ಕಳವಿನ ಆತಂಕ; ನೀರಿನ ಡ್ರಮ್‌ಗಳಿಗೆ ಬೀಗ ಹಾಕಿ ಕಾಪಾಡುವ ಮಹಾರಾಷ್ಟ್ರದ ಗ್ರಾಮಸ್ಥರು!

Date:

ತಾಪಮಾನ ಹೆಚ್ಚಾಗುತ್ತಿದ್ದಂತೆ ದೇಶದ ಹಲವು ಪ್ರದೇಶಗಳಲ್ಲಿ ನೀರಿನ ಕೊರತೆ ಕಾಣಿಸಿಕೊಳ್ಳುತ್ತದೆ. ನಗರದಲ್ಲಿರುವವರು ಹಣ ಕೊಟ್ಟು ಟ್ಯಾಂಕರ್‌ಗಳಲ್ಲಿ ನೀರು ತರಿಸಿಕೊಳ್ಳುತ್ತಾರೆ. ಆದರೆ ಗ್ರಾಮೀಣ ಭಾಗದ ಜನರ ಸ್ಥಿತಿ ಶೋಚನೀಯ. ಮಹಾರಾಷ್ಟ್ರದ ಗ್ರಾಮವೊಂದರ ಜನರಿಗೆ ಅಪರೂಪಕ್ಕೆ ನಲ್ಲಿಯಲ್ಲಿ ಸುರಿಯುವ ನೀರನ್ನು ಕಾಪಿಡುವುದೇ ಸವಾಲಾಗಿದೆ. ಕಳ್ಳತನದ ಆತಂಕದ ನಡುವೆ ನೀರಿನ ಡ್ರಮ್‌ಗಳಿಗೆ ಬೀಗ ಹಾಕಿ ಇಡುತ್ತಿದ್ದಾರೆ.

- Advertisement -

ತೀವ್ರ ನೀರಿನ ಬಿಕ್ಕಟ್ಟಿನ ನಡುವೆ ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಗ್ರಾಮಗಳಲ್ಲಿ ಪರಿಸ್ಥಿತಿ ಶೋಚನೀಯವಾಗಿದೆ. ಇದು ಉಪ್ಪು ನೀರಿನ ಪ್ರದೇಶವಾಗಿದೆ. ತಾಪಮಾನ 44 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಿದೆ. ಬಿಸಿಲಿನ ಬೇಗೆ ನಡುವೆ ದಾಹವೂ ಅಧಿಕ. ಬಿಸಿಲು ಅಧಿಕವಾಗಿರುವ ಕಾರಣ ಅಧಿಕ ನೀರು ಕುಡಿಯುವಂತೆ ಸರ್ಕಾರವೂ ಸೂಚಿಸಿದೆ. ಆದರೆ ಈ ಗ್ರಾಮದ ಜನರಿಗೆ ಕುಡಿಯುವ ನೀರಿನ ಕೊರತೆ ಎದುರಾಗಿದೆ. ನಲ್ಲಿಗಳಿದ್ದರೂ ಅದರಲ್ಲಿ ನೀರು ಬರಲು ಕೆಲವೊಮ್ಮೆ ಬರೋಬ್ಬರಿ ಎರಡು ತಿಂಗಳವರೆಗೆ ಕಾಯಬೇಕಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಬೀದರ್‌ | ಕುಡಿಯುವ ನೀರಿನ ಸಮಸ್ಯೆ : ಸಹಾಯವಾಣಿ ಆರಂಭ

ಅಷ್ಟೊಂದು ದಿನಗಳಿಗೆ ಸಾಕಾಗುವಷ್ಟು ನೀರನ್ನು ಸಂಗ್ರಹಿಸಿಡುವುದು ಗ್ರಾಮದ ಜನರಿಗೆ ಎದುರಾಗಿರುವ ಸಂಕಷ್ಟ. ಕೆಲವೊಮ್ಮೆ 15 ದಿನಗಳಿಗೊಮ್ಮೆ ನೀರು ಬಂದರೆ, ಇನ್ನೂ ಕೆಲವೊಮ್ಮೆ 45-60 ದಿನಕ್ಕೊಮ್ಮೆ ನೀರು ಬರುತ್ತದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಇಲ್ಲಿ ಎಷ್ಟೋ ಮನೆಗಳಿಗೆ ಬೀಗವಿಲ್ಲ, ಆದರೆ ನೀರಿನ ಟ್ಯಾಂಕ್‌ಗಳಿಗೆ ಮಾತ್ರ ಬೀಗ ಹಾಕಲಾಗಿದೆ ಎಂದು ಮಾಧ್ಯಮಕ್ಕೆ ಉಗ್ ಗ್ರಾಮದ ನಿವಾಸಿ ಚಂದಾ ವಾಕಟೆ ಎಂಬವರು ಹೇಳಿದ್ದಾರೆ.

ಇನ್ನು ಈ ಪ್ರದೇಶದ ನೀರಿನ ಸಮಸ್ಯೆಗಳನ್ನು ಪರಿಹರಿಸಲು, ಆಡಳಿತವು 84 ಖೇಡಿ ಯೋಜನೆಯನ್ನು ಪರಿಚಯಿಸಿದೆ. ಆದರೆ ನೀರಿನ ಪೂರೈಕೆಗೆ ಸರಿಯಾದ ಯೋಜನೆ ಇನ್ನೂ ರೂಪಿಸಿಲ್ಲ. ಅನೇಕರು ಟ್ಯಾಂಕರ್‌ಗೆ 600 ರೂಪಾಯಿಗಳಂತೆ ಪಾವತಿಸಿ ಟ್ಯಾಂಕರ್‌ಗಳಿಂದ ನೀರು ಖರೀದಿಸಬೇಕಾದ ಸ್ಥಿತಿಯಿದೆ.

ಇನ್ನು ಮಹಾರಾಷ್ಟ್ರದ ಯವತ್‌ಮಲ್ ಜಿಲ್ಲೆಯಲ್ಲೂ ಇದೇ ಸ್ಥಿತಿ ಎದುರಾಗಿದೆ. ಇಲ್ಲಿ ಹಟ್ಟಿಗಳಲ್ಲಿ ವಾಸಿಸುವ ಪಾರ್ದಿ ಸಮುದಾಯದವರು ನೀರಿಗಾಗಿ ತಮ್ಮ ಜೀವವನ್ನೇ ಪಣಕಿಡಬೇಕಾಗಿದೆ. ಇತ್ತೀಚೆಗೆ ಪಾರ್ದಿ ಮಹಿಳೆಯೊಬ್ಬರು ಆಳವಾದ ಬಾವಿಗೆ ಇಳಿದು ಕೊಳಕು ನೀರನ್ನು ಸಂಗ್ರಹಿಸುತ್ತಿರುವ ವಿಡಿಯೋ ಕೂಡಾ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಈ ಬಾವಿಯಲ್ಲಿ ಹಾವುಗಳು, ಚೇಳುಗಳೂ ಇರುತ್ತದೆ. ಅಷ್ಟು ಮಾತ್ರವಲ್ಲದೆ ಬಾವಿಗಿಳಿಯುವಾಗ ಬೀಳುವ ಅಪಾಯವೂ ಇದೆ. ಆದರೆ ನೀರಿನ ಅನಿವಾರ್ಯತೆ ಮಹಿಳೆಯರು ಈ ಆಪತ್ತಿಗೆ ತಮ್ಮನ್ನು ತಾವು ನೂಕುವಂತೆ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...