾರು 35%ರಷ್ಟು ಮತಗಳನ್ನು ಅಳಿಸಲಾಗಿದೆ. ಮುಂಬೈನಲ್ಲಿ 76 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ” ಎಂದು ಅವರು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಮುಂಬೈನ ಚಾಂದಿವಲಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 30%ರಷ್ಟು ಮುಸ್ಲಿಂ ಜನಸಂಖ್ಯೆ ಇದೆ. ಈ ಕ್ಷೇತ್ರದಲ್ಲಿರುವ ಒಟ್ಟು 4,62,346 ಮತದಾರರ ಪೈಕಿ 1,91,577 ಮತದಾರರನ್ನು ASDDO ವರ್ಗದಡಿ ಅಳಿಸಲಾಘಿದೆ. ಅಂದರೆ, 41.4%ರಷ್ಟು ಮತದಾರರ ಹೆಸರುಗಳು ಮತಪಟ್ಟಿಯಿಂದ ಹೊರಗುಳಿದಿವೆ. ಈ ಕ್ಷೇತ್ರದಲ್ಲಿ 2024ರ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆಯ ದಿಲೀಪ್ ಲಾಂಡೆ ಅವರು ಕಾಂಗ್ರೆಸ್‌ನ ಖಾನ್ ಮೊಹಮ್ಮದ್ ಆರಿಫ್ ಅವರನ್ನು ಸೋಲಿಸಿದ್ದರು.

ಮುಂಬೈನ ಮಾಂಖುರ್ಡ್-ಶಿವಾಜಿನಗರ ಕ್ಷೇತ್ರದಲ್ಲಿ ಸುಮಾರು 55%ರಷ್ಟು ಮುಸ್ಲಿಂ ಮತದಾರರಿದ್ದಾರೆ ಎಂದು ಅಂದಾಜಿಸಲಾಗಿದೆ. ಇಲ್ಲಿ 1,46,912 ಮತದಾರರ ಹೆಸರುಗಳನ್ನು ASDDO ಅಡಿಯಲ್ಲಿ ಅಳಿಸಲಾಗಿದೆ.ಅಂದರೆ, 42.3%ರಷ್ಟು ಮತಗಳು ಡಿಲೀಟ್ ಆಗಿವೆ. ಈ ಕ್ಷೇತ್ರದಲ್ಲಿ, 2024ರ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಬು ಅಜ್ಮಿ ಅವರು ಗೆಲುವು ಸಾಧಿಸಿದ್ದರು.

ಇದೇ ರೀತಿ ಮಾಲಾಡ್ ಪಶ್ಚಿಮ ಕ್ಷೇತ್ರದಲ್ಲಿ ಮುಸ್ಲಿಂ ಜನಸಂಖ್ಯೆ 28%ರಷ್ಟಿದೆ. ಇಲ್ಲಿ ಸುಮಾರು 39%ರಷ್ಟು ಮತದಾರರ ಹೆಸರುಗಳನ್ನು ಅಳಿಸಲಾಗಿದೆ. ಅಂತೆಯೇ, ಸುಮಾರು 50%ರಷ್ಟು ಮುಸ್ಲಿಂ ಜನಸಂಖ್ಯೆ ಹೊಂದಿರುವ ಮುಂಬಾದೇವಿ ಕ್ಷೇತ್ರದಲ್ಲಿ 38%ರಷ್ಟು ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ.

