ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

Date:

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆ ನಗರ ಪೊಲೀಸರು ಭೀವಂಡಿ ನ್ಯಾಯಾಲಯಕ್ಕೆ ಸುಮಾರು 3,500 ಪುಟಗಳ ಬೃಹತ್ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದು, ಅತ್ಯಂತ ಆಘಾತಕಾರಿ ಮಾಹಿತಿಗಳನ್ನು ಹೊರಗೆಡವಿದ್ದಾರೆ. ಮುದ್ರಣಾಲಯದ ಸಿಬ್ಬಂದಿ ಕೇವಲ 8,000 ರೂಪಾಯಿ ಹಣ ಹಾಗೂ ಜಮೀನಿನ ಆಸೆಗೆ ಬಿದ್ದು, ಶೂಗಳ ಇನ್‌ಸೋಲ್ ಒಳಗೆ ಮಡಚಿಟ್ಟ ಪ್ರಶ್ನೆಪತ್ರಿಕೆಗಳನ್ನು ಅಡಗಿಸಿ ಹೊರತಂದಿರುವುದು ತನಿಖೆಯಲ್ಲಿ ತಿಳಿದುಬಂದಿದೆ.

- Advertisement -

ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನೀಡಿರುವ ಮಾಹಿತಿಯಂತೆ, ಉತ್ತರ ಪ್ರದೇಶದ ಆಗ್ರಾದಲ್ಲಿರುವ ‘ಮಹಿಮ್ ಪತ್ರಾನ್ ಪ್ರೈವೇಟ್ ಲಿಮಿಟೆಡ್’ ಎಂಬ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಮಹಾರಾಷ್ಟ್ರ ಟಿಇಟಿ ಪರೀಕ್ಷೆಯ ಗೌಪ್ಯ ಪ್ರಶ್ನೆಪತ್ರಿಕೆಗಳನ್ನು ಮುದ್ರಿಸಲಾಗುತ್ತಿತ್ತು.
ಜೂನ್ 15ರಿಂದ 17ರ ನಡುವೆ ಪ್ರೆಸ್‌ನ ಇಬ್ಬರು ಹಾಲಿ ಉದ್ಯೋಗಿಗಳು ಹಾಗೂ ಒಬ್ಬ ಮಾಜಿ ಉದ್ಯೋಗಿ ಪ್ರಶ್ನೆಪತ್ರಿಕೆಗಳನ್ನು ಸಣ್ಣದಾಗಿ ಮಡಚಿ ತಮ್ಮ ಶೂಗಳ ಅಡಿಯಲ್ಲಿ ಅಡಗಿಸಿಟ್ಟುಕೊಂಡು ಭದ್ರತಾ ಸಿಬ್ಬಂದಿಯ ಕಣ್ಣು ತಪ್ಪಿಸಿ ಹೊರಬಂದಿದ್ದಾರೆ. ಭದ್ರತಾ ಸಿಬ್ಬಂದಿ ಮೇಲ್ಭಾಗದ ಉಡುಪುಗಳನ್ನು ಮಾತ್ರ ತಪಾಸಣೆ ನಡೆಸಿದ್ದು, ಪಾದರಕ್ಷೆಗಳನ್ನು ಪರಿಶೀಲಿಸದಿರುವುದು ಹಗರಣಕೋರರಿಗೆ ಅನುಕೂಲವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಇದನ್ನೂ ಓದಿ: ಮಂಗಳೂರು | ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಪರೀಕ್ಷೆಯ ಗೌಪ್ಯತೆ ಕಾಪಾಡಲು ರಾಜ್ಯ ಪರೀಕ್ಷಾ ಮಂಡಳಿಯು ನಾಲ್ಕು ವಿಭಿನ್ನ ಸೆಟ್‌ಗಳ ಪ್ರಶ್ನೆಪತ್ರಿಕೆಗಳನ್ನು ಸಿದ್ಧಪಡಿಸಿತ್ತು. ಆದರೆ ಆರೋಪಿಗಳು ನಾಲ್ಕೂ ಸೆಟ್‌ಗಳನ್ನೂ ಹೊರತರುವಲ್ಲಿ ಯಶಸ್ವಿಯಾಗಿದ್ದರು. ಈ ಕೆಲಸಕ್ಕಾಗಿ ಪ್ರಿಂಟಿಂಗ್ ಪ್ರೆಸ್ ಉದ್ಯೋಗಿಗಳಿಗೆ ತಲಾ 8,000 ರೂಪಾಯಿ ನಗದು ಮತ್ತು ಆಗ್ರಾದಲ್ಲಿ ನಿವೇಶನ ಕೊಡುವುದಾಗಿ ಭರವಸೆ ನೀಡಲಾಗಿತ್ತು.

ಈ ಪ್ರಕರಣದಲ್ಲಿ ಕೋಚಿಂಗ್ ಕ್ಲಾಸ್‌ನ ಮಾಜಿ ಶಿಕ್ಷಕ ಬಿಜೇಂದ್ರ ಗುಪ್ತಾ ಎಂಬಾತನೇ ಪ್ರಮುಖ ರೂವಾರಿ (ಮಾಸ್ಟರ್‌ಮೈಂಡ್) ಎಂದು ಗುರುತಿಸಲಾಗಿದೆ. ಪೊಲೀಸರು ಒಟ್ಟು 18 ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದು, ಈ ಪೈಕಿ 16 ಮಂದಿಯನ್ನು ಬಂಧಿಸಲಾಗಿದೆ ಮತ್ತು ಇಬ್ಬರು ತಲೆಮರೆಸಿಕೊಂಡಿದ್ದಾರೆ.

ಬಿಹಾರದಲ್ಲಿರುವ ಬಿಜೇಂದ್ರ ಗುಪ್ತಾ ಸಂಬಂಧಿಕರ ಮನೆಯಿಂದ ಕಳುವಾಗಿದ್ದ ಮೂಲ ಪ್ರಶ್ನೆಪತ್ರಿಕೆಯನ್ನು ಪೊಲೀಸರು ವಶಪಡಿಸಿಕೊಂಡಿದೆ. ಹಣಕಾಸು ವಹಿವಾಟಿನ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...

ಅಭಿವೃದ್ಧಿ ದೇಶಗಳಿಂದ ಇಂಗಾಲ ಹೆಚ್ಚು ಎಂದ ಮೋದಿ; ದೇಶದ ಮಾಲಿನ್ಯ, ಅರಣ್ಯ ನಾಶದ ಬಗ್ಗೆ ನೆಟ್ಟಿಗರ ಪ್ರಶ್ನೆ

ಇಂಗಾಲದ ಹೊರಸೂಸುವಿಕೆಗೆ (Carbon emissions) ಸಂಬಂಧಿಸಿದಂತೆ ಅಭಿವೃದ್ಧಿಶೀಲ ರಾಷ್ಟ್ರಗಳನ್ನು ಆಗಾಗ್ಗೆ ಅನ್ಯಾಯವಾಗಿ...

SIR | ಮತಪಟ್ಟಿಯಿಂದ ಎಷ್ಟು ಹೆಸರು ರದ್ದು? ಸ್ಪಷ್ಟ ವರದಿ ನೀಡುವಂತೆ ಚು. ಆಯೋಗಕ್ಕೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕ, ಲಕ್ಷಾಂತರ ಮತದಾರರಿಗೆ ನೋಟಿಸ್...