8 ಲಕ್ಷ ಮಹಿಳೆಯರ ಸ್ಟೈಪೆಂಡ್‍ಗೆ ಕತ್ತರಿ ಹಾಕಿದ ಮಹಾರಾಷ್ಟ್ರ ಸರ್ಕಾರ

Date:

ಮಹಾಯುತಿ ಸರ್ಕಾರದ ಪ್ರಮುಖ ಯೋಜನೆಯಾದ ಮುಖ್ಯಮಂತ್ರಿ ಮಾಜ್ಹಿ ಲಡ್ಕಿ ಬಹಿನ್ ಯೋಜನೆಯ ಎಂಟು ಲಕ್ಷ ಫಲಾನುಭವಿಗಳು ನಮೋ ಶೇಟ್ಕರಿ ಮಹಾಸನ್ಮಾನ್ ನಿಧಿ(ಎನ್‍ಎಸ್‍ಎಂಎನ್) ಯೋಜನೆಯಡಿ ಪ್ರಯೋಜನ ಪಡೆಯುತ್ತಿದ್ದಾರೆ ಎಂಬ ಕಾರಣ ನೀಡಿ ಅವರ ಸ್ಟೈಪೆಂಡ್‍ಗೆ ಮಹಾರಾಷ್ಟ್ರ ಸರ್ಕಾರ ಕತ್ತರಿ ಹಾಕಿದೆ.

- Advertisement -

ಎಂಟು ಲಕ್ಷ ಮಹಿಳೆಯರು ಮಾಸಿಕವಾಗಿ ಪಡೆಯುತ್ತಿದ್ದ 1,500 ರೂಪಾಯಿಗಳ ಬದಲು ಇನ್ನು ಮುಂದೆ ಕೇವಲ 500 ರೂಪಾಯಿ ಪಡೆಯಲಿದ್ದಾರೆ.ಈ ಫಲಾನುಭವಿಗಳು ಈಗಾಗಲೇ ಎನ್‍ಎಸ್‍ಎಂಎನ್ ಯೋಜನೆಯಡಿ ಮಾಸಿಕ 1,000 ರೂಪಾಯಿ ಪಡೆಯುತ್ತಿದ್ದಾರೆ ಎಂದು ಪ್ರಕಟಣೆ ಹೇಳಿದೆ. ಲಡ್ಕಿ ಬಹಿನ್ ಯೋಜನೆಯಡಿ ಫಲಾನುಭವಿಗಳು ಇತರ ಸರ್ಕಾರಿ ಸೌಲಭ್ಯವನ್ನು ಪಡೆಯುವ ಅರ್ಹತೆ ಹೊಂದಿದ್ದು, ಗರಿಷ್ಠ ಮಾಸಿಕ 1,500 ರೂಪಾಯಿ ಪಡೆಯಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೊಲೀಸರ ಬಂದೂಕಿನ ನ್ಯಾಯ ಸಮಾಜಕ್ಕೆ ಮಾರಕ

ಈ ಯೋಜನೆಯಡಿ ಸೌಲಭ್ಯ ಪಡೆಯುವ ಮಾನದಂಡವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಕ್ರಮವಾಗಿ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ. ಕಳೆದ ಅಕ್ಟೋಬರ್ ನಲ್ಲಿ 2.63 ಕೋಟಿ ಮಂದಿ ಈ ಯೋಜನೆಗೆ ಅರ್ಜಿ ಸಲ್ಲಿಸಿದರು. ಇದರ ಪರಿಶೀಲನೆ ನಡೆಸಿ 11 ಲಕ್ಷ ಮಂದಿಯನ್ನು ಕಿತ್ತುಹಾಕಿ 2.52 ಕೋಟಿ ಮಂದಿಗೆ ಫೆಬ್ರವರಿ ವೇಳೆ ಸ್ಟೈಪಂಡ್ ನೀಡಲಾಗುತ್ತಿತ್ತು. ಫೆಬ್ರವರಿ ಮತ್ತು ಮಾರ್ಚ್‍ನಲ್ಲಿ ಫಲಾನುಭವಿಗಳ ಸಂಖ್ಯೆ 2.46 ಲಕ್ಷಕ್ಕೆ ಇಳಿದಿದೆ.

ಪರಿಶೀಲನೆ ಪ್ರಕ್ರಿಯೆ ಬಳಿಕ 10-15 ಲಕ್ಷ ಫಲಾನುಭವಿಗಳು ಕಡಿಮೆಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿಕೆ ನೀಡಿದ್ದರು.ನೆರವು ಪಡೆಯಲು ಮಾನದಂಡವನ್ನು ಬದಲಿಸಿಲ್ಲ. ಆದರೆ ಅರ್ಹರು ಮಾತ್ರ ಪಡೆಯುವಂತೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...