ಕ್ರೈಸ್ತ ಮತ್ತು ಮುಸ್ಲಿಂ ಸಮುದಾಯದ ಮಿಶ್ರ ಜನಸಂಖ್ಯೆ ಹೊಂದಿರುವ ವಾಂದ್ರೆ ಪಶ್ಚಿಮ ಕ್ಷೇತ್ರದಲ್ಲಿ 38%ರಷ್ಟು ಮತದಾರರ ಹೆಸರುಗಳನ್ನು ಕಿತ್ತುಹಾಕಲಾಗಿದೆ. ಮುಸ್ಲಿಂ ಜನಸಂಖ್ಯೆ 38.9%ರಷ್ಟಿರುವ ಬೈಕುಲ್ಲಾ ಕ್ಷೇತ್ರದಲ್ಲಿ 35%ರಷ್ಟು ಮತದಾರರ ಹೆಸರುಗಳನ್ನು ಅಳಿಸಲಾಗಿದೆ. ವಾಂದ್ರೆ ಪೂರ್ವ ಕ್ಷೇತ್ರದಲ್ಲಿ 35.1%ರಷ್ಟು ಹಾಗೂ ಮುಸ್ಲಿಂ ಮತ್ತು ದಲಿತ ಸಮುದಾಯಗಳ ಮಿಶ್ರ ಜನಸಂಖ್ಯೆ ಹೊಂದಿರುವ ಧಾರಾವಿ (ಎಸ್‌ಸಿ) ಕ್ಷೇತ್ರದಲ್ಲಿ 35.8%ರಷ್ಟು ಮತದಾರರ ಹೆಸರುಗಳು ಡಿಲೀಟ್ ಆಗಿವೆ.

ಮುಂಬೈ ಹೊರತಾಗಿಯೂ ಮಹಾರಾಷ್ಟ್ರದ ಇತರ ಭಾಗಗಳಲ್ಲಿಯೂ ಇದೇ ರೀತಿಯ ಪರಿಸ್ಥಿತಿ ಕಂಡುಬಂದಿದೆ. ಥಾಣೆ ಜಿಲ್ಲೆಯ ಭಿವಂಡಿ ಪೂರ್ವ ಕ್ಷೇತ್ರದಲ್ಲಿ ಸುಮಾರು 42%ರಷ್ಟು ಮುಸ್ಲಿಂ ಜನಸಂಖ್ಯೆ ಇದ್ದು, ಇಲ್ಲಿ 49.4%ರಷ್ಟು ಮತದಾರರ ಹೆಸರುಗಳು ಡಿಲೀಟ್ ಆಗಿವೆ. ಪಕ್ಕದ ಭಿವಂಡಿ ಪಶ್ಚಿಮ ಕ್ಷೇತ್ರದಲ್ಲಿ 46.4%ರಷ್ಟು ಮತದಾರರ ಹೆಸರುಗಳನ್ನು ಅಳಿಸಲಾಗಿದೆ.

ಥಾಣೆಯ ಮುಂಬ್ರಾ-ಕಲ್ವಾ ಕ್ಷೇತ್ರದಲ್ಲಿ 44%ರಷ್ಟು ಮತದಾರರ ಹೆಸರುಗಳು ಡಿಲೀಟ್ ಆಗಿದ್ದು, ಇಲ್ಲಿ ಮುಸ್ಲಿಂ ಜನಸಂಖ್ಯೆ ಸುಮಾರು 38.7%ರಷ್ಟಿದೆ. ನಾಗಪುರ ಸೆಂಟ್ರಲ್ ಕ್ಷೇತ್ರದಲ್ಲಿ ಮುಸ್ಲಿಂ ಜನಸಂಖ್ಯೆ ಸುಮಾರು 22%ರಷ್ಟಿದ್ದು, ಇಲ್ಲಿ 38.5%ರಷ್ಟು ಮತದಾರರ ಹೆಸರುಗಳು ಪಟ್ಟಿಯಿಂದ ಹೊರ ಹಾಲಾಗಿದೆ.

ಈ ಅಳಿಸುವಿಕೆ ಕ್ರಮವು ನಿರ್ದಿಷ್ಟ ಸಮುದಾಯಗಳು ಮತ್ತು ಪ್ರತಿಪಕ್ಷ ಬೆಂಬಲಿಗರ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ ಮಾತನಾಡಿ, “ಹಸಿರು, ನೀಲಿ ಮತ್ತು ಪ್ರತಿಪಕ್ಷದ ಮತದಾರರನ್ನು ಅಳಿಸಿಹಾಕಲಾಗಿದೆ. ಬಿಜೆಪಿ ಬೆಂಬಲಿಗರಾದ ಕೇಸರಿ ಮತದಾರರನ್ನು ಮಾತ್ರ ಉಳಿಸಲಾಗಿದೆ” ಎಂದು ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬ್ರಾಹ್ಮಣ್ಯದ ಪರಮಾಧಿಕಾರ ಸ್ಥಾಪಿಸಿದ್ದ ಮನುಸ್ಮೃತಿ

