ಏಕನಾಥ್ ಶಿಂಧೆ ಬಣ ನಿಜವಾದ ಶಿವಸೇನೆ, ಉಚ್ಚಾಟಿಸಲು ಉದ್ಧವ್‌ಗೆ ಅಧಿಕಾರವಿಲ್ಲ: ಸ್ಪೀಕರ್ ತೀರ್ಪು

Date:

ಶಿವಸೇನೆ ಶಾಸಕರ ಅನರ್ಹತೆ ಪ್ರಕರಣದಲ್ಲಿ ಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಪರವಾಗಿ ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್ ರಾಹುಲ್ ನರ್ವೇಕರ್‌ ತೀರ್ಪು ನೀಡಿದ್ದಾರೆ.

- Advertisement -

ಮಹಾರಾಷ್ಟ್ರ ವಿಧಾನಸಭೆಯಲ್ಲಿ ತೀರ್ಪನ್ನು ಪ್ರಕಟಿಸಿದ ಸ್ಪೀಕರ್ ರಾಹುಲ್ ನರ್ವೇಕರ್, ಮುಖ್ಯಮಂತ್ರಿ ಏಕನಾಥ್ ಶಿಂಧೆ ಬಣವೆ ನಿಜವಾದ ಶಿವಸೇನೆಯಾಗಿದ್ದು, ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಉಚ್ಚಾಟಿಸಲು ಉದ್ದವ್ ಠಾಕ್ರೆ ಅವರಿಗೆ ಅಧಿಕಾರವಿಲ್ಲ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶಿವಸೇ ನಾದ ಎರಡೂ ಬಣಗಳು ಚುನಾವಣಾ ಆಯೋ ಗಕ್ಕೆ ಸಲ್ಲಿಸಿರುವ ತಮ್ಮ ಸಂಘಟನೆಯ ವಿಧಾನದಲ್ಲಿ
ಯಾವುದೇ ಒಮ್ಮತವಿಲ್ಲ. ನಾಯಕತ್ವ ರಚನೆಯ ಬಗ್ಗೆ ಎರಡು ಪಕ್ಷಗಳು ವಿಭಿನ್ನ ದೃಷ್ಟಿಕೋನಗಳನ್ನು ಹೊಂ ದಿವೆ. ಪರಿಗಣಿಸಬೇ ಕಾದ ಏಕೈ ಕ ಅಂ ಶವೆಂ ದರೆ ಶಾಸಕಾಂಗ ಪಕ್ಷದ ಬಹುಮತ ಎಂ ದು ನಾರ್ವೇ ಕರ್ ತೀ ರ್ಪಿ ನಲ್ಲಿ ಹೇಳಿದ್ದಾರೆ.

ಶಾಸಕ ಭರತ್‌ ಸೇಠ್ ಗೋಗ್‌ವಾಲೆ ಅವರು ನಿಜವಾದ ವಿಪ್‌ ಅಧಿಕಾರ ಹೊಂದಿದ್ದು, ಉದ್ಧವ್ ಬಣದ ಸುನಿಲ್‌ ಪ್ರಭು ಅವರಿಗೆ ಸಭೆ ಕರೆಯುವ ಯಾವುದೇ ಅಧಿಕಾರವಿಲ್ಲ ಎಂದು ರಾಹುಲ್ ನರ್ವೇಕರ್‌ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಭಿಮಾನ ಅಂಧಾಭಿಮಾನವಾಗದಿರಲಿ; ಬಡವರ ಮಕ್ಕಳು ಬಲಿಯಾಗದಿರಲಿ

ಜೂನ್‌ 2022ರಲ್ಲಿ ಏಕ್‌ನಾಥ್‌ ಶಿಂಧೆ ನೇತೃತ್ವದಲ್ಲಿ 35ಕ್ಕೂ ಹೆಚ್ಚು ಶಿವಸೇವೆ ಶಾಸಕರು ಆಗಿನ ಮುಖ್ಯಮಂತ್ರಿಯಾಗಿದ್ದ ಉದ್ದವ್ ಠಾಕ್ರೆ ವಿರುದ್ಧ ಬಂಡೆದ್ದು ಬಿಜೆಪಿಯೊಂದಿಗೆ ಕೈಜೋಡಿಸಿ ಸರ್ಕಾರ ರಚಿಸಿದ್ದರು.

ತಮ್ಮದು ನಿಜವಾದ ಶಿವಸೇನೆ ಎಂದು ಘೋಷಿಸಿ 40 ಶಾಸಕರನ್ನು ಅನರ್ಹಗೊಳಿಸಬೇಕೆಂದು ಉದ್ದವ್ ಠಾಕ್ರೆ ಚುನಾವಣಾ ಆಯೋಗ ಹಾಗೂ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಎರಡೂ ಕಡೆಯೂ ಏಕ್‌ನಾಥ್ ಶಿಂಧೆ ಪರ ತೀರ್ಪು ಬಂದಿತ್ತು. ಮೂಲ ಚಿಹ್ನೆಯನ್ನು ಕೂಡ ಏಕ್‌ನಾಥ್ ಬಣಕ್ಕೆ ನೀಡಲಾಗಿತ್ತು.

ಒಟ್ಟು 34 ಅರ್ಜಿಗಳಿಗೆ ಸಂಬಂಧಿಸಿ ಸ್ಪೀಕರ್ 6 ವಿಭಾಗಗಳಲ್ಲಿ ತೀರ್ಪು ಪ್ರಕಟಿಸಿದ್ದಾರೆ. ಪ್ರತಿ ಭಾಗವೂ ತಲಾ 200 ಪುಟಗಳನ್ನು ಹೊಂದಿದ್ದು, ಒಟ್ಟು ತೀರ್ಪು 1,200 ಪುಟಗಳನ್ನು ಒಳಗೊಂಡಿದೆ.

ತೀರ್ಪಿನ ವಿರುದ್ಧ ಹೈಕೋರ್ಟ್‌ ಅಥವಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರುವ ಅವಕಾಶವೂ ಎರಡೂ ಕಡೆಯವರಿಗೆ ಇರುತ್ತದೆ. ಈ ಹಿಂದೆಯೇ ಸುಪ್ರೀಂ ಕೋರ್ಟ್‌ ತೀರ್ಪು ಪ್ರಕಟಿಸಲು ಸ್ಪೀಕರ್‌ಗೆ ಜ.10ರ ಗಡುವು ವಿಧಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...