“ನಾಗಪುರಕ್ಕೆ ಹೊರ ಜಿಲ್ಲೆಗಳಿಂದ ಸುಮಾರು 500 ಕಾರ್ಯಕರ್ತರನ್ನು ಬಿಜೆಪಿ ಕರೆತಂದಿದೆ. ಅವರನ್ನು ಮುಖ್ಯಮಂತ್ರಿ ಕಚೇರಿಯಲ್ಲಿರುವ ಹೈದರಾಬಾದ್ ಹೌಸ್‌ನಲ್ಲಿ ಉಳಿಸಿ, ಚುನಾವಣಾ ಆಯೋಗದ ಅಧಿಕಾರಿಗಳೊಂದಿಗೆ ಸೇರಿಕೊಂಡು ಮತದಾರರ ಹೆಸರುಗಳನ್ನು ತೆಗೆದುಹಾಕುವ ಕೆಲಸ ನಡೆದಿದೆ” ಎಂದು ಅವರು ಆರೋಪಿಸಿದ್ದಾರೆ.

ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕೂಡ ಮಹಾರಾಷ್ಟ್ರದ ಮತದಾರರ ಪಟ್ಟಿಯ ಬದಲಾವಣೆ ಕುರಿತು ಪ್ರಶ್ನೆ ಎತ್ತಿದ್ದಾರೆ. ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಅವರು, “ಬಿಜೆಪಿ ಮತ್ತು ‘ಮತ ಕಳವು ಆಯೋಗ’ (ಚುನಾವಣಾ ಆಯೋಗ) ತಮ್ಮ ತಂತ್ರಗಳನ್ನು ಬದಲಾಯಿಸುತ್ತಲೇ ಇವೆ” ಎಂದು ಆರೋಪಿಸಿದ್ದಾರೆ.

“2024ರ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ 9.29 ಕೋಟಿ ಮತದಾರರಿದ್ದರು. ಅದೇ ವರ್ಷದ ವಿಧಾನಸಭಾ ಚುನಾವಣೆಯ ವೇಳೆಗೆ ಈ ಸಂಖ್ಯೆ 9.7 ಕೋಟಿಗೆ ಏರಿತ್ತು. ಆದರೆ, SIR ನಂತರದ ಕರಡು ಪಟ್ಟಿಯಲ್ಲಿ ಮತದಾರರ ಸಂಖ್ಯೆ 7.78 ಕೋಟಿಗೆ ಇಳಿದಿದೆ. ಯಾವ ಪಟ್ಟಿಯನ್ನು ಸರಿಯಾದದ್ದು ಎಂದು ಪರಿಗಣಿಸಬೇಕು” ಎಂದು ರಾಹುಲ್‌ ಗಾಂಧಿ ಪ್ರಶ್ನಿಸಿದ್ದಾರೆ.

ಮಹಾರಾಷ್ಟ್ರದ ಮುಖ್ಯ ಚುನಾವಣಾಧಿಕಾರಿ ಎಸ್. ಚೋಕಲಿಂಗಂ ಅವರು ಇದು ಕೇವಲ ಕರಡು ಮತದಾರರ ಪಟ್ಟಿ ಮಾತ್ರ. ಅಂತಿಮ ಮತದಾರರ ಪಟ್ಟಿಯನ್ನು ನವೆಂಬರ್ 4ರಂದು ಪ್ರಕಟಿಸಲಾಗುವುದು. ಸೆಪ್ಟೆಂಬರ್ 30ರವರೆಗೆ ಹೆಸರು ಕೈಬಿಟ್ಟಿರುವವರು ಆಕ್ಷೇಪಣೆ ಸಲ್ಲಿಸಲು ಅವಕಾಶವಿದ್ದು, ನಂತರ ಪರಿಶೀಲನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...